ಮಾರುಕಟ್ಟೆ ಧಾರಣೆ
ಮೋದಿ ಸಂಪುಟಕ್ಕೆ ಗೋವಿಂದ ಕಾರಜೋಳ | ಚಿತ್ರದುರ್ಗಕ್ಕೆ ಮತ್ತೊಮ್ಮೆ ಕೇಂದ್ರ ಸಚಿವ ಸ್ಥಾನ..?
CHITRADURGA NEWS | 06 JUNE 2024
ಚಿತ್ರದುರ್ಗ: ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಗೆದ್ದಿರುವ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಕೇಂದ್ರ ಸಚಿವ ಸಂಪುಟ ಸೇರುತ್ತಾರಾ ಎನ್ನುವ ಚರ್ಚೆ ಶುರುವಾಗಿದೆ.
ಚುನಾವಣಾ ಫಲಿತಾಂಶ ಬಂದ ಮರು ದಿನವೇ, ಗೋವಿಂದ ಕಾರಜೋಳ ಅವರಿಗೆ ಬಿಜೆಪಿ ಹೈಕಮಾಂಡ್ ಕರೆ ಬಂದಿರುವ ಕಾರಣಕ್ಕೆ ದೆಹಲಿಗೆ ತೆರಳಿದ್ದಾರೆ.
ಇದನ್ನೂ ಓದಿ: ಮೂರನೇ ಸ್ಥಾನ ತಂದ ಮೂರು ಅಂಕ | ಎಸ್‌ಎಸ್‌ಎಲ್‌ಸಿ ಮರು ಮೌಲ್ಯಮಾಪನ ಎಫೆಕ್ಟ್
ಕಳೆದ ಅವಧಿಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಎ.ನಾರಾಯಣಸ್ವಾಮಿ ಕೊನೆಯ ಎರಡು ವರ್ಷಗಳಲ್ಲಿ ಕೇಂದ್ರದ ಸಾಮಾಜಿಕ ನ್ಯಾಯ ಸಬಲೀಕರಣ ಖಾತೆಯ ರಾಜ್ಯ ಸಚಿವರಾಗಿದ್ದರು.
ಈಗ ಗೋವಿಂದ ಕಾರಜೋಳ ಅವರಿಗೆ ಕೂಡಾ ಕೇಂದ್ರದ ಎನ್‍ಡಿಎ ಸರ್ಕಾರದ ಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆಗಳ ಬಗ್ಗೆ ಲೆಕ್ಕಾಚಾರ ಹಾಕಲಾಗುತ್ತಿದೆ.
ಇದನ್ನೂ ಓದಿ: ರೈಲ್ವೇ ಅಂಡರ್ ಪಾಸ್ ಗುಂಡಿ ಯಾವಾಗ ಮುಚ್ತಿರಾ
ದಲಿತ ಎಡಗೈ ಸಮುದಾಯಕ್ಕೆ ಸೇರಿದ ಗೋವಿಂದ ಕಾರಜೋಳ ರಾಜ್ಯದ ಬಿಜೆಪಿಯಲ್ಲಿ ಪ್ರಭಾವಿ ನಾಯಕರು. ಮಾದಿಗ ಸಮುದಾಯವನ್ನು ಪ್ರಭಾವಿಸುತ್ತಿರುವ ನಾಯಕ.
ಈ ನಿಟ್ಟಿನಲ್ಲಿ ಬಿಜೆಪಿ ದಲಿತ ಹಾಗೂ ಕರ್ನಾಟಕ ಕೋಟಾದಲ್ಲಿ ಗೋವಿಂದ ಕಾರಜೋಳ ಅವರಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ನೀಡಲಿದೆ ಎನ್ನುವ ಚರ್ಚೆಗಳು ಮುನ್ನೆಲೆಗೆ ಬಂದಿವೆ.
ಇದನ್ನೂ ಓದಿ: ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಯ 64 ವಿದ್ಯಾರ್ಥಿಗಳ ಸಾಧನೆ | ವೈದ್ಯಕೀಯ ಕೋರ್ಸ್‍ಗೆ ಅರ್ಹತೆ
ಕರ್ನಾಟಕದಲ್ಲಿ ಬಿಜೆಪಿ 17 ಸ್ಥಾನಗಳಲ್ಲಿ ಗೆದ್ದಿದ್ದರೆ, ಜೆಡಿಎಸ್ ಎರಡು ಸ್ಥಾನಗಳಲ್ಲಿ ಗೆದ್ದಿದೆ. ಜೆಡಿಎಸ್‍ನಿಂದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೇಂದ್ರ ಸಂಪುಟದಲ್ಲಿ ಸಚಿವರಾಗಲಿದ್ದಾರೆ ಎನ್ನಲಾಗುತ್ತಿದೆ.
ಇದರೊಟ್ಟಿಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಕೇಂದ್ರದ ಮಾಜಿ ಸಚಿವ ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ, ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಬೆಂಗಳೂರು ಗ್ರಾಮಾಂತರದಿಂದ ಆಯ್ಕೆಯಾಗಿರುವ ಡಾ.ಮಂಜುನಾಥ್ ಅವರ ಹೆಸರುಗಳು ಕೂಡಾ ಮುಂಚೂಣಿಯಲ್ಲಿ ಕೇಳಿ ಬರುತ್ತಿವೆ.
ಇದನ್ನೂ ಓದಿ: ಆಗ್ನೇಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆ | ಕುತೂಹಲ ಮೂಡಿಸಿದ ಫಲಿತಾಂಶ
ಆದರೆ, ಕೇಂದ್ರದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮಾತ ಇಲ್ಲದ ಕಾರಣಕ್ಕೆ, ಎನ್‍ಡಿಎ ಮೈತ್ರಿಕೂಟದ ಮಿತ್ರ ಪಕ್ಷಗಳಿಗೆ ಹೆಚ್ಚು ಆಧ್ಯತೆ ನೀಡಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಅನೇಕ ಬಿಜೆಪಿಯ ಪ್ರಭಾವಿ ಮುಖಂಡರು ಈ ಬಾರಿ ತ್ಯಾಗ ಮಾಡುವುದು ಅನಿವಾರ್ಯ ಎನ್ನುವ ಅಂಶಗಳು ಚರ್ಚೆಯಲ್ಲಿವೆ.