
CHITRADURGA NEWS | 07 NOVEMBER 2025
ಚಿತ್ರದುರ್ಗ: ರಾಷ್ಟ್ರಗೀತೆ, ನಾಡಗೀತೆಗೆ ಕೊಟ್ಟಷ್ಟು ಮಹತ್ವನ್ನು ವಂದೆ ಮಾತರಂ ಗೀತೆಗೂ ಕೊಡಬೇಕೆಂದು ಶಾಸಕ ಡಾ.ಎಂ.ಚಂದ್ರಪ್ಪ ತಿಳಿಸಿದರು.
ಇದನ್ನೂ ಓದಿ: ನ.11 ರಂದು ಒನಕೆ ಓಬವ್ವ ಜಯಂತಿ | ಜಾನಪದ ಕಲಾ ತಂಡಗಳೊಂದಿಗೆ ಭವ್ಯ ಮೆರವಣಿಗೆ

ಭಾರತೀಯ ಜನತಾಪಾರ್ಟಿ ಕಾರ್ಯಾಲಯದಲ್ಲಿ ವಂದೆಮಾತರಂ ಗೀತೆಯ 150 ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ದ ಕೆಲವೇ ಕೆಲವು ಮುಖಂಡರುಗಳು ಹೋರಾಡಿದ್ದಾರೆ. 150 ವರ್ಷಗಳ ಇತಿಹಾಸವಿರುವ ವಂದೆ ಮಾತರಂ ಗೀತೆಯನ್ನು ಕೇಳಿದರೆ ಪ್ರತಿಯೊಬ್ಬ ಭಾರತೀಯನಿಗೂ ಮೈರೋಮಾಂಚನಾಗುತ್ತದೆ.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಈ ಗೀತೆಗೆ ಹೆಚ್ಚಿನ ಮಹತ್ವ ಕೊಟ್ಟಿದೆ. 70 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರ ವಂದೆ ಮಾತರಂಗೆ ಪ್ರಾಮುಖ್ಯತೆ ಕೊಟ್ಟಿರಲಿಲ್ಲ. ಪಕ್ಷದ ಸೂಚನೆಯಂತೆ ಎಲ್ಲಾ ಕಡೆ ನಡೆಯುವ ಕಾರ್ಯಕ್ರಮಗಳಲ್ಲಿ ವಂದೆ ಮಾತರಂ ಗೀತೆಯನ್ನು ಕಾರ್ಯಕರ್ತರು ಕಡ್ಡಾಯವಾಗಿ ಹಾಡಬೇಕೆಂದು ಹೇಳಿದರು.
ಇದನ್ನೂ ಓದಿ: ಬೆಳಗಟ್ಟ ಸೂರ್ಯಯರಘಟ್ಟ ಸ್ವಾಮಿಯ ಎತ್ತಿನ ಜಾತ್ರೆ | ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ವಿಶೇಷ ಪೂಜೆ
ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಪ್ರಧಾನ ಕಾರ್ಯದರ್ಶಿ ಸುರೇಶ್, ಸಂಪತ್‍ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
