ಚಿತ್ರದುರ್ಗ ನ್ಯೂಸ್.ಕಾಂ: ಕನ್ನಡ ಪುಸ್ತಕ ಪ್ರಾಧಿಕಾರವು ಗಣರಾಜ್ಯೋತ್ಸವದ ಅಂಗವಾಗಿ 2024 ಜನವರಿ ತಿಂಗಳು ಪೂರ್ತಿ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಿದೆ.
ಪುಸ್ತಕ ಪ್ರಿಯರು ಈ ಅವಕಾಶವನ್ನು ಬಳಸಿಕೊಂಡು ಪುಸ್ತಕಗಳನ್ನು ರಿಯಾಯಿತಿ ದರದಲ್ಲಿ ಖರೀದಿಸಬಹುದಾಗಿದೆ.
ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ಸಂಪರ್ಕ ಸಂಖ್ಯೆ:080-22107705) ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ.
ಇದರ ಜೊತೆಗೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‍ಲೈನ್ www.kannadapustakapradhikara.com (ನಮ್ಮ ಪ್ರಕಟಣೆಗಳು ವಿಭಾಗ) ನಲ್ಲಿ ಕೂಡ ಈ ಶೇ.50 ರಿಯಾಯಿತಿ ದರದಲ್ಲಿ ಪುಸ್ತಕಗಳು ಲಭ್ಯವಿದೆ.
ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ.
ಇದನ್ನೂ ಓದಿ: ಆಗ್ನೇಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಬಿಡುಗಡೆ
ಇವುಗಳಲ್ಲಿ ವ್ಯಕ್ತಿಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 704 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ.
ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದಾಗಿದೆ ಎಂದು ಪ್ರಾಧಿಕಾರದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
