
CHITRADURGA NEWS | 20 APRIL 2024
ಚಿತ್ರದುರ್ಗ: ನಗರಸಭೆಯ ಆಸ್ತಿ ತೆರಿಗೆ, ನೀರಿನ ಕರ ಹಾಗೂ ಇತರೆ ಶುಲ್ಕಗಳನ್ನು ಮೊಬೈಲ್ ಹಾಗೂ ಆನ್‍ಲೈನ್ ಮೂಲಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ: ಕರ್ನಾಟಕಕ್ಕೆ ಮೋದಿ ಸರ್ಕಾರದ ಕೊಡುಗೆ ಚೊಂಬು | ಚುನಾವಣೆಯಲ್ಲಿ ಪಾಠ ಕಲಿಸಲು ಸುರ್ಜೆವಾಲಾ ಕರೆ
ಮೊಬೈಲ್ ಅಪ್ಲಿಕೇಷನ್‍ಗಳಾದ ಭೀಮ್, ಭಾರತ್ ಬಿಲ್ ಪೇ, ಫೋನ್ ಪೇ, ಪೇಟಿಎಂ, ಗೂಗಲ್ ಪೇ ಗಳ ಮುಖಾಂತರ ಸಾರ್ವಜನಿಕರು ಕರ ಪಾವತಿಸಬಹದು. ಇಲ್ಲವಾದರೆ ಖಜಾನೆ-2 ತಂತ್ರಾಂಶದಲ್ಲಿ ಚಲನ್ ಸೃಜಿಸಿ ಯೂನಿಯನ್ ಬ್ಯಾಂಕ್, ಕೆನರಾ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆಗಳಲ್ಲಿ ಪಾವತಿಸಬಹುದಾಗಿದೆ.ಇದರ ಹೊರತಾಗಿ ನಗರಸಭೆ ಕಚೇರಿಯಲ್ಲಿನ ಹೆಚ್.ಡಿ.ಎಫ್.ಸಿ. ಬ್ಯಾಂಕ್ ಕೌಂಟರ್‍ನಲ್ಲಿಯು ಸಹ ಕರ ಪಾವತಿಸಬಹುದಾಗಿದೆ.
ಇದನ್ನೂ ಓದಿ: ಕುಡಿಯುವ ನೀರಿನ ಕಾಮಗಾರಿಗಳಿಗೆ ಚುಕುರು
ಸಾರ್ವಜನಿಕರು ಈ ಅವಕಾಶಗಳನ್ನು ಬಳಸಿ ಸುಗಮವಾಗಿ ನಗರಸಭೆಯ ಕರಗಳನ್ನು ಪಾವತಿಸುವಂತೆ ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
