
CHITRADURGA NEWS | 16 JUNE 2026
ಚಿತ್ರದುರ್ಗ: ಕಾಂಗ್ರೆಸ್ ಎಸ್‌ಐಆರ್ ವಿರೋಧ ಮಾಡುತ್ತಿದೆ. ಈ ಹಿಂದೆ ಇದೇ ಕಾಂಗ್ರೆಸ್ ಮತಯಂತ್ರಗಳ ಬಗ್ಗೆಯೂ ಅನುಮಾನ ವ್ಯಕ್ತಪಡಿಸಿ ವಿರೋಧ ಮಾಡಿತ್ತು. ಆದರೆ, ಎಸ್‌ಐಆರ್ ಪ್ರಕ್ರಿಯೆ ಚುನಾವಣಾ ಆಯೋಗ ನಡೆಸುತ್ತಿರುವ ಸಂವಿಧಾನಾತ್ಮಕ ಪ್ರಕ್ರಿಯೆ ಇದಕ್ಕೆ ಸಹಕಾರ ನೀಡಬೇಕು ಎಂದು ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ತಿಳಿಸಿದರು.

ಇದನ್ನೂ ಓದಿ: ಚಿತ್ರದುರ್ಗ ಬಿಜೆಪಿ ಕಾರ್ಯಕರ್ತರಿಗೆ ಶಿವಮೊಗ್ಗದಲ್ಲಿ ಪ್ರಶಿಕ್ಷಣ ವರ್ಗ | ಬಿ.ವೈ.ವಿಜಯೇಂದ್ರ ಭಾಗೀ
ನಗರದ ಜಗಳೂರು ಮಹಾಲಿಂಗಪ್ಪ ಸಭಾಂಗಣದಲ್ಲಿ ನಡೆದ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರ ಹಾಗೂ ಶಕ್ತಿಕೇಂದ್ರ ಪ್ರಮುಖರ ವಿಶೇಷ ಸಭೆ ಉದ್ಘಾಟಿಸಿ ಮಾತನಾಡಿದರು.
ದೇಶದ ಹಲವು ರಾಜ್ಯಗಳಲ್ಲಿ ಎಸ್ಐಆರ್ ಪ್ರಕ್ರಿಯೆ ನಡೆಯುತ್ತಿದೆ. ಇದರಲ್ಲಿ ಲಕ್ಷಾಂತರ ವಲಸಿಗರು ಸಿಕ್ಕಿಬಿದ್ದಿದ್ದು, ಅವರ ನೊಂದಣಿಯನ್ನು ರದ್ದು ಮಾಡಲಾಗಿದೆ. ಈಗ ಕರ್ನಾಟಕದಲ್ಲಿ ಈ ಕಾರ್ಯ ಪ್ರಾರಂಭವಾಗಿದೆ. ಬೂತ್‍ಗಳಲ್ಲಿ, ನಿಮ್ಮ ಮನೆಯ ಸುತ್ತಮುತ್ತಲಿನ ಜನರು, ಪರಿಚಿತರ ಮತಗಳಿವೆಯೇ ಎನ್ನುವುದನ್ನು ಪರಿಶೀಲನೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಎಸ್‌ಐಆರ್ ಬಿಜೆಪಿ ಚುನಾವಣೆಯಲ್ಲಿ ಗೆಲ್ಲಲು ಮಾಡುತ್ತಿರುವ ಕುತಂತ್ರ ಎಂದು ಕಾಂಗ್ರೆಸ್ ಬೊಬ್ಬೆ ಹಾಕುತ್ತಿದೆ. ಈ ಬಗ್ಗೆ ಸರಿಯಾಗಿ ತಿಳಿಯದೆ ಅಪಪ್ರಚಾರ ಮಾಡುತ್ತಿದ್ದಾರೆ. ಈ ಬಗ್ಗೆ ಸಾರ್ವಜನಿಕರಿಗೆ ಸರಿಯಾದ ಮಾಹಿತಿ ನೀಡಬೇಕು ಎಂದರು.
ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಅಶಿಸ್ತಿಗೆ ಅವಕಾಶವಿಲ್ಲ | ಮುರುಳೀಧರ ಹಾಲಪ್ಪ ಎಚ್ಚರಿಕೆ
ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ, ಎಸ್.ಐ.ಆರ್ ಎನ್ನುವುದು ಕೇಂದ್ರ ಅಥವಾ ರಾಜ್ಯ ಸರ್ಕಾರ ಮಾಡುವ ಕಾರ್ಯವಲ್ಲ. ಅದು ಚುನಾವಣಾ ಆಯೋಗದ ಕಾರ್ಯವಾಗಿದೆ. ಇದರಲ್ಲಿ ಯಾರೂ ಹಸ್ತಕ್ಷೇಪ ಮಾಡಲು ಬರುವುದಿಲ್ಲ. ಸಂಪೂರ್ಣ ನಿರ್ವಹಣೆಯನ್ನು ಚುನಾವಣಾ ಆಯೋಗ ಮಾಡುತ್ತಿದೆ ಎಂದು ಸ್ಪಷ್ಟಪಡಿಸಿದರು.
ಈ ಪ್ರಕ್ರಿಯೆ ನಡೆಯುವಾಗ ನಮ್ಮ ವಾರ್ಡ್‌ನ ಮತದಾರರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಿ ಕೆಲಸ ಮಾಡಬೇಕು ಎಂದು ತಿಳಿಸಿದರು.
ಇದನ್ನೂ ಓದಿ: ವಿಷಯುಕ್ತ ಆಹಾರಕ್ಕಾಗಿ ಸಹಜ ಕೃಷಿ ಅನಿವಾರ್ಯ | ಐಕಾಂತಿಕ ರಾಘವ
ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ.ಸಿದ್ದಾರ್ಥ, ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಯಾದವ್, ಮುಖಂಡರಾದ ಸುರೇಶ್ ಸಿದ್ದಾಪುರ, ನಗರಾಧ್ಯಕ್ಷ ಎಚ್.ಎನ್.ಲೋಕೇಶ್, ಮುಖಂಡರಾದ ನಾಗರಾಜ್ ಬೇದ್ರೆ, ನವೀನ್ ಚಾಲುಕ್ಯ, ನಾಗರಾಜ್ ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
