
CHITRADURGA NEWS | 24 SEPTEMBER 2025
ಚಿತ್ರದುರ್ಗ: ಜಿ.ಆರ್.ಹಳ್ಳಿ ಹತ್ತಿರವಿರುವ ಜ್ಞಾನಗಂಗೋತ್ರಿ ವಿಶ್ವವಿದ್ಯಾಲಯವನ್ನು ಮೆಡಿಕಲ್ ಕಾಲೇಜಿಗೆ ನೀಡಿ ಬೆಂಗಳೂರು ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಜಿಲ್ಲಾಧಿಕಾರಿಗಳ ಹೊಸ ಕಟ್ಟಡಕ್ಕೆ ಜ್ಞಾನಗಂಗೋತ್ರಿ ಸ್ನಾತಕೋತ್ತರ ಕೇಂದ್ರವನ್ನು ಸ್ಥಳಾಂತರಿಸುವಂತೆ ಕರುನಾಡ ವಿಜಯಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿ ಉಪ ವಿಭಾಗಾಧಿಕಾರಿ ಮೂಲಕ ಮುಖ್ಯಮಂತ್ರಿ, ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಗೆ ಮನವಿ ಸಲ್ಲಿಸಿದರು.
ಇದನ್ನೂ ಓದಿ: ಪಿ.ರಘು ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾಗಿ ನೇಮಕ

ದ್ವಿತೀಯ ಪಿ.ಯು.ಸಿ.ಯಲ್ಲಿ ತೇರ್ಗಡೆಯಾಗುವ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವಿವಿಧ ವೈದ್ಯಕೀಯ ಶಿಕ್ಷಣ ಕೋರ್ಸ್‍ಗಳನ್ನು ಈ ಸಾಲಿನ ಶೈಕ್ಷಣಿಕ ವರ್ಷದಿಂದ ಪ್ರಾರಂಭಿಸಿ ದಾಖಲಾತಿಗೆ ಅನುಮತಿ ಕೊಡಬೇಕು. ಕೆಲವು ಖಾಸಗಿ ಕಾಲೇಜುಗಳಲ್ಲಿ ಅತಿ ಹೆಚ್ಚು ಶುಲ್ಕ ಪಾವತಿಸಿ ವೈದ್ಯಕೀಯ ಶಿಕ್ಷಣ ಪಡೆಯುವುದು ಬಡ ವಿದ್ಯಾರ್ಥಿಗಳಿಗೆ ಕಷ್ಟವಾಗುತ್ತದೆ.
ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ತೇರ್ಗಡೆಯಾಗುವ ಬಡ ವಿದ್ಯಾರ್ಥಿಗಳು ವೈದ್ಯಕೀಯ ಸಂಬಂಧಿ ಬೇರೆ ಬೇರೆ ಕೋರ್ಸ್‍ಗಳಿಗೆ ದಾಖಲಾತಿ ಪಡೆಯಲು ತುರ್ತಾಗಿ ಬಿಎಸ್ಸಿ. ಅಲೈಡ್ ಹೆಲ್ತ್ ಸೈನ್ಸ್, ಬಿಎಸ್ಸಿ. ಅನಸ್ತೇಶಿಯಾ ಮತ್ತು ಆಪರೇಷನ್ ಥಿಯೇಟರ್ ಟೆಕ್ನಾಲಜಿ, ಇನ್ನಿತರೆ ಕೋರ್ಸ್‍ಗಳನ್ನು ಮಂಜೂರು ಮಾಡುವಂತೆ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಜಿಲ್ಲಾಧಿಕಾರಿಯವರಲ್ಲಿ ಒತ್ತಾಯಿಸಿದರು.
ಇದನ್ನೂ ಓದಿ: ಜಾತಿ ಗಣತಿ ಬದಲಿಗೆ ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ ಸೌಲಭ್ಯ ನೀಡಲಿ | ತರಳಬಾಳು ಶ್ರೀ
ಕರುನಾಡ ವಿಜಯಸೇನೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಗ್ರಾಮಾಂತರ ಘಟಕದ ಅಧ್ಯಕ್ಷೆ ಕಮಲಮ್ಮ, ಉಪಾಧ್ಯಕ್ಷೆ ರತ್ನಮ್ಮ, ನಗರಾಧ್ಯಕ್ಷ ಅವಿನಾಶ್, ಮುಜಾಹಿದ್, ಜಗದೀಶ್, ಚಂದನ, ಶಶಿಧರ್, ಸುರೇಶ್, ಅಖಿಲೇಶ್, ವಿಜಯಬಾಬು ಭಾಗವಹಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
