CHITRADURGA NEWS | 12 JUNE 2025
ಚಿತ್ರದುರ್ಗ: ಸರ್ಕಾರಿ ಶಾಲೆಗಳಲ್ಲಿ ಡಿ-ಗ್ರೂಪ್ ನೌಕರರಿಲ್ಲದ ಕಾರಣ ಶಿಕ್ಷಕರುಗಳೆ ಕಸ ಗುಡಿಸುವ, ಶೌಚಾಲಯ ಸ್ವಚ್ಚಗೊಳಿಸುತ್ತಿರುವುದು ಅತ್ಯಂತ ಹೇಯವಾದುದು, ಸರ್ಕಾರ ಕೂಡಲೆ ಸರ್ಕಾರಿ ಶಾಲೆಗಳಿಗೆ ಡಿ-ಗ್ರೂಪ್ ನೌಕರರನ್ನು ನೇಮಿಸುವಂತೆ ಒತ್ತಾಯಿಸಿ ಕರುನಾಡ ವಿಜಯಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
Also Read: ಕಾಲ್ತುಳಿತ ಪ್ರಕರಣ ಮರೆಮಾಚಲು ಜಾತಿ ಗಣತಿ ಮರುಸಮೀಕ್ಷೆಯ ಕುತಂತ್ರ | ಛಲವಾದಿ ನಾರಾಯಣಸ್ವಾಮಿ
ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಮೂಲಭೂತ ಸೌಲಭ್ಯಗಳಿಲ್ಲದೆ ಸರ್ಕಾರಿ ಶಾಲೆಗಳು ಮುಚ್ಚುವ ಸ್ಥಿತಿ ತಲುಪಿವೆ. ಶೌಚಾಲಯ ಶುಚಿಗೊಳಿಸುವವರಿಲ್ಲದೆ ಮಕ್ಕಳೆ ಸ್ಚಚ್ಚಗೊಳಿಸುವಂತಾಗಿದೆ. ಶಿಕ್ಷಕರು ಮಕ್ಕಳಿಗೆ ಪಾಠ ಮಾಡಬೇಕೆ. ಶಾಲೆಯಲ್ಲಿ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕೆ ಎನ್ನುವುದೇ ಗೊಂದಲವಾಗಿದೆ.
ಅನೇಕ ಶಾಲೆಗಳಿಗೆ ಕಾಂಪೌಂಡ್ಗಳೆ ಇಲ್ಲ. ಇದರಿಂದ ಮಕ್ಕಳಿಗೆ ಸುರಕ್ಷತೆ ಎನ್ನುವುದು ಮರೀಚಿಕೆಯಾಗಿದೆ. ಪೋಷಕರುಗಳು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸದೆ ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ.
ರಾಮನಗರದ ತುರುಪಲಯದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಚಿಗೊಳಿಸುತ್ತಿದ್ದ ಶಿಕ್ಷಕನನ್ನು ಅಮಾನತ್ತುಪಡಿಸಲಾಗಿದೆ. ಡಿ-ಗ್ರೂಪ್ ನೌಕರ ಇಲ್ಲದ ಕಾರಣಕ್ಕೆ ಅನಿವಾರ್ಯವಾಗಿ ಶಿಕ್ಷಕರೆ ಸ್ವಚ್ಚಗೊಳಿಸಬೇಕು. ಹಾಗಾಗಿ ಅಮಾನತ್ತನ್ನು ಕೂಡಲೆ ಹಿಂದಕ್ಕೆ ಪಡೆಯಬೇಕೆಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಒತ್ತಾಯಿಸಿದರು.
Also Read: ಹಾವೇರಿಯಲ್ಲಿ ಪೌರ ಕಾರ್ಮಿಕರ ಮೇಲೆ ಹಲ್ಲೆ | ಸೂಕ್ತ ಕ್ರಮಕ್ಕೆ ಚಿತ್ರದುರ್ಗದಲ್ಲಿ ಪ್ರತಿಭಟನೆ
ಪ್ರತಿಭಟನೆಯ ನಂತರ ಕೆ.ಟಿ.ಶಿವಕುಮಾರ್ ಶೌಚಾಲಯವೊಂದನ್ನು ಶುಚಿಗೊಳಿಸಿ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಕರುನಾಡ ವಿಜಯಸೇನೆ ಮಹಿಳಾಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಜಗದೀಶ್, ರತ್ನಮ್ಮ, ಹರೀಶ್ಕುಮಾರ್, ಮುಜಾಹಿದ್, ನಾಗೇಶ್, ಶಶಿಧರ, ಅಖಿಲೇಶ್, ವಿಜಯಬಾಬು ಪಾಲ್ಗೊಂಡಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

