Connect with us

    ಗೋವಿಂದ ಕಾರಜೋಳ ಚಿತ್ರದುರ್ಗ ಅಭ್ಯರ್ಥಿ | ಅಧಿಕೃತ ಘೋಷಣೆ ಮಾಡಿದ ಬಿಜೆಪಿ

    ಗೋವಿಂದ ಕಾರಜೋಳ

    ಲೋಕಸಮರ 2024

    ಗೋವಿಂದ ಕಾರಜೋಳ ಚಿತ್ರದುರ್ಗ ಅಭ್ಯರ್ಥಿ | ಅಧಿಕೃತ ಘೋಷಣೆ ಮಾಡಿದ ಬಿಜೆಪಿ

    CHITRADURGA NEWS | 27 MARCH 2024

    ಚಿತ್ರದುರ್ಗ: ಚಿತ್ರದುರ್ಗ ಲೋಕಸಭೆಗೆ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಚಿವ ಎಂ.ಗೋವಿಂದ ಕಾರಜೋಳ ಅವರನ್ನು ಆಯ್ಕೆ ಮಾಡಿದ್ದು, ಕೇಂದ್ರ ಚುನಾವಣಾ ಸಮಿತಿ ಅಧಿಕೃತವಾಗಿ ಪಟ್ಟಿ ಬಿಡುಗಡೆ ಮಾಡಿದೆ.

    ಕಳೆದೊಂದು ವಾರದಿಂದ ಗೋವಿಂದ ಕಾರಜೋಳ ಚಿತ್ರದುರ್ಗ ಅಭ್ಯರ್ಥಿ ಆಗಲಿದ್ದಾರೆ ಎನ್ನುವ ಅಂತೆಕಂತೆಗಳು ಹರಿದಾಡುತ್ತಿದ್ದವು. ಆದರೆ, ಇಂದು ಅಧಿಕೃತ ಘೋಷಣೆ ಆಗಿದೆ.

    ಇದನ್ನೂ ಓದಿ: ನಾಯಕನಹಟ್ಟಿ ರಥಕ್ಕೆ ₹ 2.5 ಕೋಟಿ ವಿಮೆ | ವಿಮಾ ಪಾಲಿಸಿ ಹಸ್ತಾಂತರ

    ಈ ಹಿಂದೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಗೋವಿಂದ ಕಾರಜೋಳ ಉಪಮುಖ್ಯಮಂತ್ರಿ ಆಗಿದ್ದರು. ಆನಂತರ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಜಲಸಂಪನ್ಮೂಲ ಸಚಿವರಾಗಿಯೂ ಕೆಲಸ ಮಾಡಿದ್ದರು.

    ಈಗ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದು, ಉತ್ತರ ಕರ್ನಾಟಕದಿಂದ ಮಧ್ಯ ಕರ್ನಾಟಕಕ್ಕೆ ಆಗಮಿಸಿ ಹೊಸ ರಾಜಕೀಯ ಹೆಜ್ಜೆ ಇಡಲು ಅಣಿಯಾಗಿದ್ದಾರೆ.

    ಇದನ್ನೂ ಓದಿ: ರೈತರ ಗಮನಕ್ಕೆ…ಬೋರ್‌ವೆಲ್‌ ಪ್ರತಿ ಅಡಿಗೆ ರೂ.105 ಫಿಕ್ಸ್‌ | ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಬಿ.ಮಂಜುನಾಥ್

    ಹಾಲಿ ಬಿಜೆಪಿ ಹಿಡಿತದಲ್ಲಿರುವ ಚಿತ್ರದುರ್ಗ ಕ್ಷೇತ್ರವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ ವರಿಷ್ಠರು ಅಳೆದು ತೂಗಿ ಗೋವಿಂದ ಕಾರಜೋಳ ಅವರನ್ನು ಆಯ್ಕೆ ಮಾಡಿದ್ದಾರೆ.

    ಹಾಲಿ ಸಂಸದ, ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಭ್ರಷ್ಟ ರಾಜಕಾರಣದಲ್ಲಿ ಮುಂದುವರೆಯುವ ಆಸಕ್ತಿ ಇಲ್ಲ ಎಂದು ಹೇಳಿಕೆ ನೀಡಿದ ನಂತರ ಬಿಜೆಪಿ ಟಿಕೇಟ್‍ಗೆ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿತ್ತು.

    ಇದನ್ನೂ ಓದಿ: ಚಳ್ಳಕೆರೆ ATR ನಲ್ಲಿ ಇಸ್ರೋ ಮಹತ್ವದ ಸಾಧನೆ | ಮರುಬಳಕೆಯ ರಾಕೇಟ್ ಪುಷ್ಪಕ್ ಯಶಸ್ವಿ ಲ್ಯಾಂಡಿಂಗ್

    ಪ್ರಮುಖವಾಗಿ ಮಾಜಿ ಸಂಸದ ಜನಾರ್ಧನಸ್ವಾಮಿ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಅವರ ಪುತ್ರ ಎಂ.ಸಿ.ರಘುಚಂದನ್ ಪ್ರಬಲ ಪೈಪೋಟಿ ನಡೆಸಿದ್ದರು. ರಘು ಚಂದನ್ ಕ್ಷೇತ್ರ ವ್ಯಾಪ್ತಿಯಲ್ಲಿ ಒಂದು ಸುತ್ತಿನ ಪ್ರವಾಸ ಮಾಡಿದ್ದರು.

    ಇದರೊಟ್ಟಿಗೆ ನಿವೃತ್ತ ಐಎಎಸ್ ಅಧಿಕಾರಿಗಳಾದ ಲಕ್ಷ್ಮೀನಾರಾಯಣ, ಎಂ.ಕೆ.ಶ್ರೀರಂಗಯ್ಯ, ಸೂರನಹಳ್ಳಿ ವಿಜಯಣ್ಣ, ಭಾರ್ಗವಿ ದ್ರಾವಿಡ್, ಡಾ.ರಮೇಶ್ ಸೇರಿದಂತೆ ಹಲವು ಆಕಾಂಕ್ಷಿಗಳಿದ್ದರು. ಆದರೆ, ಎಲ್ಲ ಲೆಕ್ಕಾಚಾರಗಳು ತಲೆಕೆಳಗಾಗಿದ್ದು, ಬಿಜೆಪಿ ವರಿಷ್ಠರು ಗೋವಿಂದ ಕಾರಜೋಳ ಅವರಿಗೆ ಟಿಕೇಟ್ ನೀಡಿದ್ದಾರೆ.

    ಇದನ್ನೂ ಓದಿ: ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಕಾಂಗ್ರೆಸ್ ಅಭ್ಯರ್ಥಿ | ಅಧಿಕೃತ ಘೋಷಣೆ ಮಾಡಿದ ಎಐಸಿಸಿ

    ಜನತಾ ದಳದ ಮೂಲಕ ರಾಜಕಾರಣ ಆರಂಭಿಸಿದ ಗೋವಿಂದ ಕಾರಜೋಳ, ಕಳೆದ ನಾಲ್ಕು ದಶಕಗಳಿಂದ ರಾಜ್ಯ ರಾಜಕಾರಣದಲ್ಲಿ ಸಕ್ರೀಯವಾಗಿದ್ದಾರೆ. ಆದರೆ, ಇದೇ ಮೊದಲ ಬಾರಿಗೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಪದಾರ್ಪಣೆ ಮಾಡಲು ಅಣಿಯಾಗಿರುವುದು ವಿಶೇಷವಾಗಿದೆ.

    Click to comment

    Leave a Reply

    Your email address will not be published. Required fields are marked *

    More in ಲೋಕಸಮರ 2024

    To Top