ಚಿತ್ರದುರ್ಗ ನ್ಯೂಸ್
ಚಿತ್ರದುರ್ಗ: ಚಳ್ಳಕೆರೆ ನಗರದ ಬಟ್ಟೆ ಅಂಗಡಿಯೊಂದಕ್ಕೆ ನುಗ್ಗಿದ ಮೂರು ಜನರ ತಂಡ ವ್ಯಾಪಾರಿಯ ಕಣ್ಣಿಗೆ ಖಾರದಪುಡಿ ಎರಚಿ ಬಂಗಾರದ ಸರ ಕಳುವು ಮಾಡಿರುವ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.
ಚಳ್ಳಕೆರೆ ನಗರದ ವದನಂ ಟೆಕ್ಸ್ ಟೈಲ್ಸ್ ಮಾಲಿಕ ಗೊಂವಿಂದರಾಜು ಎಂಬುವವರ ಅಂಗಡಿಗೆ ನುಗ್ಗಿ ಖಾರದಪುಡಿ ಎರಚಿ ಬಂಗಾರದ ಸರ ಕಳುವು ಮಾಡಲಾಗಿದೆ.
ಬಂಗಾರದ ಸರ 45 ಗ್ರಾಂ ತೂಕವಿದ್ದು, ಸುಮಾರು ಎರಡೂವರೆ ಲಕ್ಷ ರೂ. ಮೌಲ್ಯ ಹೊಂದಿದೆ. ಬೈಕಿನಲ್ಲಿ ಮೂವರ ತಂಡ ಈ ಕೃತ್ಯ ಎಸಗಿದೆ. ಕಳುವು ಮಾಡಿದವರ ಚಲನವಲನ ಸಿ.ಸಿ.ಟಿವಿ ಕ್ಯಾಮಾರಾದಲ್ಲಿ ಸೆರೆಯಾಗಿದೆ.
ಸ್ಥಳಕ್ಕೆ ಚಳ್ಳಕೆರೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು, ಕಳ್ಳರ ಸೆರೆಗೆ ಬಲೆ ಬೀಸಿದ್ದಾರೆ.
(ಚಿತ್ರದುರ್ಗ ಜಿಲ್ಲೆಯ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ. https://chat.whatsapp.com/HOKagK96PgX5hCdhvtFLfw)
(ಚಿತ್ರದುರ್ಗದ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ Facebook page follow ಮಾಡಿ https://www.facebook.com/chitradurganews?mibextid=ZbWKwL)

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
