ಮುಖ್ಯ ಸುದ್ದಿ
Interview; ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ | ನೇರ ನೇಮಕಾತಿ ಸಂದರ್ಶನ ಸೆ.26ಕ್ಕೆ

CHITRADURGA NEWS | 24 SEPTEMBER 2024
ಚಿತ್ರದುರ್ಗ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಸೆ.26ರಂದು ಬೆಳಿಗ್ಗೆ 10.30 ರಿಂದ 3 ಗಂಟೆಯವರೆಗೆ ನೇರ ನೇಮಕಾತಿ ಸಂದರ್ಶನ(Interview) ಹಮ್ಮಿಕೊಳ್ಳಲಾಗಿದೆ.
ಕ್ಲಿಕ್ ಮಾಡಿ ಓದಿ: Hi-Tech Harvester Hub; ಕೃಷಿ ಇಲಾಖೆಯಿಂದ ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ ಅರ್ಜಿ ಅಹ್ವಾನ

ಈ ಮೇಳದಲ್ಲಿ 3ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ಹೊಂದಿರುವ 18 ರಿಂದ 30 ವರ್ಷದೊಳಗಿನ ಪುರುಷ ಅಥವಾ ಮಹಿಳಾ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳುವ ಸಂಬಂಧ ಭಾಗವಹಿಸಲಿದ್ದು, ಅಭ್ಯರ್ಥಿಗಳು 5 ಪ್ರತಿ ಬಯೋಡಾಟಾ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು, ಫೋಟೋಸ್ ಸ್ಭೆರಿದಂತೆ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಗರದ ಸ್ಟೇಡಿಯಂ ರಸ್ತೆ, ಹಳೇ ವೈಶಾಲಿ ಗೇಟ್ ಹತ್ತಿರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ದೂರವಾಣಿ ಸಂಖ್ಯೆ 7022459064, 8105619020, 7019755147 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
