CHITRADURGA NEWS | 25 JUNE 2024
ಚಿತ್ರದುರ್ಗ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಜೂನ್ 29ರಂದು ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಶನದಲ್ಲಿ ವಿವಿಧ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಪುರುಷ, ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿವೆ.
ಇದನ್ನೂ ಓದಿ: ರೇಣುಕಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ | ಸಕಾರಾತ್ಮಕವಾಗಿ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜೂನ್ 29ರಂದು ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ರವರೆಗೆ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿಯುಸಿ, ಡಿಪ್ಲೊಮಾ, ಐಟಿಐ ಅಥವಾ ಯಾವುದೇ ಪದವಿ ಹೊಂದಿರುವ 18 ರಿಂದ 30 ವರ್ಷದೊಳಗಿನವರು ಪಾಲ್ಗೊಳ್ಳಬಹುದು.
ಸಂದರ್ಶನಕ್ಕೆ ಆಗಮಿಸುವವರು 5 ಪ್ರತಿ ಬಯೋಡಾಟಾ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು ಹಾಗೂ ಇತ್ತೀಚಿನ ಪೋಟೋಗಳನ್ನು ತಮ್ಮಮೊಂದಿಗೆ ತರಬೇಕು.
ಇದನ್ನೂ ಓದಿ: ಫೈಓವರ್ ನಿರ್ಮಾಣಕ್ಕೆ ಕರುನಾಡ ವಿಜಯಸೇನೆ ಅಗ್ರಹ
ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ನಗರದ ಸ್ಟೇಡಿಯಂ ರಸ್ತೆಯಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ದೂರವಾಣಿ ಸಂಖ್ಯೆ 7022459064, 8310785143, 8105619020 ಹಾಗೂ 9945587060 ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
