CHITRADURGA NEWS | 18 OCTOBER 2025
ಹೊಳಲ್ಕೆರೆ: ಪಠ್ಯದಷ್ಟೆ ಪಠ್ಯೇತರ ಚಟುವಟಿಕೆಗೂ ಪ್ರಾಮುಖ್ಯತೆ ನೀಡಿ ಆರೋಗ್ಯವಂತರಾಗಿರುವಂತೆ ವಿದ್ಯಾರ್ಥಿಗಳಿಗೆ ಶಾಸಕ ಡಾ.ಎಂ.ಚಂದ್ರಪ್ಪ ಕರೆ ನೀಡಿದರು.

ಇದನ್ನೂ ಓದಿ: ಆರೋಗ್ಯ ಕ್ಷೇತ್ರ ಇಂದು ಮಾಫಿಯವಾಗಿದೆ | ಇಮ್ಮಡಿ ಸಿದ್ದರಾಮೇಶ್ವರ ಶ್ರೀ
ಭರಮಸಾಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2025-26 ನೇ ಸಾಲಿನ ಪಠ್ಯೇತರ ಚಟುವಟಿಕೆಗಳ ಕಾರ್ಯಕ್ರಮ, ಭರಮಸಿರಿ ಸಂಚಿಕೆ-2 ಬಿಡುಗಡೆಗೊಳಿಸಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಅಧ್ಯಾಪಕರುಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿದಾಗ ಹೆಚ್ಚು ಹೆಚ್ಚು ಪ್ರಶಸ್ತಿಗಳನ್ನು ಪಡೆಯಬಹುದು.
ದಾವಣಗೆರೆ ವಿಶ್ವವಿದ್ಯಾನಿಲಯದಿಂದ ಪ್ರಥಮ ರ್ಯಾಂಕ್ ಪಡೆದವರಿಗೆ 50 ಸಾವಿರ ರೂ.ಗಳ ನಗದು ಬಹುಮಾನ ನೀಡುವುದಾಗಿ ಘೋಷಿಸಿದ್ದೆ. ಅದರಂತೆ ಪ್ರಥಮ ರ್ಯಾಂಕ್ ಗಳಿಸಿದ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯೋರ್ವರಿಗೆ ಐವತ್ತು ಸಾವಿರ ರೂ.ಗಳನ್ನು ಸ್ವಾತಂತ್ರ್ಯ ದಿನದಂದು ನೀಡಿದೆ.
ಇದನ್ನೂ ಓದಿ: ಅಡಿಕೆ ಧಾರಣೆ | ಅಕ್ಟೋಬರ್ 18 | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್
ನಮ್ಮ ವ್ಯಾಪ್ತಿಯ ಕಾಲೇಜಿನ ವಿದ್ಯಾರ್ಥಿಗಳು ಯಾರಾದರೂ ಪ್ರಥಮ ರ್ಯಾಂಕ್ ಪಡೆದರೆ ಒಂದು ಲಕ್ಷ ರೂ.ಗಳನ್ನು ನೀಡುವುದಾಗಿ ಶಾಸಕ ಡಾ.ಎಂ.ಚಂದ್ರಪ್ಪ ಘೋಷಿಸಿದರು.
1994 ರಲ್ಲಿ 10 ಎಕರೆ ಜಾಗ ಖರೀಧಿಸಿ ಈ ಕಾಲೇಜು ಮತ್ತು ಐಟಿಐ. ಕಾಲೇಜು ಕಟ್ಟಿಸಿದೆ. ಮಕ್ಕಳು ವ್ಯಕ್ತಿತ್ವ ರೂಪಿಸಿಕೊಳ್ಳಲು ಈ ಕಾಲೇಜು ಅತ್ಯುತ್ತಮವಾಗಿದೆ. ಇಲ್ಲಿನ ಬೋಧಕರು ಗುಣಮಟ್ಟದ ಪಾಠಗಳನ್ನು ಹೇಳಿಕೊಡುತ್ತಿದ್ದಾರೆ. ಶಿಕ್ಷಣದ ಜೊತೆ ಯೋಗ, ವ್ಯಾಯಾಮ, ಕ್ರೀಡೆಯಲ್ಲಿ ತೊಡಗಿಕೊಂಡು ಸದೃಢವಾಗಿರುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಎನ್.ಎಸ್.ಎಸ್. ಎಂದರೆ ಶ್ರಮದಾನ, ಸೇವಾ ಮನೋಭಾವನೆಯುಳ್ಳದ್ದು, ಈ ಕಾಲೇಜಿನ ಎನ್.ಎಸ್.ಎಸ್.ಅಧಿಕಾರಿ ಪ್ರಶಸ್ತಿ ಪಡೆದಿರುವುದು ಎಲ್ಲರಿಗೂ ಕೀರ್ತಿ ತಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಇದನ್ನೂ ಓದಿ: ಗುರುಸಿದ್ದರಾಮೇಶ್ವರ ಜಯಂತಿ | ಪೂರ್ವಭಾವಿ ಸಭೆ
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಶಶಿಕಲಾ, ಎಸ್. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಡಿ.ವಿ.ಶರಣಪ್ಪ, ಭರಮಸಾಗರ ಬಿಜೆಪಿ ಮಂಡಲ ಅಧ್ಯಕ್ಷ ಎನ್.ಟಿ.ಬಸವರಾಜ್, ಲೋಕೇಶ್‍ನಾಯ್ಕ, ಕಾಲೇಜು ಅಭಿವೃದ್ದಿ ಸಂಸ್ಥೆ ಸದಸ್ಯರುಗಳಾದ ಮಂಜುನಾಥ್, ಕಲ್ಲೇಶ್, ಕರಿಯಮ್ಮ, ನಿರ್ಮಲ, ಬೋಧಕ, ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
