
CHITRADURGA NEWS | 12 JUNE 2024
ಚಿತ್ರದುರ್ಗ: ರೇಣುಕಸ್ವಾಮಿ ಕೊಲೆ ಆಗಿದೆ ಎಂದು ದೆಹಲಿಯಲ್ಲಿದ್ದಾಗ ಸುದ್ದಿ ಕೇಳಿ ನೋವಾಯ್ತು. ಸಮಾಜದಲ್ಲಿ ಇಂಥ ಅಹಿತಕರ ಘಟನೆ ನಡೆಯಬಾರದು ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದರು.
ನಗರದ ವಿಆರ್‌ಎಸ್ ಬಡಾವಣೆಯ ರೇಣುಕಸ್ವಾಮಿ ನಿವಾಸಕ್ಕೆ ಬುಧವಾರ ಸಂಜೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಮಾತನಾಡಿದ ಅವರು, ‘ಯಾರು ಕೂಡಾ ಕಾನೂನು ಕೈಗೆತ್ತಿಕೊಳ್ಳಬಾರದು. ಸರ್ಕಾರದ ಇಂಥ ಪ್ರಕರಣ ಗಂಭೀರವಾಗಿ ತೆಗೆದುಕೊಳ್ಳಬೇಕು. ಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದು ಮನಸ್ಸಿಗೆ ಅಘಾತ ಆಗಿದೆ’ ಎಂದರು.
ಕ್ಲಿಕ್ ಮಾಡಿ ಓದಿ: ಚಿತ್ರದುರ್ಗದಲ್ಲಿ ಕೈಗಾರಿಕೆ ಸ್ಥಾಪಿಸಿ | ಕೇಂದ್ರ ಸಚಿವರಿಗೆ ಎಂ.ಸಿ.ರಘುಚಂದನ್ ಮನವಿ

‘ರಾಜ್ಯದಲ್ಲಿ ಇಂಥ ಘಟನೆ ಪದೇ ಪದೇ ನಡೆಯುತ್ತಿವೆ. ಸರ್ಕಾರ ಮತ್ತು ಕಾನೂನಿನ ಭಯ ಇಲ್ಲವಾಗಿದೆ. ಸರ್ಕಾರ ಇಂಥ ಪ್ರಕರಣವನ್ನ ವಿಶೇಷವಾಗಿ ತನಿಖೆ ನಡೆಸಬೇಕು. ಯಾರೇ ಎಷ್ಠು ದೊಡ್ಡವರಿದ್ದರು ಶಿಕ್ಷೆಯಾಗಬೇಕು. ತನಿಖೆಯಿಂದ ಸತ್ಯ ಹೊರಗೆ ಬರಬೇಕಿದೆ’ ಎಂದು ತಿಳಿಸಿದರು.
‘ರೇಣುಕಾಸ್ವಾಮಿ ಸಮಸ್ಯೆ ಮಾಡಿದ್ದರೆ ದೂರು ನೀಡಬಹುದಿತ್ತು. ಈ ಕೊಲೆ ಯಾರು ಕೂಡಾ ಸಹಿಸುವುದಿಲ್ಲ. ಮೃತರ ಕುಟುಂಬಕ್ಕೆ ಸರ್ಕಾರ ನ್ಯಾಯ ಒದಗಿಸಬೇಕಿದೆ. ಮೃತಳ ಪತ್ನಿಗೆ ಸರ್ಕಾರಿ ಕೆಲಸ ನೀಡಬೇಕು’ ಎಂದು ಒತ್ತಾಯಿಸಿದರು.
ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
