CHITRADURGA NEWS | 23 JANUARY 2026
ಚಿತ್ರದುರ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಸಂಯುಕ್ತಾಶ್ರಯದಲ್ಲಿ ಜ. 27 ರಿಂದ ಏರ್ಪಡಿಸಲು ಉದ್ದೇಶಿಸಿದ್ದ ರಾಜ್ಯ ಸರ್ಕಾರಿ ನೌಕರರ ವಾರ್ಷಿಕ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಮುಂದೂಡಿ, ಜ. 29 ಮತ್ತು 30 ರಂದು ನಗರದ ವೀರ ವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ನಡೆಸಲು ನಿರ್ಧರಿಸಲಾಗಿದ್ದು, ಆನ್‍ಲೈನ್ ನಲ್ಲಿ ನೊಂದಣಿಗೆ ಜ. 24 ಕೊನೆಯ ದಿನವಾಗಿದೆ ಎಂದು ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ್ ಮುದ್ದಜ್ಜಿ ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಡಿ.ಕೆ.ಹಳ್ಳಿ ಕೃಷಿ ಪತ್ತಿನ ಸಂಘಕ್ಕೆ ಅಧ್ಯಕ್ಷ – ಉಪಾಧ್ಯಕ್ಷರ ಅವಿರೋಧ ಆಯ್ಕೆ
ವಾರ್ಷಿಕ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಗಳು ಮಹಿಳೆಯರಿಗೆ ಮತ್ತು ಪುರುಷರಿಗೆ ವಯೋಮಾನ ಆಧಾರದಲ್ಲಿ ಪ್ರತ್ಯೇಕವಾಗಿ ಆಯೋಜಿಸಲಾಗಿದ್ದು, ವಿವಿಧ ಕ್ರೀಡೆಗಳು, ಈಜು ಸ್ಪರ್ಧೆ, ಸಂಗೀತ ಹಾಗೂ ನೃತ್ಯ ಸ್ಪರ್ಧೆಗಳು ಜರುಗಲಿವೆ.
ರಾಜ್ಯ ಸರ್ಕಾರದ ಎಲ್ಲಾ ಖಾಯಂ ನೌಕರರು ಸ್ಪರ್ಧೆಗಳಲ್ಲಿ ಭಾಗವಹಿಸಲು ಅರ್ಹರಿದ್ದು. ಜ. 24 ರ ಒಳಗಾಗಿ ಆನ್‍ಲೈನ್ ಲಿಂಕ್‍ನಲ್ಲಿ ವಿವರ ಭರ್ತಿ ಮಾಡಿ ನೊಂದಣಿ ಮಾಡಿಕೊಳ್ಳಬೇಕು. ಎಲ್ಲ ಕ್ರೀಡಾಪಟುಗಳು ಇಲಾಖಾ ಮುಖ್ಯಸ್ಥರಿಂದ ನೀಡಲಾದ ಅಧಿಕೃತ ಗುರುತಿನ ಚೀಟಿ ಕಡ್ಡಾಯವಾಗಿ ಸಲ್ಲಿಸಬೇಕು.
ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ಎಲ್ಲ ಸರ್ಕಾರಿ ನೌಕರರು ಜ. 29 ಮತ್ತು 30 ರಂದು ಎರಡು ದಿನಗಳ ಕಾಲ ಜರುಗುವ ವಾರ್ಷಿಕ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು.
ಇದನ್ನೂ ಓದಿ: ನೃತ್ಯ ಕಲಾವಿದೆ ಶ್ವೇತಾ ಭಟ್ ಅವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕಿ ಅವಾರ್ಡ್
ಹೆಚ್ಚಿನ ಮಾಹಿತಿಗೆ ಸಂತೋಷ್ ಕುಮಾರ್-9964002787, ಜಯರಾಂ-9611956940 ಅಥವಾ ಹನುಮಂತರಾಯಪ್ಪ- 9900437024 ಇವರನ್ನು ಸಂಪರ್ಕಿಸಬಹುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಮಾಲತೇಶ ಮುದಜ್ಜಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಸುಚೇತ ನೆಲವಗಿ ಅವರು ಮನವಿ ಮಾಡಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
