CHITRADURGA NEWS | 28 SEPTEMBER 2026
ಚಿತ್ರದುರ್ಗ: ಆಯುರ್ವೇದ ವೈದ್ಯ ಪದ್ಧತಿಯನ್ನು ಕಲಿಯುತ್ತಿರುವ ವಿದ್ಯಾರ್ಥಿಗಳು ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಿ ಉತ್ತಮ ವೈದ್ಯರಾಗಿ, ಬಡ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಬೇಕು ಎಂದು ದೇವರಾಜ ಅರಸ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಡಾ. ಎಂ. ಚಂದ್ರಪ್ಪ ಹೇಳಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 28 | ಸೂರ್ಯಕಾಂತಿ, ಶೇಂಗಾ ರೇಟ್….
ನಗರದ ದೇವರಾಜ ಅರಸ್ ಶಿಕ್ಷಣ ಸಂಸ್ಥೆಯ ಪ್ರಕೃತಿ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ 11ನೇ ವರ್ಷದ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಆಯುರ್ವೇದ ಪದ್ಧತಿಗೆ ಜನರಲ್ಲಿ ಅಪಾರ ವಿಶ್ವಾಸವಿದ್ದು, ಭವಿಷ್ಯದಲ್ಲಿ ಉತ್ತಮ ಆಯುರ್ವೇದ ವೈದ್ಯರಾದರೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಚಿಕಿತ್ಸೆಗಾಗಿ ತಮ್ಮನ್ನು ಸಂಪರ್ಕಿಸಲಿದ್ದಾರೆ. ಆದ್ದರಿಂದ ವಿದ್ಯಾರ್ಥಿಗಳು ತಮಗೆ ದೊರೆತಿರುವ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಅತ್ಯುತ್ತಮ ವೈದ್ಯರಾಗಬೇಕು ಎಂದು ಸಲಹೆ ನೀಡಿದರು.
ಲಾಭದ ಉದ್ದೇಶದಿಂದ ಆಯುರ್ವೇದ ಆಸ್ಪತ್ರೆ ಹಾಗೂ ಕಾಲೇಜನ್ನು ಆರಂಭಿಸಿಲ್ಲ. ಸೇವಾ ಮನೋಭಾವದಿಂದ ಸಂಸ್ಥೆಯನ್ನು ನಡೆಸಲಾಗುತ್ತಿದೆ. ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣಕ್ಕಾಗಿ ತಂದೆ-ತಾಯಿಗಳು ವಿಶ್ವಾಸವಿಟ್ಟು ಹಣ ವ್ಯಯಿಸುತ್ತಿದ್ದು, ಅವರ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ವಿದ್ಯಾಭ್ಯಾಸ ಮಾಡಬೇಕು ಎಂದರು.
ಆಯುರ್ವೇದ ಕಾಲೇಜಿನ ಪ್ರಾಂಶುಪಾಲರು ಹಾಗೂ ಅಧ್ಯಾಪಕರು ಮಲೇಶಿಯಾ ಸೇರಿದಂತೆ ವಿವಿಧ ದೇಶಗಳಲ್ಲಿನ ವೈದ್ಯಕೀಯ ವ್ಯವಸ್ಥೆಗಳನ್ನು ಅಧ್ಯಯನ ಮಾಡಿ, ಉತ್ತಮ ಅಂಶಗಳನ್ನು ಅಳವಡಿಸಿಕೊಳ್ಳಬೇಕು. ಆಯುರ್ವೇದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಅವರನ್ನು ಸಮರ್ಥ ವೈದ್ಯರನ್ನಾಗಿ ರೂಪಿಸುವ ಜವಾಬ್ದಾರಿ ಅಧ್ಯಾಪಕರ ಮೇಲಿದೆ ಎಂದು ಹೇಳಿದರು.
ಇದನ್ನೂ ಓದಿ: ರಂಗಾಪುರ ಋಷಿ ಗುರುಕುಲದಲ್ಲಿ ಅ.9ರಿಂದ ಮಕ್ಕಳ ಚೈತನ್ಯ ಶಿಬಿರ
ಸಮಾರಂಭದಲ್ಲಿ ದೇವರಾಜ ಅರಸ್ ಶಿಕ್ಷಣ ಸಂಸ್ಥೆಯ ಡೀನ್ ಅನಂತರಾಮು, ಪ್ರಾಂಶುಪಾಲ ಡಾ. ಎಸ್.ಬಿ. ನವಾಜ್, ಪಿ.ಎ.ಎಂ.ಸಿ.ಹೆಚ್. ಮಹಾಂತೇಶ್, ನರ್ಸಿಂಗ್ ಕಾಲೇಜಿನ ಪ್ರಾಚಾರ್ಯೆ ಡಾ. ಅಂಬುಜಾಕ್ಷಿ, ಡಾ. ಲಿಂಗರಾಜ್ ಹಾಗೂ ಆಯುರ್ವೇದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

