By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅರ್ಜಿ ಅಹ್ವಾನ
    ಭೋವಿ ಯುವಕ-ಯುವತಿಯರಿಗೆ ಉಚಿತ ಟೈಲರಿಂಗ್ ತರಬೇತಿ | ಅರ್ಜಿ ಆಹ್ವಾನ
    5 hours ago
    Lecturer S. Basavaraju visits Chauluru Government Higher Primary Schoo
    ಚಟುವಟಿಕೆ ಆಧಾರಿತ ಕಲಿಕೆಯಿಂದ ಮಕ್ಕಳ ಸಾಮರ್ಥ್ಯ ವೃದ್ಧಿ | ಎಸ್.ಬಸವರಾಜು
    19 hours ago
    Sharanappa Saladapura presided over a meeting of officials from various departments and addressed the gathering
    ಪ್ರಾಥಮಿಕ ಶಾಲಾ ಹಂತದಿಂದಲೇ ಮದ್ಯ-ಮಾದಕ ವಸ್ತುಗಳ ದುಷ್ಪರಿಣಾಮದ ಅರಿವು ಅಗತ್ಯ | ಶರಣಪ್ಪ ಸಲಾದಪುರ
    19 hours ago
    vv sagara dam
    ವಿ.ವಿ.ಸಾಗರದಿಂದ ಸುವರ್ಣಮುಖಿ ನದಿಗೆ ನೀರು | ಸಾರ್ವಜನಿಕರಿಗೆ ಎಚ್ಚರಿಕೆ
    19 hours ago
    Sharanappa Saladapura, Chairman of the Alcohol Control Board
    ಮದ್ಯ-ಮಾದಕ ವಸ್ತುಗಳ ವಿರುದ್ಧ ಜಾಗೃತಿ | ಸೆ.23ರಂದು ಸಾಣೇಹಳ್ಳಿಯಲ್ಲಿ ಪೂರ್ವಭಾವಿ ಸಭೆ
    20 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    1 month ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
  • ತಾಲೂಕು
    ತಾಲೂಕುShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    6 days ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    2 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    4 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    1 week ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    2 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 17 | ವ್ಯಾಪಾರದಲ್ಲಿ ಹೊಸ ಹೂಡಿಕೆ, ದೀರ್ಘಾವಧಿ ಸಾಲಗಳಿಂದ ಮುಕ್ತಿ
    8 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 16 | ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣ ಬೇಡ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 15 | ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 14 | ಅನಿರೀಕ್ಷಿತ ಧನಲಾಭದ ಸೂಚನೆ, ಶುಭಸುದ್ದಿ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 13 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 15 | ಹತ್ತಿ ರೇಟ್ ಎಷ್ಟಿದೆ?
    2 days ago
    13 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 11 | ಸೂರ್ಯಕಾಂತಿ, ಶೇಂಗಾ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 10 | ಹತ್ತಿ ರೇಟ್…
    1 week ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 09 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 weeks ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    1 month ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    6 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    4 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 months ago
  • Life Style
    Life StyleShow More
    hibiscus flower face pack
    ಮೊಡವೆಗಳನ್ನು ಹೋಗಲಾಡಿಸಲು ದಾಸವಾಳ ಹೂವಿನ ಫೇಸ್ ಪ್ಯಾಕ್ ಹಚ್ಚಿ
    7 hours ago
    Ants
    ಮನೆಯಲ್ಲಿ ಇರುವೆಗಳ ಕಾಟ ಹೆಚ್ಚಾಗಿದೆಯೇ? ಹಾಗಾದ್ರೆ ನೀರಿಗೆ ಇದನ್ನು ಬೆರೆಸಿ ನೆಲವನ್ನು ಸ್ವಚ್ಛಗೊಳಿಸಿ
    8 hours ago
    burning sensation during urination
    ಮೂತ್ರ ವಿಸರ್ಜನೆಯ ಸಮಯದಲ್ಲಿ ಸುಡುವ ಸಂವೇದನೆ ಇದ್ದರೆ ಏನು ತಿನ್ನಬೇಕು ಮತ್ತು ಏನು ತಿನ್ನಬಾರದು? ತಿಳಿಯಿರಿ
    1 day ago
    Coconut oil and vitamin E
    ಕೂದಲಿಗೆ ತೆಂಗಿನ ಎಣ್ಣೆ ಮತ್ತು ವಿಟಮಿನ್ ಇ ಮಿಕ್ಸ್ ಮಾಡಿ ಹಚ್ಚುವುದು ಪ್ರಯೋಜನಕಾರಿಯೇ? 
    1 day ago
    Postpartum constipation
    ಹೆರಿಗೆಯ ನಂತರ ಮಲಬದ್ಧತೆ ಏಕೆ ಉಂಟಾಗುತ್ತದೆ? ತಿಳಿಯಿರಿ
    2 days ago
Reading: ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಬದ್ದ | ರಾಜ್ಯಾಧ್ಯಕ್ಷ ಹೆಚ್.ಎಂ.ರೇವಣ್ಣ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಬದ್ದ | ರಾಜ್ಯಾಧ್ಯಕ್ಷ ಹೆಚ್.ಎಂ.ರೇವಣ್ಣ

News Desk Chitradurga News
Last updated: 17 June 2026 18:48
News Desk Chitradurga News
3 months ago
Share
ಪತ್ರಿಕಾಗೋಷ್ಠಿ ಹೆಚ್.ಎಂ.ರೇವಣ್ಣ ಮಾತನಾಡಿದರು
ಪತ್ರಿಕಾಗೋಷ್ಠಿ ಹೆಚ್.ಎಂ.ರೇವಣ್ಣ ಮಾತನಾಡಿದರು
SHARE

CHITRADURGA NEWS | 17 JUNE 2026

ಚಿತ್ರದುರ್ಗ: ರಾಜ್ಯ ಸರ್ಕಾರ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಬದ್ದವಾಗಿದೆ. ಲೋಪದೋಷಗಳನ್ನು ಸರಿಪಡಿಸಿ, ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ತಲುಪಿಸುವ ಪರಿಷ್ಕರಣೆ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರಾಧಿಕಾರವು ಗಂಭೀರ ಕ್ರಮಗಳನ್ನು ಕೈಗೊಳ್ಳಲು ಸರ್ಕಾರಕ್ಕೆ ಸೂಕ್ತ ಸಲಹೆಗಳನ್ನು ನೀಡಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ. ರೇವಣ್ಣ ಸ್ಪಷ್ಟ ಪಡಿಸಿದರು.

ಇದನ್ನೂ ಓದಿ: ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ

ನಗರದ ಜಿಲ್ಲಾ ಪಂಚಾಯತಿ ಸಿಇಒ ಕಚೇರಿ ಸಭಾಂಗಣದಲ್ಲಿ ಬುಧವಾರ, ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ, ತಾಂತ್ರಿಕ ಸವಾಲುಗಳು ಮತ್ತು ಮುಂದಿನ ಸುಧಾರಣೆಗಳ ಕುರಿತು ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.

ಗ್ಯಾರಂಟಿ ಯೋಜನೆಗಳ ಸಮರ್ಪಕ ಜಾರಿಗಾಗಿ ಪ್ರಾಧಿಕಾರವು ತೀವ್ರ ನಿಗಾ ವಹಿಸಿದೆ. ಪ್ರಾಧಿಕಾರದ ರಾಜ್ಯಾಧ್ಯಕ್ಷನಾದ ಮೇಲೆ ರಾಜ್ಯದ 31 ಜಿಲ್ಲೆಗಳ ಪೈಕಿ 26 ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಪರಿಶೀಲನೆ ನಡೆಸಿದ್ದೇನೆ. ಜಿಲ್ಲಾ ಮಟ್ಟದಲ್ಲಿ ಸಿಇಒ ಹಾಗೂ ತಾಲೂಕು ಮಟ್ಟದಲ್ಲಿ ಇಒ ನೇತೃತ್ವದಲ್ಲಿ ಗ್ಯಾರಂಟಿ ಯೋಜನಗಳ ಅನುಷ್ಠಾನ ಹಾಗೂ ಪ್ರಗತಿ ಪರಿಶೀಲನೆಗಳನ್ನು ನಡೆಸಲಾಗುತ್ತಿದೆ. 

ಒಟ್ಟು 4,000 ಕ್ಕೂ ಹೆಚ್ಚು ಜನರ ಬೃಹತ್ ಉಸ್ತುವಾರಿ ಕಾರ್ಯಪಡೆ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ತೆರಿಗೆದಾರರ ಹಣ ವ್ಯರ್ಥವಾಗದೆ ಬಡವರ ಕೈಸೇರಬೇಕು ಮತ್ತು ಮಹಿಳೆಯರ ಸಬಲೀಕರಣವಾಗಬೇಕು ಎನ್ನುವುದೇ ಸರ್ಕಾರದ ಪ್ರಮುಖ ಆಶಯವಾಗಿದೆ. ಪರಿಷ್ಕರಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುತ್ತಿದೆ ಎಂದು ಶುದ್ದ ಸುಳ್ಳು ಎಂದು ಹೆಚ್.ಎಂ.ರೇವಣ್ಣ ಹೇಳಿದರು.

ಗೃಹಲಕ್ಷ್ಮಿ ಯೋಜನೆ ಲೋಪದೋಷ ನಿವಾರಣೆ:

ಗೃಹಲಕ್ಷ್ಮಿ ಯೋಜನೆಯಲ್ಲಿ ಮರಣ ಹೊಂದಿದ ಮಹಿಳೆಯರ ಖಾತೆಗೆ ಹಣ ವರ್ಗಾವಣೆಯಾಗುತ್ತಿದ್ದ ಗಂಭೀರ ಲೋಪವನ್ನು ಪ್ರಾಧಿಕಾರ 2025ರ ಸೆಪ್ಟಂಬರ್ ತಿಂಗಳಿನಲ್ಲಿ ಪತ್ತೆಹಚ್ಚಿತ್ತು. ಈ ಗೊಂದಲಗಳನ್ನು ಸರಿಪಡಿಸುವಂತೆ 31-10-2025 ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆಯಲಾಗಿದೆ. 

ಇದನ್ನೂ ಓದಿ: ವಿವಿಧ ಸೌಲಭ್ಯಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿ ಅಹ್ವಾನ

ರಾಜ್ಯದ ತೆರಿಗೆದಾರರ ಹಣ ವ್ಯರ್ಥವಾಗಬಾರದು, ಅರ್ಹ ಬಡವರಿಗೆ ತಲುಪಬೇಕು. ಮಹಿಳೆಯರ ಸಬಲೀಕರಣ ಹಾಗೂ ರಾಷ್ಟ್ರದ ಸಂಪತ್ತು ಹೆಚ್ಚಿಸುವುದು ಸರ್ಕಾರ ಆಶಯವಾಗಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಮುಂದಾಗಿರುವ ಕ್ರಮವನ್ನು ಹೆಚ್.ಎಂ.ರೇವಣ್ಣ ಸ್ವಾಗತಿಸಿದರು.

ಲೋಪದೋಷ ಬೆಳಕಿಗೆ ಬಂದರೂ, ಗ್ರಾಮೀಣ ಭಾಗದಲ್ಲಿ ಮರಣ ನೋಂದಣಿ ತಕ್ಷಣಕ್ಕೆ ನಡೆಯದೇ ಇರುವುದರಿಂದ ನಿಖರ ಅಂಕಿ-ಅಂಶಗಳ ಕೊರತೆ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ 2025ರ ಡಿಸೆಂಬರ್ ಹಾಗೂ 2026ರ ಮೇ ತಿಂಗಳಲ್ಲಿ ವಿಶೇಷ ಪರಿಶೀಲನಾ ಸಭೆಗಳನ್ನು ನಡೆಸಿ, ಈವರೆಗೆ ಮರಣ ಹೊಂದಿದ ಒಟ್ಟು 1,44,056 ಕುಟುಂಬದ ಮುಖ್ಯಸ್ಥರ ಖಾತೆಗಳನ್ನು ಗುರುತಿಸಿ ಹಣ ಸಂದಾಯವನ್ನು ಸ್ಥಗಿತಗೊಳಿಸಲಾಗಿದೆ. 

ಬ್ಯಾಂಕ್‌ಗಳಿಂದ ಮಾಹಿತಿ ಸಂಗ್ರಹಿಸುವಲ್ಲಿ ಕೆಲವು ತಾಂತ್ರಿಕ ಸವಾಲುಗಳು ಎದುರಾಗಿವೆ. ರಾಜ್ಯದ ಗಡಿ ಭಾಗದದಲ್ಲಿ ಫಲಾನುಭವಿಗಳ ಹಣ ಮಹಾರಾಷ್ಟ್ರ, ಆಂಧ್ರಪ್ರದೇಶ ಹಾಗೂ ತಮಿಳುನಾಡಿನ ಬ್ಯಾಂಕ್‌ಗಳ ಶಾಖೆಗಳಿಗೆ ಜಮೆಯಾಗಿರುವುದರಿಂದ, ಆಯಾ ಬ್ಯಾಂಕುಗಳ ಮುಖ್ಯ ಕಚೇರಿಗಳೊಂದಿಗೆ ಪತ್ರ ವ್ಯವಹಾರ ನಡೆಸಿ ಮಾಹಿತಿ ಸಂಗ್ರಹಿಸಲಾಗುತ್ತಿದೆ. 

ಇದನ್ನೂ ಓದಿ: ಚುನಾವಣಾ ಕರ್ತವ್ಯ ಲೋಪ | ಶಿಕ್ಷಕಿ ಅಮಾನತು ಮಾಡಿ ಡಿಸಿ ವೆಂಕಟೇಶ್ ಆದೇಶ 

ಮರಣ ಹೊಂದಿದವರ ಬ್ಯಾಂಕುಗಳ ಖಾತೆ ಜಮೆಯಾಗಿರುವ ಹಣವನ್ನು ಹಿಂಪಡೆಯಲು ಕ್ರಮ ವಹಿಸಲಾಗುತ್ತಿದೆ. ಏರ್‌ಟೆಲ್ ಪೇಮೆಂಟ್ಸ್ ಬ್ಯಾಂಕ್‌ನಂತಹ ಖಾತೆಗಳಲ್ಲಿ ಜಮೆಯಾದ ಹಣವನ್ನು ಮೃತರ ಅನರ್ಹರು ಬಳಸಿಕೊಂಡಿರುವ ಸಾಧ್ಯತೆಯಿದೆ. ಈ ಹಣವನ್ನು ವಾಪಸ್ ಪಡೆಯಲು ಸಹ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಹೆಚ್.ಎಂ.ರೇವಣ್ಣ ತಿಳಿಸಿದರು.

ಗೃಹಜ್ಯೋತಿ ಹೊರ ರಾಜ್ಯದವರ ಬಳಕೆಗೆ ಕಡಿವಾಣ:

ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪಡೆಯುವ ಉದ್ದೇಶದಿಂದ ಒಂದೇ ಮನೆಯನ್ನು ಕೃತಕವಾಗಿ ವಿಭಜಿಸಿರುವುದು ಹಾಗೂ ವಾಣಿಜ್ಯ ಬಳಕೆಯ ವಿದ್ಯುತ್ ಅನ್ನು ಗೃಹಬಳಕೆಯ ವ್ಯಾಪ್ತಿಗೆ ತರುತ್ತಿರುವ ಪ್ರಕರಣಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಕರ್ನಾಟಕದ ತೆರಿಗೆದಾರರ ಹಣ ಕೇವಲ ಇಲ್ಲಿನ ಅರ್ಹ ಜನರಿಗೆ ಮಾತ್ರ ತಲುಪಬೇಕು ಎಂಬ ಕಾರಣಕ್ಕೆ, ಹೊರರಾಜ್ಯದವರು ಯೋಜನೆಗಳ ಲಾಭ ಪಡೆಯುವುದನ್ನು ತಡೆಯಲು ಸರ್ಕಾರ ಚಿಂತನೆ ನಡೆಸಿದೆ. ಶಕ್ತಿ ಯೋಜನೆಯನ್ನು ಮತ್ತಷ್ಟು ವ್ಯವಸ್ಥಿತಗೊಳಿಸಲು ಮಹಿಳೆಯರಿಗೆ ಶೀಘ್ರದಲ್ಲೇ ಸ್ಮಾರ್ಟ್ ಕಾರ್ಡ್ಗಳನ್ನು ನೀಡಲಾಗುವುದು ಎಂದು ಹೆಚ್.ಎಂ.ರೇವಣ್ಣ ಹೇಳಿದರು.

ಜಿಲ್ಲೆಯ ಸಾಧನೆ ಬಗ್ಗೆ ಪ್ರಶಂಸೆ :

ಚಿತ್ರದುರ್ಗ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳು ಅತ್ಯಂತ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿವೆ ಎಂದು ಹೆಚ್.ಎಂ.ರೇವಣ್ಣ ಶ್ಲಾಘಿಸಿದರು. ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ, ಶಕ್ತಿ ಮತ್ತು ಅನ್ನಭಾಗ್ಯ ಯೋಜನೆಗಳ ಅಡಿಯಲ್ಲಿ ಜಿಲ್ಲೆಗೆ ಒಟ್ಟು ರೂ.3,783 ಕೋಟಿ ಹಣ ಬಿಡುಗಡೆಯಾಗಿದೆ. ಹಿಂದೆ ಇಡೀ ಜಿಲ್ಲೆಯ ಎಲ್ಲಾ ಇಲಾಖೆಗಳ ಒಟ್ಟು ವಾರ್ಷಿಕ ಬಜೆಟ್ ಹಂಚಿಕೆ ಸುಮಾರು ರೂ.1,600 ಕೋಟಿ ಇರುತ್ತಿತ್ತು. ಆದರೆ ಇಂದು ಕೇವಲ ಗ್ಯಾರಂಟಿ ಯೋಜನೆಗಳಿಗಾಗಿಯೇ ಜಿಲ್ಲೆಗೆ ರೂ.3,783 ಕೋಟಿ ಹಣ ಹರಿದುಬಂದಿದೆ. ಇದು ನೇರವಾಗಿ ಜನರ ಕೈ ಸೇರುತ್ತಿರುವ ಹಣವಾಗಿದೆ ಎಂದರು.

ಇದನ್ನೂ ಓದಿ: ನವೋದಯ ವಿದ್ಯಾಲಯದಲ್ಲಿ ಪ್ರಥಮ ಪಿಯು ವಿಜ್ಞಾನ ವಿಭಾಗದ ಪ್ರವೇಶ | ಅರ್ಜಿ ಆಹ್ವಾನ

ಈ ಐದೂ ಗ್ಯಾರಂಟಿಗಳಿಂದಾಗಿ ಪ್ರತಿ ಕುಟುಂಬಕ್ಕೆ ತಿಂಗಳಿಗೆ ಕನಿಷ್ಠ ರೂ. 5,000 ದಿಂದ 6,000 ವರೆಗೆ ಉಳಿತಾಯವಾಗುತ್ತಿದೆ. ಇದು ದೇಶದಲ್ಲೇ ಅತ್ಯಂತ ವಿಶಿಷ್ಟ ಹಾಗೂ ಯಶಸ್ವಿ ಕಾರ್ಯಕ್ರಮವಾಗಿದೆ. ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಯಾದರೆ ರಾಜ್ಯ ದಿವಾಳಿಯಾಗುತ್ತದೆ ಟೀಕೆಗಳು ಕೇಳಿಬಂದವು. ಆದರೆ, ಸರ್ಕಾರ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಮಾಡಿದೆ. 

ಇದೇ ಯೋಜನೆಗಳನ್ನು ನಕಲು ಮಾಡಿ ಜಾರಿಗೆ ತಂದ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದ ಸೇರಿದಂತೆ ಬೇರೆ ರಾಜ್ಯಗಳಲ್ಲಿ ಯೋಜನೆ ಸ್ಥಗತಿವಾಗಿವೆ. ಚುನಾವಣೆಯ ಗೆಲುವಿಗಾಗಿ ಯೋಜನೆ ಘೋಷಿಸಿ ನಂತರ ನಿಲ್ಲಿಸಲಾಗಿದೆ. ಆದರೆ ರಾಜ್ಯದಲ್ಲಿ ಪಕ್ಷಾತೀತವಾಗಿ, ಜಾತ್ಯತೀತವಾಗಿ ಎಲ್ಲಾ ವರ್ಗದ ಜನರಿಗೂ ಯೋಜನೆ ತಲುಪುತ್ತಿದೆ. ಯಾವುದೇ ಕಾರಣಕ್ಕೂ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಪರಿಷ್ಕರಣೆಯ ಮುಖ್ಯ ಉದ್ದೇಶ ಕೇವಲ ಪಾರದರ್ಶಕತೆ ಮತ್ತು ಉತ್ತರದಾಯಿತ್ವ ತರುವುದಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಚಿತ್ರದುರ್ಗ ಜಿಲ್ಲೆಯ ಅಧಿಕಾರಿಗಳು ಮತ್ತು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯು ರಾಜ್ಯದ 31 ಜಿಲ್ಲೆಗಳಲ್ಲೇ ಅತ್ಯುತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದು, ಜಿಲ್ಲೆಗೆ ಪ್ರಶಸ್ತಿ ಸಿಗುವ ಸಾಧ್ಯತೆ ಇದೆ ಎಂದು ಹೆಚ್.ಎಂ. ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸಿ 

ಇದೇ ವೇಳೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಹೆಚ್.ಎಂ.ರೇವಣ್ಣ ಎಸ್‌ಸಿಪಿ/ಟಿಎಸ್‌ಪಿ ಹಣ ದುರುಪಯೋಗದ ಆರೋಪವನ್ನು ನಿರಾಕರಿಸಿ, ದಲಿತ ಹಾಗೂ ಹಿಂದುಳಿದ ಸಮಾಜದ ಅಭಿವೃದ್ಧಿಗಾಗಿ ಬಜೆಟ್‌ನಲ್ಲಿ ನೇರ ಹಣ ಮೀಸಲಿಟ್ಟ ಏಕೈಕ ರಾಜ್ಯ ಕರ್ನಾಟಕ ಎಂದು ಸಮರ್ಥಿಸಿಕೊಂಡರು. ವರ್ಷಕ್ಕೆ 1.20 ಲಕ್ಷ ರೂಪಾಯಿಗಿಂತ ಹೆಚ್ಚು ಆದಾಯ ಹೊಂದಿರುವವರ ಬಿ.ಬಿ.ಎಲ್. ಕಾರ್ಡುನ್ನು ಮಾನದಂಡಗಳನ್ನು ಆಧಾರಿಸಿ ಕೇಂದ್ರ ಸರ್ಕಾರ ರದ್ದು ಮಾಡುತ್ತಿದೆ ಎಂದು ಉತ್ತರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿ.ಪಂ.ಸಿಇಒ ಡಾ.ಆಕಾಶ್, ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‌ಪೀರ್, ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಡಿ.ಎನ್.ಮೈಲಾರಪ್ಪ, ಜಿ.ಪಂ.ಸಿಪಿಓ ಗಾಯಿತ್ರಿ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsGuarantee schemeState Governmentಗ್ಯಾರಂಟಿ ಯೋಜನೆಚಿತ್ರದುರ್ಗಚಿತ್ರದುರ್ಗ ನ್ಯೂಸ್ರಾಜ್ಯ ಸರ್ಕಾರ
Share This Article
Facebook Email Print
Previous Article ವೈಷ್ಣವ ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
Next Article ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಸಮನ್ವಯ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ಜಿಲ್ಲೆಯ ಶಾಲೆ-ಕಾಲೇಜು, ದೇವಸ್ಥಾನ, ಸರ್ಕಾರಿ ಕಚೇರಿಗಳನ್ನು ತಂಬಾಕು ಮುಕ್ತಗೊಳಿಸಿ | ಜಿಲ್ಲಾಧಿಕಾರಿ 
Leave a Comment

Leave a Reply Cancel reply

Your email address will not be published. Required fields are marked *

ಅರ್ಜಿ ಅಹ್ವಾನ
ಭೋವಿ ಯುವಕ-ಯುವತಿಯರಿಗೆ ಉಚಿತ ಟೈಲರಿಂಗ್ ತರಬೇತಿ | ಅರ್ಜಿ ಆಹ್ವಾನ
ಮುಖ್ಯ ಸುದ್ದಿ
hibiscus flower face pack
ಮೊಡವೆಗಳನ್ನು ಹೋಗಲಾಡಿಸಲು ದಾಸವಾಳ ಹೂವಿನ ಫೇಸ್ ಪ್ಯಾಕ್ ಹಚ್ಚಿ
Life Style
Ants
ಮನೆಯಲ್ಲಿ ಇರುವೆಗಳ ಕಾಟ ಹೆಚ್ಚಾಗಿದೆಯೇ? ಹಾಗಾದ್ರೆ ನೀರಿಗೆ ಇದನ್ನು ಬೆರೆಸಿ ನೆಲವನ್ನು ಸ್ವಚ್ಛಗೊಳಿಸಿ
Life Style
today bhavishya
ದಿನ ಭವಿಷ್ಯ | ಸೆಪ್ಟೆಂಬರ್ 17 | ವ್ಯಾಪಾರದಲ್ಲಿ ಹೊಸ ಹೂಡಿಕೆ, ದೀರ್ಘಾವಧಿ ಸಾಲಗಳಿಂದ ಮುಕ್ತಿ
Dina Bhavishya
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up