
CHITRADURGA NEWS | 21 FEBRUARY 2024
ಚಿತ್ರದುರ್ಗ: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಫೆ.26 ಹಾಗೂ ಫೆ.27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. 500ಕ್ಕೂ ಅಧಿಕ ಖಾಸಗಿ ಕಂಪನಿಗಳು ಮೇಳದಲ್ಲಿ ಪಾಲ್ಗೊಳ್ಳಲಿವೆ.
ಒಂದು ಲಕ್ಷಕ್ಕೂ ಅಧಿಕ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ದೊರಕಲಿದೆ. ಜಿಲ್ಲೆಯ ಎಲ್ಲಾ ವಿದ್ಯಾವಂತ ನಿರುದ್ಯೋಗಿ ಯುವಕ, ಯುವತಿಯರು ತಪ್ಪದೇ https:skillconnect.kaushalkar.com ವೆಬ್‌ಸೈಟ್‌ನಲ್ಲಿ ನೋಂದಣಿ ಮಾಡಿಕೊಂಡು, ಉದ್ಯೋಗ ಮೇಳದಲ್ಲಿ ಭಾಗವಹಿಸಿ, ವಿಫುಲ ಉದ್ಯೋಗವಕಾಶಗಳನ್ನು ಪಡೆದುಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಇದನ್ನೂ ಓದಿ: ಮೈನವಿರೇಳಿಸಿದ ಜೋಡೆತ್ತಿನ ಬಂಡಿ ಓಟ | ಶಿಳ್ಳೆ, ಕೇಕೆ ಹಾಕಿ ಜನರ ಸಂಭ್ರಮ

ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶ ನೀಡುವ ಸದುದ್ದೇಶದಿಂದ ರಾಜ್ಯ ಸರ್ಕಾರ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸುತ್ತಿದೆ. 18 ವರ್ಷ ತುಂಬಿದ, ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ, ಡಿಪ್ಲೊಮೋ, ಇಂಜಿನಿಯರಿಂಗ್ ಸೇರಿದಂತೆ ಎಲ್ಲಾ ವಿದ್ಯಾರ್ಹತೆಯುಳ್ಳ ಉದ್ಯೋಗಾಕಾಂಕ್ಷಿಗಳು ಮೇಳದಲ್ಲಿ ಪಾಲ್ಗೊಳ್ಳಬಹುದು.
ಸರ್ಕಾರ https://skillconnect.kaushalkar.com ವೆಬ್‍ಸೈಟ್ ಆರಂಭಿಸಿದೆ. ಉದ್ಯೋಗಾಕಾಂಕ್ಷಿಗಳು ಹಾಗೂ ಉದ್ಯೋಗದಾತರು ಇದರಲ್ಲಿ ನೊಂದಣಿ ಮಾಡಿ ಅರ್ಜಿ ಸಲ್ಲಿಸಬಹುದು. ಇದಕ್ಕಾಗಿಯೇ, 1800-599-9918 ಸಂಖ್ಯೆಯ ಸಹಾಯವಾಣಿ ಆರಂಭಿಸಲಾಗಿದೆ. ಬೆಂಗಳೂರು ಚಿತ್ರದುರ್ಗ ಜಿಲ್ಲೆಗೆ ಹತ್ತಿರವಿದ್ದು, ಉತ್ತಮ ಸಾರಿಗೆ ಸೌಲಭ್ಯವಿದೆ. ಯುವನಿಧಿಯಡಿ ಜಿಲ್ಲೆಯ ನೊಂದಣಿ ಮಾಡಿಕೊಂಡ ಅಭ್ಯರ್ಥಿಗಳಿಗೆ ಉದ್ಯೋಗ ಪಡೆಯಲು ಇದೊಂದು ಸದಾವಕಾಶವಾಗಿದೆ.
ಇದನ್ನೂ ಓದಿ: ಡ್ರಗ್ಸ್ ದಂಧೆಕೋರರ ಮೇಲೆ ಪೊಲೀಸ್ ಇಲಾಖೆ ಸದಾ ಕಣ್ಣಿಟ್ಟಿರುತ್ತದೆ | ಎಸ್ಪಿ ಧರ್ಮೇಂದರ್ ಕುಮಾರ್ ಮೀನಾ
ಜಿಲ್ಲೆಯ ಪದವಿ ಪೂರ್ವ, ಪದವಿ, ಐಟಿಐ, ಜಿ.ಟಿ.ಟಿ.ಸಿ, ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಸೇರಿದಂತೆ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು ಈಗಾಗಲೇ ತೇರ್ಗಡೆ ಹೊಂದಿದ ಹಾಗೂ ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳ ವಿವರವನ್ನು ಸ್ಕಿಲ್ ಕನೆಕ್ಟ್ ಫೋರ್ಟೆಲ್‍ನಲ್ಲಿ ನೋಂದಾಯಿಸಬೇಕು. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ತ್ಯಾಜ್ಯ ವಿಲೇವಾರಿ ವಾಹನಗಳಲ್ಲಿ ಉದ್ಯೋಗ ಮೇಳ ಕುರಿತಾದ ಜಿಂಗಲ್ಸ್ ಹಾಗೂ ಆಡಿಯೋ ರೆಕಾರ್ಡಿಂಗ್‍ಗಳನ್ನು ಹಾಕುವ ಮೂಲಕ ವ್ಯಾಪಕ ಪ್ರಚಾರ ನೀಡುವಂತೆ ಸೂಚನೆ ನೀಡಿದರು.
ಸಮಾಜ ಕಲ್ಯಾಣ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಸ್ಟೆಲ್‍ಗಳಲ್ಲಿ ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳದ ಕುರಿತು ಮಾಹಿತಿ ನೀಡುವಂತೆ ಹಾಗೂ ಮೇಳದಲ್ಲಿ ಪಾಲ್ಗೊಳ್ಳಲು ಪ್ರೆರೇಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇದನ್ನೂ ಓದಿ: ಎರಡು ವಾರದ ಹಿಂದೆ ಮಾಡಿದ್ದ ಕೊಬ್ಬರಿ ನೋಂದಣಿ ರದ್ದು | ಪುನಃ ಹೊಸದಾಗಿ ಪ್ರಾರಂಭ
ಕೃಷಿ ಜಂಟಿ ನಿರ್ದೇಶಕ ಮಂಜುನಾಥ್, ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರಕುಮಾರ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ವೇಮಣ್ಣ, ಕೌಶಲ್ಯ ಮಿಷನ್ ಅಭಿಯಾನ ವ್ಯವಸ್ಥಾಪಕ ಅತಿಕ್ ರೆಹಮಾನ್, ಲೀಡ್ ಬ್ಯಾಂಕ್ ಮಾನೇಜರ್ ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
