CHITRADURGA NEWS | 13 OCTOBER 2026
ಚಿತ್ರದುರ್ಗ: ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಕೆ.ಎಂ. ಸುರೇಶ್ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಜಯಶಾಲಿಯನ್ನಾಗಿಸಬೇಕು ಎಂದು ಚುನಾವಣೆ ಉಸ್ತುವಾರಿ ಎಂ.ಸಿ. ರಘುಚಂದನ್ ಪದವೀಧರ ಮತದಾರರಲ್ಲಿ ಮನವಿ ಮಾಡಿದರು.
ಇದನ್ನೂ ಓದಿ: ರಾಷ್ಟ್ರಮಟ್ಟದ ಇನ್‌ಸ್ಪೈರ್ ಅವಾರ್ಡ್ ಸ್ಪರ್ಧೆಗೆ ಜಿಲ್ಲೆಯ ಐವರು ವಿದ್ಯಾರ್ಥಿಗಳು ಆಯ್ಕೆ
ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಉಪ್ಪರಿಗೇನಹಳ್ಳಿ, ಟಿ. ನುಲೇನೂರು, ಎಚ್.ಡಿ. ಪುರ, ಚಿತ್ರಹಳ್ಳಿ, ತೇಕಲವಟ್ಟಿ, ಕೊಳಹಾಳ್, ಕುಮಾರನಹಳ್ಳಿ, ಶಿವಗಂಗ, ನಂದನಹೊಸೂರು ಹಾಗೂ ಈಚಘಟ್ಟ ಗ್ರಾಮಗಳಿಗೆ ಮಂಗಳವಾರ ಭೇಟಿ ನೀಡಿದ ಅವರು, ಶಿಕ್ಷಕರು, ಪದವೀಧರರು ಮತ್ತು ಉಪನ್ಯಾಸಕರನ್ನು ಭೇಟಿಯಾಗಿ ಕೆ.ಎಂ. ಸುರೇಶ್ ಪರ ಮತಯಾಚಿಸಿದರು.
ಅಖಂಡ ಚಿತ್ರದುರ್ಗ ಜಿಲ್ಲೆಯ ಒಂಬತ್ತು ತಾಲ್ಲೂಕುಗಳ ಪದವೀಧರ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿ ಕೆ.ಎಂ. ಸುರೇಶ್ ಅವರನ್ನು ಗೆಲ್ಲಿಸಿದರೆ, ಹೊಳಲ್ಕೆರೆ ಶಾಸಕ ಡಾ. ಎಂ. ಚಂದ್ರಪ್ಪ ಅವರೊಂದಿಗೆ ಕೈಜೋಡಿಸಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ. ಅಲ್ಲದೆ, ಪದವೀಧರರ ಸಮಸ್ಯೆಗಳಿಗೆ ವಿಧಾನಸಭೆಯಲ್ಲಿ ಧ್ವನಿಯಾಗಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
ಜಿಲ್ಲೆಯ ಅಸ್ಮಿತೆ ಹಾಗೂ ಸ್ವಾಭಿಮಾನವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಅಕ್ಟೋಬರ್ 23ರಂದು ನಡೆಯಲಿರುವ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಕೆ.ಎಂ. ಸುರೇಶ್ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಬೇಕು ಎಂದು ರಘುಚಂದನ್ ಮನವಿ ಮಾಡಿದರು.
ಇದನ್ನೂ ಓದಿ: ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಆರಂಭ | ಕ್ವಿಂಟಾಲ್‌ಗೆ ₹8,343 ನಿಗದಿ
ಮತಯಾಚನೆಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಕುಮಾರಣ್ಣ, ದಾವಣಗೆರೆ ಜಿಲ್ಲಾ ಬಿಜೆಪಿಯ ಮಾಜಿ ಅಧ್ಯಕ್ಷ ರಾಜಶೇಖರ್, ಪ್ರವೀಣ್ ನಂದನಹೊಸೂರು, ಚಿತ್ರಹಳ್ಳಿ ದೇವಣ್ಣ, ದಾಸಯ್ಯನಹಟ್ಟಿ ರಮೇಶಣ್ಣ, ದ್ಯಾಪನಹಳ್ಳಿ ತಿಪ್ಪೇಶ್, ಪ್ರವೀಣ್ ಹಾಗೂ ಅರಸನಘಟ್ಟ ಸಂಜಯ್ ಸೇರಿದಂತೆ ಇತರರು ಭಾಗವಹಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

