
CHITRADURGA NEWS | 09 MARCH 2024
ಚಿತ್ರದುರ್ಗ: ಕನ್ನಡಿಗರ ಹೆಮ್ಮೆಯ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಾಮಾನ್ಯ ಸಭೆ ಮಾರ್ಚ್ 10 ಭಾನುವಾರ ಚಿತ್ರದುರ್ಗ ಜಿಲ್ಲೆ, ಹೊಳಲ್ಕೆರೆ ತಾಲೂಕು ಮಲ್ಲಾಡಿಹಳ್ಳಿಯಲ್ಲಿ ನಡೆಯಲಿದೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಕಸಾಪ ಜನರಲ್ ಬಾಡಿ ಮೀಟಿಂಗ್ ನಡೆಯುತ್ತಿರುವುದು ವಿಶೇಷವಾಗಿದ್ದು, ಮೊದಲ ಸಭೆ ಮಲ್ಲಾಡಿಹಳ್ಳಿಯಲ್ಲಿ ನಡೆಯುತ್ತಿರುವುದು ಇನ್ನೂ ವಿಶೇಷವಾಗಿದೆ.
ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಶೀಘ್ರದಲ್ಲೇ ವೇಳಾಪಟ್ಟಿ
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ್ ಜೋಷಿ ಅವರ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಲಿದ್ದು, ರಾಜ್ಯ, ನೆರೆ ರಾಜ್ಯ ಹಾಗೂ ಗಡಿ ರಾಜ್ಯಗಳ ಕಸಾಪ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ಮಾರ್ಚ್ 10 ಭಾನುವಾರ ಬೆಳಗ್ಗೆ 9 ಗಂಟೆಗೆ ಎಲ್ಲ ಜಿಲ್ಲೆಗಳ ಕಸಾಪ ಅಧ್ಯಕ್ಷರನ್ನು ಒಳಗೊಂಡ ಕಾರ್ಯಕಾರಿ ಸಮಿತಿಯ ಸಭೆ ಜರುಗಲಿದೆ. ಬೆಳಗ್ಗೆ 11ಕ್ಕೆ ಸಾಮಾನ್ಯ ಸಭೆ ನಡೆಯಲಿದೆ. ಈಗಾಗಲೇ ಸಾಮಾನ್ಯ ಸಭೆಯ ತಿಳುವಳಿಕೆ ಪತ್ರವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಜಾಲಾತಾಣದಲ್ಲಿ ಪ್ರಕಟಿಸಲಾಗಿದೆ.
ಇದನ್ನೂ ಓದಿ: ಮೊದಲ ಪಟ್ಟಿಯಲ್ಲಿ ಚಿತ್ರದುರ್ಗ ಅಭ್ಯರ್ಥಿ ಹೆಸರಿಲ್ಲ
ಈ ವಾರ್ಷಿಕ ಸಭೆಯಲ್ಲಿ ಹಿಂದಿನ ವರ್ಷದ ವಾರ್ಷಿಕ ಸಭೆಯ ದೃಢೀಕರಣ ಹಾಗೂ ಲೆಕ್ಕ ಪತ್ರಗಳ ಮಂಡನೆ ಸೇರಿದಂತೆ ಒಂಬತ್ತು ಅಂಶಗಳು ಕಾರ್ಯಸೂಚಿಯಲ್ಲಿವೆ.
ವಾರ್ಷಿಕ ಸಭೆಗೆ ಹಾಜರಾಗುವ ಸದಸ್ಯರು ಕಡ್ಡಾಯವಾಗಿ ಗುರುತಿನ ಕಸಾಪ ಪತ್ರ ತರಬೇಕು. ಭಾಗವಹಿಸುವ ಸದಸ್ಯರಿಗೆ ಊಟ, ವಸತಿ ಸೌಲಭ್ಯ ಒದಗಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ 9449510078, 9980383294, ಸಂಪರ್ಕಿಸಲು ಚಿತ್ರದುರ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ ಮನವಿ ಮಾಡಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
