
CHITRADURGA NEWS | 05 DECEMBER 2025
ಚಿತ್ರದುರ್ಗ: ರಾಜ್ಯ ಸರ್ಕಾರಿ ನೌಕರರಿಗೆ ಸದ್ಯದಲ್ಲೇ ಶುಭ ಸುದ್ದಿ ಸಿಗಲಿದ್ದು, ಹಳೇ ಪಿಂಚಣಿ ಯೋಜನೆ(ಒಪಿಎಸ್) ಜಾರಿ ಸಂಬಂಧ ವರದಿ ಸಿದ್ಧವಾಗಿದೆ ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ ಮುದ್ದಜ್ಜಿ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ, ಹಳೆಯ ಪಿಂಚಣಿ ಯೊಜನೆಯನ್ನು ಜಾರಿಗೊಳಿಸುವ ಸಂಬಂಧ ಸರ್ಕಾರ ರಚಿಸಿರುವ ಸಮಿತಿಯು ಈಗಾಗಲೆ ವರದಿ ಸಿದ್ಧಪಡಿಸಿದ್ದು, ವರದಿಯನ್ನು ಒಂದು ವಾರದೊಳಗಾಗಿ ಸರ್ಕಾರಕ್ಕೆ ಸಲ್ಲಿಸುವ ಭರವಸೆ ನೀಡಲಾಗಿದೆ.

ಇದನ್ನೂ ಓದಿ: ಹೆತ್ತ ಮಗಳ ಮೇಲೆಯೇ ಅತ್ಯಾಚಾರ ಎಸಗಿದನಾ ರಾಕ್ಷಸ ತಂದೆ !
ರಾಜ್ಯ ಸರ್ಕಾರಿ ನೌಕರರಿಗೆ 2006 ರಿಂದ ಜಾರಿಯಲ್ಲಿರುವ ಹೊಸ ಪಿಂಚಣಿ ಯೋಜನೆ (ಎನ್‍ಪಿಎಸ್) ಹೋಗಲಾಡಿಸಿ, ಈ ಹಿಂದಿನ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೊಳಿಸುವ ಸಂಬಂಧ, ಒಪಿಎಸ್ ಜಾರಿಗೊಳಿಸಿರುವ ದೇಶದ ಇತರೆ ರಾಜ್ಯಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿ, ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರ ಸಮಿತಿ ರಚಿಸಿತ್ತು.
ಸಮಿತಿಯು ಈ ಕುರಿತ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ನೌಕರರ ಸಂಘ ಒತ್ತಾಯಿಸುತ್ತಲೆ ಬಂದಿತ್ತು. ಕಳೆದ ಡಿ. 03 ರಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ನೇತೃತ್ವದ ನಿಯೋಗವು ಎನ್‍ಪಿಎಸ್ ಸಮಿತಿಯ ಸದಸ್ಯರು ಹಾಗೂ ಆರ್ಥಿಕ ಇಲಾಖೆ ಕಾರ್ಯದರ್ಶಿಗಳಾದ ಡಾ. ಎಂ.ಟಿ. ರೇಜು ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ ಸಂದರ್ಭದಲ್ಲಿ, ಸಮಿತಿಯು ಈಗಾಗಲೆ ವರದಿ ಸಿದ್ಧಪಡಿಸಿದ್ದು, ಒಂದು ವಾರದೊಳಗೆ ಸಮಿತಿಯು ಸಭೆ ನಡೆಸಿ, ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ಭರವಸೆ ನೀಡಿರುತ್ತಾರೆ.
ಇದನ್ನೂ ಓದಿ: ಶೀಲ ಶಂಕಿಸಿ ಹೆಂಡತಿಯನ್ನೇ ಕೊಂದ ಪತಿಗೆ ಜೀವಾವಧಿ ಶಿಕ್ಷೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣೆ ಸಂದರ್ಭದಲ್ಲಿ ನೀಡಿರುವ ಭರವಸೆಯಂತೆ ಒಪಿಎಸ್ ಜಾರಿಗೊಳಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ನೌಕರರ ಸಂಘವು ಮನವಿ ಮಾಡುತ್ತದೆ ಎಂದಿದ್ದಾರೆ.
ಅಲ್ಲದೆ ರಾಜ್ಯ ಮಹಿಳಾ ಸರ್ಕಾರಿ ನೌಕರರಿಗೆ ಋತುಚಕ್ರ ರಜೆ ಸೌಲಭ್ಯ ಮಂಜೂರು ಮಾಡಿ ಆದೇಶ ಹೊರಡಿಸಿರುವ ಸರ್ಕಾರಕ್ಕೆ ನೌಕರರ ಸಂಘದ ಜಿಲ್ಲಾ ಘಟಕದ ವತಿಯಿಂದ ಅಭಿನಂದನೆ ಸಲ್ಲಿಸುತ್ತದೆ ಎಂದು ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಮಾಲತೇಶ ಮುದ್ದಜ್ಜಿ ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಡಿಸೆಂಬರ್ 07 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ | 12,813 ಅಭ್ಯರ್ಥಿಗಳ ನೊಂದಣಿ
ಪ್ರತಿ ತಿಂಗಳು ಒಂದು ದಿನದಂತೆ ಋತುಚಕ್ರ ರಜೆ ಸೌಲಭ್ಯವನ್ನು ರಾಜ್ಯದ 18 ರಿಂದ 52 ವರ್ಷದೊಳಗಿನ ಮಹಿಳಾ ಸರ್ಕಾರಿ ನೌಕರರಿಗೆ ಮಂಜೂರು ಮಾಡಿ ಆದೇಶ ಹೊರಡಿಸಿದ್ದು, ಇದನ್ನು ರಾಜ್ಯ ಸರ್ಕಾರಿ ನೌಕರರ ಸಂಘವು ಸ್ವಾಗತಿಸಿ, ಸರ್ಕಾರಕ್ಕೆ ಸಮಸ್ತ ರಾಜ್ಯ ಸರ್ಕಾರಿ ನೌಕರರ ಪರವಾಗಿ ಅಭಿನಂದನೆ ಸಲ್ಲಿಸುತ್ತದೆ ಎಂದು ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಮಾಲತೇಶ ಮುದ್ದಜ್ಜಿ ಅವರು ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
