ಮುಖ್ಯ ಸುದ್ದಿ
ಚುನಾವಣೆಗೆ ಮುನ್ನಾ ಹೇಳಿದ್ದ 6ನೇ ಗ್ಯಾರೆಂಟಿ ಕೊಡಿ | ಅಂಗನವಾಡಿ ಕಾರ್ಯರ್ತೆಯರು, ಸಹಾಯಕಿಯರ ಪ್ರತಿಭಟನೆ

CHITRADURGA NEWS | 21 FEBRUARY 2024
ಚಿತ್ರದುರ್ಗ: ಪ್ರಸಕ್ತ ಬಜೆಟ್ ನಲ್ಲಿ ಅಂಗನವಾಡಿ ಕಾರ್ಯರ್ತೆಯರು ಹಾಗೂ ಸಹಾಯಕಿಯರಿಗೆ 6ನೇ ಗ್ಯಾರಂಟಿಯಾಗಿ ಗೌರವ ಧನ ಹೆಚ್ಚಿಸುವಂತೆ ಎಐಟಿಯುಸಿ ವತಿಯಿಂದ ಒನಕೆ ಹೋಗೋ ವೃತದಲ್ಲಿ ಬುಧವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ದಾವಣಗೆರೆ ರಸ್ತೆಯಲ್ಲಿರುವ ಯೂನಿಯನ್ ಪಾರ್ಕ್ ನಿಂದ ಮೆರವಣಿಗೆ ಮೂಲಕ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾವನ್ನು ಕೂಗಿದರು.
ಇದನ್ನೂ ಓದಿ: ಜಿಲ್ಲಾ ಉಸ್ತುವಾರಿ ಸಚಿವರ ತವರು ಕ್ಷೇತ್ರದಲ್ಲಿ ಭುಗಿಲೆದ್ದ ಕಾಂಗ್ರೆಸ್ ಮುಖಂಡರ ಅಸಮಾಧನ
ಎಐಟಿಯು ಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿಸಿ ಸುರೇಶ್ ಬಾಬು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಜನ ಪರವಾಗಿದ್ದರು ವಿವಿಧ ಯೋಜನೆಗಳಲ್ಲಿ ಸ್ಕೀ0 ವರ್ಕರ್ಸ್ ಗಳಾಗಿ ದುಡಿಯುತ್ತಿರುವ ಮಹಿಳಾ ಸಮುದಾಯವನ್ನು ಕಡೆಗಣಿಸಲಾಗಿದೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ನ ಪ್ರಿಯಾಂಕ ಗಾಂಧಿ ಅಂಗನವಾಡಿ ಕಾರ್ಯಕರ್ತರಿಗೆ 15 ಸಾವಿರ ರೂ ಹಾಗೂ ಸಹಾಯಕಿಯರಿಗೆ 10 ಸಾವಿರ ರೂಗಳ ಗೌರವಧನ ನೀಡುವುದಾಗಿ ವಾಗ್ದಾನ ಮಾಡಿದ್ದರು. ಅದರಂತೆ ಗೌರವ ಧನ ಸಿಗುತ್ತಿಲ್ಲ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಇಡಿ ಗಂಟು ಮೂರು ಲಕ್ಷ ರೂಗಳನ್ನು ಕೊಡಬೇಕೆಂದು ಒತ್ತಾಯಿಸಿದರು.
ಇದನ್ನೂ ಓದಿ: 1 ಲಕ್ಷ ನಿರುದ್ಯೋಗಿಗಳಿಗೆ ಸುವರ್ಣಾವಕಾಶ| ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ| 500ಕ್ಕೂ ಅಧಿಕ ಖಾಸಗಿ ಕಂಪನಿಗಳು ಭಾಗಿ
ಕೇಂದ್ರ ಸರ್ಕಾರದಲ್ಲಿ ಮೀಸಲಿಟ್ಟಿದ 28 ಸಾವಿರ ಕೋಟಿ ರೂ ಬಜೆಟ್ ನಲ್ಲಿ 10 ಸಾವಿರ ಗಳನ್ನು ಕಡಿತಗೊಳಿಸಲಾಗಿದೆ. ಬಜೆಟ್ ಗಾತ್ರವನ್ನು 48 ಸಾವಿರ ಕೋಟಿ ರೂಗಳಿಗೆ ಹೆಚ್ಚಿಸಬೇಕಿತ್ತು ಕೇಂದ್ರ ಸರ್ಕಾರ ಮೂರು ಸಾವಿರದ ಐದುನೂರು ಹಾಗೂ ರಾಜ್ಯ ಸರ್ಕಾರ 8500 ರೂ ಗಳನ್ನು ಕೊಡುತ್ತಿದೆ ಇದರಿಂದ ಜೀವನ ಮಾಡೋದು ಕಷ್ಟ ಯಾವುದೇ ಭದ್ರತೆ ಇಲ್ಲದೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ದುಡಿಯುತ್ತಿದ್ದಾರೆ ಪ್ರಸಕ್ತ ಆರ್ಥಿಕ ಸಾಲಿನಲ್ಲಿ ಸ್ಕೀ0 ವರ್ಕರ್ಸ್ ಗಳ ಗೌರವ ಧನ ಹೆಚ್ಚಿಸಬೇಕೆಂದು ಆಗ್ರಿಸಿದರು.
ಇದನ್ನೂ ಓದಿ: ಸರ್ಕಾರದ ನಡೆಗೆ ಎಬಿವಿಪಿ ಆಕ್ರೋಶ| ಕ್ಷುಲ್ಲಕ ಕಾರಣ ಮುಂದಿಟ್ಟು ಗೊಂದಲ ಸೃಷ್ಟಿ
ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಶನ್ ಜಿಲ್ಲಾಧ್ಯಕ್ಷೆ ಎಸ್ ಭಾಗ್ಯಮ್ಮ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮುನಾ ಬಾಯಿ, ಖಜಾಂಚಿ ವಿನೋದಮ್ಮ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಂ ಸಾವಿತ್ರಮ್ಮ, ರಾಧಮ್ಮ, ರತ್ನಮ್ಮ ಎ ಐ ಟಿ ಯು ಸಿ ತಾಲೂಕು ಕಾರ್ಯದರ್ಶಿ, ಈ. ಸತ್ಯ ಕೀರ್ತಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
