
CHITRADURGA NEWS | 19 NOVEMBER 2024
ಚಿತ್ರದುರ್ಗ: ತಾಲ್ಲೂಕಿನ ಭರಮಸಾಗರ ಹೋಬಳಿ ನೆಲ್ಲಿಕಟ್ಟೆ ಗ್ರಾಮದ ಡಾ.ನೆಲ್ಲಿಕಟ್ಟೆ ಎಸ್.ಸಿದ್ದೇಶ್ ಅವರಿಗೆ ಸುವರ್ಣ ಮಹೋತ್ಸವ ಪುರಸ್ಕಾರ(Golden Jubilee Award) ಲಭಿಸಿದೆ.
ಕ್ಲಿಕ್ ಮಾಡಿ ಓದಿ: ತಾಯಿ ಮಗಳು ಆತ್ಮಹತ್ಯೆ | ಚಿಕ್ಕಂದವಾಡಿಯಲ್ಲಿ ಧಾರುಣ ಘಟನೆ
ಸಾಹಿತ್ಯ, ಭಾಷೆ, ಸಂಸ್ಕೃತಿ, ಶಿಕ್ಷಣ ಕ್ಷೇತ್ರಗಳ ಸೇವೆಯನ್ನು ಗುರುತಿಸಿ ಕಸ್ತೂರಿ ಸಿರಿಗನ್ನಡ ವೇದಿಕೆ ಬೆಳಗಾವಿ ಇವರು ಸುವರ್ಣ ಮಹೋತ್ಸವ ಪುರಸ್ಕಾರ ನೀಡಿ ಗೌರವಿಸಿದೆ.
ಡಾ.ನೆಲ್ಲಿಕಟ್ಟೆ ಎಸ್.ಸಿದ್ದೇಶ್ ಅವರು ಕುವೆಂಪು ವಿಶ್ವವಿದ್ಯಾಲಯ ಕನ್ನಡ ಭಾರತಿ ವಿಭಾಗದಲ್ಲಿ ಸಹಪ್ರಾಧ್ಯಾಪಕರು ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕರು.
ಸೃಜನಶೀಲ ಮತ್ತು ಸೃಜನೇತರ ಸೇರಿದಂತೆ ಇಪ್ಪತೈದು ಕೃತಿಗಳನ್ನು ಪ್ರಕಟಿಸಿದ್ದಾರೆ.
ಕ್ಲಿಕ್ ಮಾಡಿ ಓದಿ: ಚಿತ್ರದುರ್ಗ ಮಾರುಕಟ್ಟೆ | ಮಂಗಳವಾರದ ಹತ್ತಿ ರೇಟ್ ಇಲ್ಲಿದೆ…
ರಾಜ್ಯ, ರಾಷ್ಟ್ರೀಯ ಮಟ್ಟದ ವಿಚಾರಸಂಕಿರಣ, ಕವಿಗೋಷ್ಟಿ, ಕಾರ್ಯಾಗಾರಗಳಲ್ಲಿ ವಿಚಾರ ಮಂಡಿಸಿದ್ದಾರೆ. ರಾಜ್ಯ, ರಾಷ್ಟ್ರ ಮಟ್ಟದ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

