CHITRADURGA NEWS | 12 JUNE 2026
ಚಿತ್ರದುರ್ಗ: ಚಿತ್ರದುರ್ಗ ಪ್ರಾದೇಶಿಕ ಸಾರಿಗೆ ಕಚೇರಿಯ ಮತ್ತು ಅನ್ಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಗಳಿಂದ ಸಾರಿಗೆ ಇಲಾಖೆ ವತಿಯಿಂದ ಮೋಟಾರು ವಾಹನ ಕಾಯ್ದೆ ಉಲ್ಲಂಘನೆ ಸಂಬಂಧ ವಾಹನ ಮಾಲೀಕರ ವಿರುದ್ಧ ಇಲಾಖಾ ಶಾಸನ ಕ್ರಮದಡಿ 1991-92ನೇ ಸಾಲಿನಿಂದ 2021-22ರ ಅವಧಿಯಲ್ಲಿ ದಾಖಲಾದ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜಿ ದಂಡ ಮೊತ್ತದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಿ ಇಳಿಮುಖಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಕೃಷಿ ಇಲಾಖೆಯಲ್ಲಿ ಸಿಬ್ಬಂದಿ ನೇಮಕಾತಿ | ಅರ್ಜಿ ಅಹ್ವಾನ
ಈ ಆದೇಶದನ್ವಯ ಇದೇ ಜೂನ್ 21 ರಿಂದ ಜುಲೈ 10 ರವರೆಗೆ ಕಚೇರಿ ಅವಧಿಯಲ್ಲಿ ಸಾರ್ವಜನಿಕ ರಜಾ ದಿನಗಳನ್ನು ಹೊರತುಪಡಿಸಿ, 1991-92ನೇ ಸಾಲಿನಿಂದ 2021-22ರ ಅವಧಿಯಲ್ಲಿ ಪ್ರಕರಣ ದಾಖಲೆಯಾಗಿರುವ ವಾಹನಗಳ ನೋಂದಣಿ ಮಾಲೀಕರು ತಮ್ಮ ವಾಹನಗಳ ಮೇಲೆ ದಾಖಲಾದ ಡಿಎಸ್ಎ ಪ್ರಕರಣಗಳ ವಿಲೇ ಸಂಬಂಧ ಕಚೇರಿಯನ್ನು ಸಂಪರ್ಕಿಸಿ ರಾಜಿ ದಂಡದ ಮೊತ್ತದ ಶೇ.50ರಷ್ಟು ರಿಯಾಯಿತಿ ಪಡೆದು ಪ್ರಕರಣಗಳನ್ನು ವಿಲೇಗೊಳಿಸಿಕೊಳ್ಳಬಹುದಾಗಿದೆ.
ಸಾರ್ವಜನಿಕರು, ಸರ್ಕಾರದ ಈ ಆದೇಶದ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಚಿತ್ರದುರ್ಗ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

