CHITRADURGA NEWS | 08 OCTOBER 2026
ಚಿತ್ರದುರ್ಗ: ಜಿಲ್ಲೆಯಲ್ಲಿ ಬರಗಾಲ ಇರುವುದರಿಂದ ಗ್ರಾಮೀಣ ಭಾಗದ ಕೂಲಿಕಾರರು ಉದ್ಯೋಗ ಅರಸಿ ಬೇರೆ ಊರುಗಳಿಗೆ ವಲಸೆ ಹೋಗದೆ, ತಮ್ಮ ಸ್ವಂತ ಗ್ರಾಮಗಳಲ್ಲೇ ಲಭ್ಯವಿರುವ ‘ವಿಬಿ ರಾಮ್ ಜಿ‘ ಯೋಜನೆಯಡಿ ಕೆಲಸ ಮಾಡಿ ಆರ್ಥಿಕವಾಗಿ ಸದೃಢರಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಸ್. ಆಕಾಶ್ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಅಂತರ ಕಾಲೇಜು ಸಂಸ್ಕೃತಿ ಪುನಶ್ಚೇತನ ಶಿಬಿರ-ಸ್ಪರ್ಧೆ
ಮೊಳಕಾಲ್ಮುರು ತಾಲ್ಲೂಕಿನ ಬಿ. ಜಿ. ಕೆರೆ, ಕೋನಸಾಗರ, ತುಮಕೂರಲಹಳ್ಳಿ, ನಾಗಸಮುದ್ರ, ಚಿಕ್ಕೇರಹಳ್ಳಿ ಮತ್ತು ಹಾನಗಲ್ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಯೋಜನೆ ಅಡಿ ನಡೆಯುತ್ತಿರುವ ಕೆರೆ ಪುನಶ್ಚೇತನ ಕಾಮಗಾರಿ ಸ್ಥಳಗಳಿಗೆ ಗುರುವಾರ ಭೇಟಿ ನೀಡಿ ಅವರು ಪರಿಶೀಲನೆ ನಡೆಸಿದರು.
ಈ ವೇಳೆ ಮೊಬೈಲ್ ಆಪ್ ಮೂಲಕ ಕೂಲಿಕಾರರ ಎನ್.ಎಂ.ಎಂ.ಎಸ್ ಆನ್‍ಲೈನ್ ಹಾಜರಾತಿಯನ್ನು ಖುದ್ದಾಗಿ ಪರಿಶೀಲಿಸಿದ ಜಿ.ಪಂ ಸಿಇಒ, ಬಳಿಕ ಕೂಲಿಕಾರರ ಜಾಬ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್ ಪುಸ್ತಕಗಳನ್ನು ತಪಾಸಣೆ ನಡೆಸಿ ಕೂಲಿ ಹಣ ನಿಯಮಿತವಾಗಿ ಜಮೆಯಾಗುತ್ತಿದೆಯೇ ಎಂದು ವಿಚಾರಿಸಿದರು.
ಬಳಿಕ ಸ್ಥಳದಲ್ಲಿದ್ದ ಕೂಲಿಕಾರರೊಂದಿಗೆ ಸಂವಾದ ನಡೆಸಿ, ‘ಒಂದು ಆರ್ಥಿಕ ವರ್ಷದಲ್ಲಿ ಪ್ರತಿ ಕುಟುಂಬಕ್ಕೆ 125 ದಿನಗಳ ಉದ್ಯೋಗ ಖಾತರಿ ನೀಡಲಾಗುತ್ತಿದೆ. ಲಿಂಗ ತಾರತಮ್ಯವಿಲ್ಲದೆ ಪುರುಷ ಮತ್ತು ಮಹಿಳೆಯರಿಗೆ ದಿನಕ್ಕೆ ರೂ.382 ಸಮಾನ ಕೂಲಿ ನಿಗದಿಪಡಿಸಲಾಗಿದೆ.
ಇದನ್ನೂ ಓದಿ: ಅಂಚೆ ಸೇವೆಗಳ ದೂರು, ಸಲಹೆ ಸಲ್ಲಿಕೆಗೆ ಅ.9ರಂದು ಡಾಕ್ ಅದಾಲತ್
ಯೋಜನೆಯಡಿ ವೈಯಕ್ತಿಕ ಕಾಮಗಾರಿಗಳಿಗೂ ಆದ್ಯತೆ ನೀಡಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು. ಇನ್ನು ಉದ್ಯೋಗ ಚೀಟಿಗೆ ಇ-ಕೆವೈಸಿ ಮಾಡಿಸದವರು ತಕ್ಷಣವೇ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.
ಅಲ್ಲದೆ, ಕೆಲಸ ಮಾಡುವ ಸ್ಥಳಗಳಲ್ಲಿ ಕೂಲಿಕಾರರಿಗೆ ಕುಡಿಯುವ ನೀರು ಹಾಗೂ ನೆರಳಿನ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಸಮಯಕ್ಕೆ ಸರಿಯಾಗಿ ಕೂಲಿ ಹಣ ಜಮೆಯಾಗುವಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಮೊಳಕಾಲ್ಮುರು ತಾಲ್ಲೂಕು ಪಂಚಾಯತಿ ಇಒ ಹನುಮಂತಪ್ಪ, ತಾಲ್ಲೂಕು ಸಹಾಯಕ ನಿರ್ದೇಶಕ (ವಿ.ಬಿ.ಗ್ರಾ) ಗಣೇಶ್, ಜಿ.ಪಂ. ಎಡಿಪಿಸಿ ಮೋಹನ್ ಕುಮಾರ್, ತಾಲ್ಲೂಕು ತಾಂತ್ರಿಕ ಸಂಯೋಜಕ ದಿನೇಶ್, ಐಇಸಿ ಸಂಯೋಜಕ ದೇವರಾಜ್, ಎಂಐಎಸ್ ಸಂಯೋಜಕ ಮಧುಸೂದನ್ ಹಾಗೂ ಟಿಎಇ, ಬಿಎಫ್‍ಟಿ ಮತ್ತು ಕಾಯಕಮಿತ್ರರು ಹಾಜರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

