CHITRADURGA NEWS | 21 JUNE 2024
ಚಿತ್ರದುರ್ಗ: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರಿಗೂ ಶಿಕ್ಷೆಯಾಗಬೇಕೆಂದು ಎಂದು ಕರುನಾಡ ವಿಜಯಸೇನೆಯ ಜಿಲ್ಲಾ ಅಧ್ಯಕ್ಷ ಕೆ.ಟಿ. ಶಿವಕುಮಾರ್ ಒತ್ತಾಯಿಸಿದರು.
ಇದನ್ನೂ ಓದಿ: ಮಲ್ಲಿಕಾರ್ಜುನ ಜಗದ್ಗುರುಗಳ ಸ್ಮರಣೋತ್ಸವ | ಎಸ್‍ಜೆಎಂ ವಿದ್ಯಾಪೀಠ ಸಂಸ್ಥಾಪನಾ ದಿನಾಚರಣೆಗೆ ತೀರ್ಮಾನ
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕರುನಾಡ ವಿಜಯಸೇನೆ ಶುಕ್ರವಾರ ಪ್ರತಿಭಟನೆ ನಡೆಯಿಸಿ ಜಿಲ್ಲಾಡಳಿತದ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೆ ಹದಿನೇಳು ಮಂದಿಯನ್ನು ಬಂಧಿಸಿರುವ ಪೊಲೀಸರು ಪ್ರಾಮಾಣಿಕವಾಗಿ ತನಿಖೆ ನಡೆಸುತ್ತಿದ್ದು, ನಟ ದರ್ಶನ್ ಸೇರಿದಂತೆ ಎಲ್ಲರಿಗೂ ಕಠಿಣ ಶಿಕ್ಷೆಯಾಗಬೇಕೆಂದು ಎಂದರು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೈವಾಡದಿಂದ ರೇಣುಕಾಸ್ವಾಮಿ ಕೊಲೆಯಾಗಿದ್ದು, ಈ ಪ್ರಕರಣದಲ್ಲಿ ಯಾರಿಗೂ ಜಾಮೀನು ಸಿಗಬಾರದು. ದರ್ಶನ್‍ರಿಂದ ಹಲವಾರು ಘಟನೆಗಳು ನಡೆಯುತ್ತಲೆ ಇವೆ. ದುಃಖತಪ್ತ ಕುಟುಂಬಕ್ಕೆ ನ್ಯಾಯ ಸಿಗಬೇಕಾದರೆ ಎಲ್ಲರಿಗೂ ಉಗ್ರ ಶಿಕ್ಷೆಯಾಗಬೇಕೆಂದು ಕೆ.ಟಿ.ಶಿವಕುಮಾರ್ ಆಗ್ರಹಿಸಿದರು.
ಇದನ್ನೂ ಓದಿ: ಮೋಡ ಮುಸುಕಿದ ವಾತಾವರಣ | ಮೆಕ್ಕೆಜೋಳಕ್ಕೆ ಲದ್ದಿ ಹುಳು ಕಾಟ
ಕರುನಾಡ ವಿಜಯಸೇನೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಕಾರ್ಯದರ್ಶಿ ಜಗದೀಶ್, ಅಣ್ಣಪ್ಪ, ನಿಸಾರ್ ಅಹಮದ್, ಮಧುಸೂದನ್, ತಿಪ್ಪೇಸ್ವಾಮಿ, ನಾಗರಾಜ್‍ಮುತ್ತು, ಅಖಿಲೇಶ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
