CHITRADURGA NEWS | 16 JUNE 2026
ಚಿತ್ರದುರ್ಗ: ಚಿತ್ರದುರ್ಗ ನಗರದ ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ರಾಜ್ಯಶಾಸ್ತ್ರ ಸಹ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಬಿ.ಕೆ.ಬಸವರಾಜ ಅವರಿಗೆ ದಾವಣಗೆರೆ ವಿಶ್ವವಿದ್ಯಾನಿಲಯ ಪಿಹೆಚ್‍ಡಿ ಪದವಿ ನೀಡಿದೆ.
ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್ ಆಗಿ ಎಚ್.ರವಿಶಂಕರ್ ನಿಯುಕ್ತಿ
ದಾವಣಗೆರೆ ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಬಸವರಾಜ ಬೆನಕನಹಳ್ಳಿ ಅವರ ಮಾರ್ಗದರ್ಶನದಲ್ಲಿ “ಹಿಂದುಳಿದ ವರ್ಗಗಳ ರಾಜಕಾರಣ ಮತ್ತು ಗ್ರಾಮ ಪಂಚಾಯಿತಿಗಳು: ದಾವಣಗೆರೆ ಜಿಲ್ಲೆಯ ಒಂದು ಅಧ್ಯಯನ’ ಎಂಬ ವಿಷಯದ ಕುರಿತು ಸಂಶೋಧನೆ ನಡೆಸಿ ಮಹಾಪ್ರಬಂಧ ಮಂಡಿಸಿದ್ದಾರೆ.
ಬಿ.ಕೆ.ಬಸವರಾಜ ಅವರು ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕು ಬೆಣ್ಣೆಹಳ್ಳಿ ಗ್ರಾಮದ ಶಿಕ್ಷಕ ದಿ.ಬಿ.ಕರಿಯಪ್ಪ ಮತ್ತು ದಿ.ಕಮಲಮ್ಮನವರ ಕೊನೆಯ ಪುತ್ರರಾಗಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

