
CHITRADURGA NEWS | 18 JUNE 2024
ಚಿತ್ರದುರ್ಗ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ರಾಜಕೀಯ ಬೆರೆಸುವುದಿಲ್ಲ. ನೊಂದ ಕುಟುಂಬಕ್ಕೆ ಪರಿಹಾರ ಕಲ್ಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಶೀಘ್ರ ನಿರ್ಧಾರ ಕೈಗೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದರು.
ನಗರದ ವಿಆರ್‌ಎಸ್ ಬಡಾವಣೆಯ ರೇಣುಕಾಸ್ವಾಮಿ ನಿವಾಸಕ್ಕೆ ಮಂಗಳವಾರ ಭೇಟಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ ಬಿಜೆಪಿಯಿಂದ ₹ 2 ಲಕ್ಷ ನೆರವು ನೀಡಿದರು.
ಬಳಿಕ ಸುದ್ದಿಗಾರರ ಜತೆ ಮಾತನಾಡಿ, ‘ರೇಣುಕಾಸ್ವಾಮಿ ಹತ್ಯೆ ಅಮಾನವೀಯ ಕೃತ್ಯ. ನಾಗರೀಕ ಸಮಾಜದ ಯಾರೂ ಬೆಂಬಲಿಸಲು ಸಾಧ್ಯವಿಲ್ಲ. ಪ್ರತಿಯೊಬ್ಬರು ಘಟನೆಯನ್ನು ಅತ್ಯುಗ್ರವಾಗಿ ಖಂಡಿಸಬೇಕು’ ಎಂದರು.
ಕ್ಲಿಕ್ ಮಾಡಿ ಓದಿ: ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಯಾಗಿ ಕೆಲಸ ಮಾಡ್ತಿನಿ | ಸಂಸದ ಗೋವಿಂದ ಎಂ.ಕಾರಜೋಳ
‘ಈ ಹತ್ಯೆ ದೇಶದ ಎಲ್ಲೆಡೆ ಚರ್ಚೆ ಆಗುತ್ತಿದೆ. ತಂದೆ ತಾಯಿ, ಅವರ ಪತ್ನಿ ನೋಡಿದರೆ ದುಃಖ ಆಗುತ್ತದೆ. ಕುಟುಂಬಕ್ಕೆ ಧೈರ್ಯ ತುಂಬುವ ಕೆಲಸ ರಾಜ್ಯ ಸರ್ಕಾರದಿಂದ ಆಗಬೇಕು. ಪತ್ನಿಗೆ ಪರಿಹಾರ ಹಾಗೂ ಸರ್ಕಾರಿ ಉದ್ಯೋಗ ಕೊಡಬೇಕು’ ಎಂದು ಒತ್ತಾಯಿಸಿದರು.
‘ಪ್ರಕರಣದಲ್ಲಿ ಯಾರಿದ್ದಾರೆ ಎಲ್ಲವೂ ಬಯಲಿಗೆ ಬಂದಿದೆ. ತನಿಖೆ ಸರಿಯಾದ ರೀತಿಯಲ್ಲಿ ಆಗಬೇಕು. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು’ ಎಂದು ಆಗ್ರಹಿಸಿದರು.
ಸಂಸದ ಗೋವಿಂದ ಎಂ.ಕಾರಜೋಳ, ಶಾಸಕ ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಎಸ್.ತಿಪ್ಪೇಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ, ಮುಖಂಡರಾದ ಎಸ್.ಲಿಂಗಮೂರ್ತಿ, ಕೆ.ಟಿ.ಕುಮಾರಸ್ವಾಮಿ, ಜಿ.ಎಸ್.ಅನಿತ್ ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
