CHITRADURGA NEWS | 26 JULY 2024
ಚಿತ್ರದುರ್ಗ: ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜುಲೈ 30ರಂದು ಬೆಳಿಗ್ಗೆ 10 ರಿಂದ 2 ಗಂಟೆಯವರೆಗೆ, ನೇರ ನೇಮಕಾತಿ ಸಂದರ್ಶನ(INTERVIEW)ವನ್ನು ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: Accident: ಲಾರಿ ಡಿಕ್ಕಿ ಹೆದ್ದಾರಿ ತಡೆಗೋಡೆ ಕುಸಿತ | ಚಾಲಕ ಮೃತ
ವಿವಿಧ ಖಾಸಗಿ ಕಂಪನಿಗಳು ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಪುರುಷ ಅಥವಾ ಮಹಿಳೆ ಅಭ್ಯರ್ಥಿಗಳನ್ನು ಸಂದರ್ಶನದಲ್ಲಿ ನೇರವಾಗಿ ಆಯ್ಕೆ ಮಾಡಿಕೊಳ್ಳಲಿವೆ. ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಯಾವುದೇ ಪದವಿ ಹೊಂದಿರುವ 18 ರಿಂದ 30ವರ್ಷದೊಳಗಿರುವ ಅಭ್ಯರ್ಥಿಗಳು ಭಾಗವಹಿಸಬಹುದು.
ಸಂದರ್ಶನಕ್ಕೆ ಆಗಮಿಸುವಾಗ 5 ಪ್ರತಿ ಬಯೋಡೇಟಾ, ವಿದ್ಯಾರ್ಹತೆ ಪ್ರಮಾಣ ಪತ್ರ ಹಾಗೂ ಪೋಟೋಗಳನ್ನು ತರಬೇಕು.
ಇದನ್ನೂ ಓದಿ: Renukaswamy murder case: ನಟ ದರ್ಶನ್ ಮನೆಗೆ ಬರೋ ವಿಚಾರ | ರೇಣುಕಾಸ್ವಾಮಿ ತಂದೆ ಫಸ್ಟ್ ರಿಯಾಕ್ಷನ್
ಹೆಚ್ಚಿನ ಮಾಹಿತಿಗಾಗಿ ನಗರದ ಸ್ಟೇಡಿಯಂ ರಸ್ತೆ ತಿರುವಿನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿಗೆ ಭೇಟಿ ನೀಡಬಹುದು. ಕಚೇರಿ ದೂರವಾಣಿ ಸಂಖ್ಯೆ 7022459064 8105619020, 9945587060 ಗೆ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
