Connect with us

    1 ಲಕ್ಷ ನಿರುದ್ಯೋಗಿಗಳಿಗೆ ಸುವರ್ಣಾವಕಾಶ | ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ | 500ಕ್ಕೂ ಅಧಿಕ ಖಾಸಗಿ ಕಂಪನಿಗಳು ಭಾಗಿ

    ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ

    ಮುಖ್ಯ ಸುದ್ದಿ

    1 ಲಕ್ಷ ನಿರುದ್ಯೋಗಿಗಳಿಗೆ ಸುವರ್ಣಾವಕಾಶ | ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ | 500ಕ್ಕೂ ಅಧಿಕ ಖಾಸಗಿ ಕಂಪನಿಗಳು ಭಾಗಿ

    CHITRADURGA NEWS | 21 FEBRUARY 2024

    ಚಿತ್ರದುರ್ಗ: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಫೆ.26 ಹಾಗೂ ಫೆ.27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.

    500ಕ್ಕೂ ಅಧಿಕ ಖಾಸಗಿ ಕಂಪನಿಗಳು ಮೇಳದಲ್ಲಿ ಪಾಲ್ಗೊಳ್ಳಲಿವೆ. 1 ಲಕ್ಷಕ್ಕೂ ಅಧಿಕ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ದೊರಕಲಿದೆ. ಚಿತ್ರದುರ್ಗ ಜಿಲ್ಲೆಯ ಎಲ್ಲಾ ವಿದ್ಯಾವಂತ ನಿರುದ್ಯೋಗಿ ಯುವಕ, ಯುವತಿಯರು ತಪ್ಪದೇ https://skillconnect.kaushalkar.com ವೆಬ್‍ಸೈಟ್‍ನಲ್ಲಿ ನೋಂದಣಿ ಮಾಡಿಕೊಂಡು, ಉದ್ಯೋಗ ಮೇಳದಲ್ಲಿ ಭಾಗವಹಿಸಿ, ವಿಫುಲ ಉದ್ಯೋಗವಕಾಶಗಳನ್ನು ಪಡೆದುಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಕರೆ ನೀಡಿದ್ದಾರೆ.

    ಇದನ್ನೂ ಓದಿ: ಡ್ರಗ್ಸ್ ದಂಧೆಕೋರರ ಮೇಲೆ ಪೊಲೀಸ್ ಇಲಾಖೆ ಸದಾ ಕಣ್ಣಿಟ್ಟಿದೆ

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಕೌಶಲ್ಯ ಮಿಷನ್ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶ ನೀಡುವ ಸದುದ್ದೇಶದಿಂದ ರಾಜ್ಯ ಸರ್ಕಾರ ಬೃಹತ್ ಉದ್ಯೋಗ ಮೇಳ ಆಯೋಜಿಸುತ್ತಿದೆ. 18 ವರ್ಷ ತುಂಬಿದ, ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ, ಡಿಪ್ಲೊಮೋ, ಇಂಜಿನಿಯರಿಂಗ್ ಸೇರಿದಂತೆ ಎಲ್ಲಾ ವಿದ್ಯಾರ್ಹತೆಯುಳ್ಳ ಉದ್ಯೋಗಾಕಾಂಕ್ಷಿಗಳು ಮೇಳದಲ್ಲಿ ಪಾಲ್ಗೊಳ್ಳಬಹುದು. ಸರ್ಕಾರ https://skillconnect.kaushalkar.com ವೆಬ್‍ಸೈಟ್ ಆರಂಭಿಸಿದೆ. ಉದ್ಯೋಗಾಕಾಂಕ್ಷಿಗಳು ಹಾಗೂ ಉದ್ಯೋಗದಾತರು ಇದರಲ್ಲಿ ನೊಂದಣಿ ಮಾಡಿ ಅರ್ಜಿ ಸಲ್ಲಿಸಬಹುದು.

    ಇದನ್ನೂ ಓದಿ: ಕೊಬ್ಬರಿ ಖರೀಧಿ ಕೇಂದ್ರಗಳಲ್ಲಿ ಹೊಸ ನೊಂದಣಿ ಪ್ರಾರಂಭ

    ಇದಕ್ಕಾಗಿಯೇ, 1800-599-9918 ಸಂಖ್ಯೆಯ ಸಹಾಯವಾಣಿ ಆರಂಭಿಸಲಾಗಿದೆ. ಬೆಂಗಳೂರು ಚಿತ್ರದುರ್ಗ ಜಿಲ್ಲೆಗೆ ಹತ್ತಿರವಿದ್ದು, ಉತ್ತಮ ಸಾರಿಗೆ ಸೌಲಭ್ಯವಿದೆ. ಯುವನಿಧಿಯಡಿ ಜಿಲ್ಲೆಯ ನೊಂದಣಿ ಮಾಡಿಕೊಂಡ ಅಭ್ಯರ್ಥಿಗಳಿಗೆ ಉದ್ಯೋಗ ಪಡೆಯಲು ಇದೊಂದು ಸದಾವಕಾಶವಾಗಿದೆ ಎಂದು ಅಪರ ಜಿಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದ್ದಾರೆ.

    ಜಿಲ್ಲೆಯ ಪದವಿ ಪೂರ್ವ, ಪದವಿ, ಐಟಿಐ, ಜಿ.ಟಿ.ಟಿ.ಸಿ, ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಸೇರಿದಂತೆ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು ಈಗಾಗಲೇ ತೇರ್ಗಡೆ ಹೊಂದಿದ ಹಾಗೂ ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳ ವಿವರವನ್ನು ಸ್ಕಿಲ್ ಕನೆಕ್ಟ್ ಫೋರ್ಟೆಲ್‍ನಲ್ಲಿ ನೋಂದಾಯಿಸಬೇಕು. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ತ್ಯಾಜ್ಯ ವಿಲೇವಾರಿ ವಾಹನಗಳಲ್ಲಿ ಉದ್ಯೋಗ ಮೇಳ ಕುರಿತಾದ ಜಿಂಗಲ್ಸ್ ಹಾಗೂ ಆಡಿಯೋ ರೆಕಾರ್ಡಿಂಗ್‍ಗಳನ್ನು ಹಾಕುವ ಮೂಲಕ ವ್ಯಾಪಕ ಪ್ರಚಾರ ನೀಡುವಂತೆ ಅಪರ ಜಿಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ನೀಡಿದರು.

    ಇದನ್ನೂ ಓದಿ: ವಾಣಿ ವಿಲಾಸ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಸಮೀಕ್ಷೆ

    ಸಮಾಜ ಕಲ್ಯಾಣ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಸ್ಟೆಲ್‍ಗಳಲ್ಲಿ ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳದ ಕುರಿತು ಮಾಹಿತಿ ನೀಡುವಂತೆ ಹಾಗೂ ಮೇಳದಲ್ಲಿ ಪಾಲ್ಗೊಳ್ಳಲು ಪ್ರೆರೇಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

    ಸಭೆಯಲ್ಲಿ ಕೃಷಿ ಜಂಟಿ ನಿರ್ದೇಶಕ ಮಂಜುನಾಥ್, ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರಕುಮಾರ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ವೇಮಣ್ಣ, ಕೌಶಲ್ಯ ಮಿಷನ್ ಅಭಿಯಾನ ವ್ಯವಸ್ಥಾಪಕ ಅತಿಕ್ ರೆಹಮಾನ್, ಲೀಡ್ ಬ್ಯಾಂಕ್ ಮಾನೇಜರ್ ತಿಪ್ಪೇಸ್ವಾಮಿ ಸೇರಿದಂತೆ ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಕೈಗಾರಿಕಾ ತರಬೇತಿ ಸಂಸ್ಥೆಯ ಮುಖ್ಯಸ್ಥರು, ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

    ಇದನ್ನೂ ಓದಿ: ಭೂಸೇನಾ ನೇಮಕಾತಿಗೆ ಅರ್ಜಿ ಆಹ್ವಾನ

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top