ಮುಖ್ಯ ಸುದ್ದಿ
Exam; ಗೆಜೆಟೆಡ್ ಪ್ರೋಬೇಷನರ್ಸ್ ಪರೀಕ್ಷೆ | ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

CHITRADURGA NEWS | 24 AUGUST 2024
ಚಿತ್ರದುರ್ಗ: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಗೆಜೆಟೆಡ್ ಪ್ರೋಬೇಷನರ್ಸ್ ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ(Exam)ಯು ಇದೇ ಆಗಸ್ಟ್ 27ರಂದು ಚಿತ್ರದುರ್ಗ ನಗರದ 24 ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.
ಕ್ಲಿಕ್ ಮಾಡಿ ಓದಿ: Protest: ಸಿದ್ದರಾಮಯ್ಯ ಹಠಾವೋ ದಲಿತ್ ಬಚವೋ | 28ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ ಹೋರಾಟ

ಪರೀಕ್ಷಾ ಕೇಂದ್ರಗಳಲ್ಲಿನ ಅವ್ಯವಹಾರ ತಡೆಗಟ್ಟುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿ ಟಿ.ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.
ಪರೀಕ್ಷೆ ನಡೆಯುವ ದಿನಾಂಕದಂದು ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿನ ಜೆರಾಕ್ಸ್ ಅಂಗಡಿ ಹಾಗೂ ಕಂಪ್ಯೂಟರ್ ಇಂಟರ್‍ನೆಟ್ ಕೇಂದ್ರಗಳನ್ನು ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ಮುಚ್ಚುವಂತೆ ಮತ್ತು ಪರೀಕ್ಷಾ ಕೇಂದ್ರಗಳಿಗೆ ಅಭ್ಯರ್ಥಿಯು ಯಾವುದೇ ಕಾರಣಕ್ಕೂ ಮೊಬೈಲ್ ಫೋನ್ ಹಾಗೂ ಇನ್ನಿತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರದಂತೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಆದೇಶಿಸಿದ್ದಾರೆ.
