
ಚಿತ್ರದುರ್ಗ ನ್ಯೂಸ್.ಕಾಂ: 2022-23ನೇ ಸಾಲಿನ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಇದೇ ಅ.27 ರಿಂದ 29 ರವರೆಗೆ ತುಮಕೂರು ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.
2022-23ನೇ ಸಾಲಿನ ಚಿತ್ರದುರ್ಗ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಯ ವೈಯುಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಹಾಗೂ ಗುಂಪು ಆಟಗಳಲ್ಲಿ ಪ್ರಥಮ ಸ್ಥಾನ ಪಡೆದವರು ಮಾತ್ರ ಈ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಇಲಾಖೆಯಿಂದ ಗುರುತಿನ ಪತ್ರ ಪಡೆದು ಭಾಗವಹಿಸಬಹುದಾಗಿದೆ.
ಇದನ್ನೂ ಓದಿ: KSRTC ಬಸ್-ಬೈಕ್ ನಡುವೆ ಅಪಘಾತ
ಕ್ರೀಡಾಪಟುಗಳು ಅಕ್ಟೋಬರ್ 27ರಂದು ತುಮಕೂರು ಜಿಲ್ಲಾ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಳ್ಳಲು ಕೋರಲಾಗಿದೆ.
ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಗುರುತಿನ ಪತ್ರವನ್ನು ರಾಜ್ಯ ಸರ್ಕಾರಿ ನೌಕರರ ಸಂಘ ಚಿತ್ರದುರ್ಗ ಘಟಕದ ಜಿಲ್ಲಾ ಕಾರ್ಯದರ್ಶಿ ಎಸ್.ಕೆ. ಮಂಜುನಾಥ ಅವರ ದೂರವಾಣಿ ಸಂಖ್ಯೆ 9844412448, ಜಿಲ್ಲಾ ಖಜಾಂಚಿ ಬಿ. ವಿರೇಶ್ ದೂರವಾಣಿ ಸಂಖ್ಯೆ 9880409874 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
