ಮುಖ್ಯ ಸುದ್ದಿ
Award; ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು | ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
CHITRADURGA NEWS | 04 AUGUST 2024
ಚಿತ್ರದುರ್ಗ: ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಭೌತಶಾಸ್ತ್ರ ಉಪನ್ಯಾಸಕರ ವೇದಿಕೆ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ನಿವೃತ್ತರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕ್ಲಿಕ್ ಮಾಡಿ ಓದಿ: Independence day; ಸ್ವಾತಂತ್ರ್ಯ ದಿನಾಚರಣೆ ಪಥ ಸಂಚಲನಕ್ಕೆ ಪೊಲೀಸ್ ಕವಾಯತು ಅಭ್ಯಾಸ
ಈ ವೇಳೆ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾ ಅಧ್ಯಕ್ಷ ಬಿ.ಆರ್.ಮಲ್ಲೇಶ್ ಮಾತನಾಡಿ, ಉಪನ್ಯಾಸಕರು ತರಗತಿಗಳಲ್ಲಿ ವರ್ಷವಿಡೀ ಬೋಧನೆ ಮಾಡಿದ್ದಕ್ಕೆ ಕೊನೆಯಲ್ಲಿ ಪ್ರತಿಫಲ ಫಲಿಸುವುದು ಪ್ರತಿಭಾ ಪುರಸ್ಕಾರಕ್ಕೆ ಭಾಜನರಾದ ನಿಮ್ಮಂಥ ವಿದ್ಯಾರ್ಥಿಗಳಿಂದ ಎಂಬುದನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು, ಇಂತಹ ಸಾರ್ಥಕ ಕ್ಷಣಕ್ಕಾಗಿ ಪ್ರತಿ ಉಪನ್ಯಾಸಕ ಹಂಬಲಿಸುತ್ತಾರೆ ಎಂದರು.
ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ನಿರ್ದೇಶಕ ಆರ್.ಪುಟ್ಟಸ್ವಾಮಿ ಮಾತನಾಡಿ, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಎಲ್ಲರ ಸಮ್ಮುಖದಲ್ಲಿ ಸನ್ಮಾನಿಸುವುದು ಇನ್ನಷ್ಟು ಸಾಧಿಸಲು ಪ್ರೇರಣೆ ನೀಡಿದಂತಾಗುತ್ತದೆ.
ಈ ರೀತಿಯ ಕಾರ್ಯಕ್ರಮಗಳನ್ನು ಎಲ್ಲಾ ವಿಷಯವಾರು ವೇದಿಕೆಗಳು ಹಮ್ಮಿಕೊಳ್ಳುವ ಮೂಲಕ ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು.
ಕ್ಲಿಕ್ ಮಾಡಿ ಓದಿ: Internal Reservation; ಒಳ ಮೀಸಲಾತಿ ಶೀಘ್ರ ಜಾರಿಗೆ ಹಿರಿಯ ವಕೀಲ ಎಂ.ಕುಂಬಯ್ಯ ಒತ್ತಾಯ
ಈ ವೇಳೆ ಭೌತಶಾಸ್ತ್ರ ವಿಷಯದಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಭೌತಶಾಸ್ತ್ರ ಉಪನ್ಯಾಸಕರ ವೇದಿಕೆಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲ ಕೆ. ನಾಗಣ್ಣ, ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಎಸ್. ದೇವೇಂದ್ರಪ್ಪ, ಪ್ರಾಂಶುಪಾಲ ಕೆ.ಹೆಚ್. ರಾಜು, ನರಸಿಂಹಮೂರ್ತಿ, ಉಪನ್ಯಾಸಕರಾದ ಉಮೇಶ್, ಸುರೇಶ್ ಮುರನಾಳ್, ವಿಜಯಕುಮಾರ್ ಉಪಸ್ಥಿತರಿದ್ದರು.