CHITRADURGA NEWS | 07 MARCH 2024
ಚಿತ್ರದುರ್ಗ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯೋನ್ಮುಖವಾಗಿದ್ದು, ರಾಜ್ಯ, ರಾಷ್ಟ್ರ ಮಟ್ಟದ ವಿವಿಧ ಹಂತದ ನಾಯಕರು ಜಿಲ್ಲೆಗೆ ಬಂದು ಕಾರ್ಯಕರ್ತರು, ಮುಖಂಡರ ಸಭೆ, ಮೀಟಿಂಗ್ ನಡೆಸಲು ಮುಂದಾಗಿದ್ದಾರೆ.
ಈ ಪ್ರಯತ್ನದ ಭಾಗವಾಗಿ ಇಂದು ನಗರದ ತುರುವನೂರು ರಸ್ತೆಯಲ್ಲಿರುವ ಕಮ್ಮರೆಡ್ಡಿ ಸಮುದಾಯ ಭವನದಲ್ಲಿ ಬಿಜೆಪಿಯ ಬೂತ್ ಮಟ್ಟದ ಕಾರ್ಯಕರ್ತರು ಹಾಗೂ ಪ್ರಬುದ್ಧರ ಸಭೆ ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ: ಮುರುಘಾ ಮಠ, ಎಸ್ಜೆಎಂ ವಿದ್ಯಾಪೀಠದ ಅಧ್ಯಕ್ಷರಾಗಿ ಶಿವಯೋಗಿ ಕಳಸದ್
ಈ ಕಾರ್ಯಕ್ರಮಕ್ಕೆ ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಆಗಮಿಸುತ್ತಿದ್ದಾರೆ. ಇದರೊಟ್ಟಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ರಾಜ್ಯ ವಕ್ತಾರ ಕೆ.ಎಸ್.ನವೀನ್, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಎಸ್.ತಿಪ್ಪೇಸ್ವಾಮಿ ಮತ್ತಿತರರು ಭಾಗವಹಿಸಲಿದ್ದಾರೆ.
ಬೆಳಗ್ಗೆ 11 ಗಂಟೆ ವೇಳೆಗೆ ಚಿತ್ರದುರ್ಗಕ್ಕೆ ಆಗಮಿಸುವ ಗೋವಾ ಮುಖ್ಯಮಂತ್ರಿ ನೇರವಾಗಿ ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ನಿವಾಸಕ್ಕೆ ತೆರಳುವರು.
ಇದನ್ನೂ ಓದಿ: ಶಿವರಾತ್ರಿಗೆ ಅಬ್ಬರಿಸಲಿದ್ದಾನೆ ವರುಣ ದೇವ | ಭರ್ಜರಿ ಮಳೆಯ ಮುನ್ಸೂಚನೆ
11.45ಕ್ಕೆ ರೆಡ್ಡಿ ಸಮುದಾಯ ಭವನಕ್ಕೆ ಆಗಮಿಸಿ ಸಭೆಯಲ್ಲಿ ಭಾಗವಹಿಸಿ, ಇಲ್ಲಿಂದ ದಾವಣಗೆರೆಗೆ ತೆರಳಲಿದ್ದಾರೆ ಎಂದು ಅವರ ಆಪ್ತ ಮೂಲಗಳು ಮಾಹಿತಿ ನೀಡಿವೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
