CHITRADURGA NEWS | 14 JANUARY 2026
ಚಿತ್ರದುರ್ಗ: ರಾಜ್ಯಮಟ್ಟದ ಗಣರಾಜ್ಯೋತ್ಸವ ಎನ್‍ಎಸ್‍ಎಸ್ ಘಟಕದ ಪಥ ಸಂಚಲನಕ್ಕೆ ಚಿತ್ರದುರ್ಗ ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ದ್ವಿತೀಯ ಬಿ.ಎ ವಿದ್ಯಾರ್ಥಿ ಎನ್.ಹರೀಶ ಆಯ್ಕೆಯಾಗಿದ್ದಾರೆ.
ರಾಷ್ಟ್ರೀಯ ಸೇವಾ ಯೋಜನಾ ಕೋಶದಿಂದ ಜನವರಿ 13 ರಿಂದ 26 ರವರೆಗೆ ಬೆಂಗಳೂರಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವಜನ ತರಬೇತಿ ಕೇಂದ್ರದಲ್ಲಿ ನಡೆಯುವ 2025-26ನೇ ರಾಜ್ಯಮಟ್ಟದ ಗಣರಾಜ್ಯೋತ್ಸವ ಎನ್‍ಎಸ್‍ಎಸ್ ಘಟಕದ ಪಥ ಸಂಚಲನಕ್ಕೆ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ಕೆರೆಯಲ್ಲಿ ಯುವಕನ ಶವ ಪತ್ತೆ | ಕೈ ಕಾಲು ಕಟ್ಟಿ ಮೂಟೆಗೆ ತುಂಬಿ ಎಸೆದಿರುವ ಶಂಕೆ
ಈ ವಿದ್ಯಾರ್ಥಿಗೆ ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲ ಡಾ.ಜೆ.ಕರಿಯಪ್ಪ ಮಾಳಿಗೆ, ಎನ್‍ಎಸ್‍ಎಸ್ ಕಾರ್ಯಕ್ರಮಾಧಿಕಾರಿಗಳಾದ ಡಾ.ವಿ.ಪ್ರಸಾದ್, ಬಿ.ಕೆ.ಬಸವರಾಜ ಸೇರಿದಂತೆ ಅಧ್ಯಾಪಕರು-ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
