Connect with us

ಸರ್ಕಾರಿ ನೌಕರರ ಬೇಡಿಕೆ ಈಡೇರಿಸಿ | ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಆಗ್ರಹ

ಮೊಳಕಾಳ್ಮೂರು

ಸರ್ಕಾರಿ ನೌಕರರ ಬೇಡಿಕೆ ಈಡೇರಿಸಿ | ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಆಗ್ರಹ

CHITRADURGA NEWS | 18 JANUARY 2024
ಚಿತ್ರದುರ್ಗ (CHITRADURGA): 7ನೇ ವೇತನ ಆಯೋಗದ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸರ್ಕಾರಿ ನೌಕರರು ಮೊಳಕಾಲ್ಮುರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ: ಅಯೋಧ್ಯೆ ಶ್ರೀ ರಾಮನಿಗೆ ಪಗಡಬಂಡಿ ಗದ್ದಿಗೆ ಕಂಬಳಿ | ಕೈಯಿಂದಲೇ ನೇಯ್ದು ಸಮರ್ಪಣೆ

ಸರ್ಕಾರಿ ನೌಕರರ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ. 7ನೇ ವೇತನ ಆಯೋಗದ ವರದಿ ಜಾರಿ ಮಾಡಲು ಸರ್ಕಾರ ವಿಳಂಬ ಮಾಡುತ್ತಿದೆ. ಆದ್ದರಿಂದ ವರದಿ ಅನುಷ್ಠಾನದ ಬಗ್ಗೆ ಅನಿಶ್ಚಿತತೆ ಉಂಟಾಗಿದೆ. 2 ಬಾರಿ ಜಾರಿ ಅವಧಿಯನ್ನು ವಿಸ್ತರಣೆ ಮಾಡಿರುವ ಪರಿಣಾಮ ನೌಕರರು ಆತಂಕಗೊಂಡಿದ್ದಾರೆ. ಶೀಘ್ರ ಜಾರಿ ಮಾಡಲು ಕ್ರಮ ಕೈಗೊಳ್ಳುವ ಮೂಲಕ ನೆರವಿಗೆ ಬರಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ಕೃಷಿ ಪತ್ತಿನ ಸಂಘದ ಅಧ್ಯಕ್ಷರಾಗಿ ಜಿ.ಎಂ.ತಿಪ್ಪೇಸ್ವಾಮಿ (ಎತ್ತಿನಹಟ್ಟಿಗೌಡ್ರು) ಆಯ್ಕೆ

ನೌಕರರು ಹಾಗೂ ಅವರ ಅವಲಂಬಿತರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು 2022ರಲ್ಲಿ ಜಾರಿಗೆ ತರುವುದಾಗಿ ಹೇಳಲಾಗಿತ್ತು. ಆದರೆ, ಇದುವರೆಗೂ ಯೋಜನೆ ಕಾರ್ಯಾರಂಭವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕೆಲಸದ ಒತ್ತಡದಲ್ಲಿ ನೌಕರರು ಹಲವು ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿದ್ದು, ದುಬಾರಿ ವೆಚ್ಚ ನೀಡಿ ಚಿಕಿತ್ಸೆ ಪಡೆಯಲು ಸಾಧ್ಯವಾಗದ ಸ್ಥಿತಿಯಲ್ಲಿದ್ದಾರೆ. ಆದ್ದರಿಂದ ತಕ್ಷಣವೇ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಯೋಜನೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ಹರಿವಾಯುಸ್ತುತಿ ಪಾರಾಯಣದ ಹರಿದಾಸ ಹಬ್ಬಕ್ಕೆ 23ನೇ ಸಂಭ್ರಮ | ಅಯೋಧ್ಯಾರಾಮನ ಭವ್ಯ ಶೋಭಾಯಾತ್ರೆ

ಶಾಸಕ ಎನ್.ವೈ.ಗೋಪಾಲಕೃಷ್ಣ ಅವರಿಗೆ ಮನವಿ ಸಲ್ಲಿಸಿದರು. ನೌಕಕರ ಸಮಸ್ಯೆ, ಬೇಡಿಕೆಯನ್ನು ಶೀಘ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರಲಾಗುತ್ತದೆ. ಜತೆಗೆ ಕ್ರಮಕ್ಕೆ ಮನವಿ ಮಾಡಲಾಗುವುದು’ ಎಂದು ಶಾಸಕರು ಭರವಸೆ ನೀಡಿದರು.

ಇದನ್ನೂ ಓದಿ: ತೇರುಮಲ್ಲೇಶ್ವರಸ್ವಾಮಿ ಜಾತ್ರಾ ಮಹೋತ್ಸವ | ಬ್ರಹ್ಮ ರಥೋತ್ಸವಕ್ಕೆ ಸಿದ್ಧತೆ

ತಾಲ್ಲೂಕು ನೌಕರರ ಸಂಘದ ಅಧ್ಯಕ್ಷ ಎಸ್.ಈರಣ್ಣ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಶೋಕ್, ಇ.ಮಲ್ಲೇಶಪ್ಪ, ಕೌಸಲ್ಯಾ, ಲೀಲಾಬಾಯಿ, ಮಹೇಶ್, ಟಿ.ಜಿ.ಕೆಂಚಲಿಂಗಪ್ಪ, ಕರಿಬಸಣ್ಣ, ಎಸ್.ಬಿ.ರಾಮಚಂದ್ರಯ್ಯ, ಎಚ್.ಓಂಕಾರಪ್ಪ, ಎಚ್.ಎನ್.ಸುಜಾತಾ ಪಾಲ್ಗೊಂಡಿದ್ದರು.

Click to comment

Leave a Reply

Your email address will not be published. Required fields are marked *

More in ಮೊಳಕಾಳ್ಮೂರು

To Top
Exit mobile version