CHITRADURGA NEWS | 11 OCTOBER 2026
ಚಿತ್ರದುರ್ಗ: ದಸರಾ ನವರಾತ್ರಿಯ ಮೊದಲ ದಿನವಾದ ಭಾನುವಾರ ನಗರದ ಪೊಲೀಸ್ ಠಾಣೆ ಆವರಣದಲ್ಲಿರುವ ಕಣಿವೆಮಾರಮ್ಮ ದೇವಿಗೆ ಗಾಯತ್ರಿದೇವಿ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಇದನ್ನೂ ಓದಿ: ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
ವಿವಿಧ ಬಗೆಯ ಹೂವು, ಹಾರ ಹಾಗೂ ಹಸಿರು ಪತ್ರೆಗಳಿಂದ ಅಲಂಕೃತಗೊಂಡ ದೇವಿಯ ದರ್ಶನ ಪಡೆದ ನೂರಾರು ಭಕ್ತರು ಶ್ರದ್ಧಾ-ಭಕ್ತಿಯಿಂದ ಪೂಜೆ ಸಲ್ಲಿಸಿದರು.
ನವರಾತ್ರಿ ಅಂಗವಾಗಿ ಒಂಬತ್ತು ದಿನಗಳ ಕಾಲ ಕಣಿವೆಮಾರಮ್ಮ ದೇವಿಯನ್ನು ಪ್ರತಿದಿನ ಒಂದೊಂದು ರೂಪದಲ್ಲಿ ಅಲಂಕರಿಸಿ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ದೇವಿಯ ವಿವಿಧ ಅಲಂಕಾರಗಳ ದರ್ಶನ ಪಡೆಯಲು ಭಕ್ತರು ಆಗಮಿಸಲಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

