ಮುಖ್ಯ ಸುದ್ದಿ
ಅಮಿತ್ ಶಾ ಭೇಟಿಯಾದ ಗೋವಿಂದ ಕಾರಜೋಳ | ಭದ್ರಾ ಮೇಲ್ದಂಡೆ ಯೋಜನೆ ಕುರಿತು ಚರ್ಚೆ

CHITRADURGA NEWS | 11 FEBRUARY 2025
ಚಿತ್ರದುರ್ಗ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ದೆಹಲಿಯಲ್ಲಿ ಚಿತ್ರದುರ್ಗ ಲೋಕಸಭಾ ಸದಸ್ಯ ಗೋವಿಂದ ಎಂ.ಕಾರಜೋಳ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಬಯಲು ಸೀಮೆಯ ಮಹತ್ವದ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ 2023-24ನೇ ಸಾಲಿನ ಬಜೆಟ್‍ನಲ್ಲಿ ಘೋಷಣೆ ಮಾಡಿರುವ 5300 ಕೋಟಿ ರೂ. ಅನುದಾನವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲು ಶಿಫಾರಸ್ಸು ಮಾಡುವಂತೆ ಅಮಿತ್ ಶಾ ಅವರಿಗೆ ಮನವಿ ಸಲ್ಲಿಸಿದರು.
ಇದನ್ನೂ ಓದಿ: ನಿಧಿ ಆಸೆಗೆ ನರಬಲಿ | ಜಿಲ್ಲೆಯಲ್ಲಿ ನಡೆಯಿತು ಘೋರ ಕೃತ್ಯ
ಚಿತ್ರದುರ್ಗ, ದಾವಣಗೆರೆ, ತುಮಕೂರು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ನೀರಾವರಿ ಯೋಜನೆ ಇದಾಗಿದ್ದು, ಒಟ್ಟು 2,55,515 ಹೆಕ್ಟೇರ್ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶ ಭದ್ರಾ ಮೇಲ್ದಂಡೆ ಯೋಜನೆಯದ್ದಾಗಿದೆ.
ಇದರಿಂದ ನಾಲ್ಕು ಜಿಲ್ಲೆಗಳ 367 ಕೆರೆಗಳಿಗೆ ನೀರು ತುಂಬಿಸುವ ಮೂಲಕ ಅಂತರ್ಜಲ ವೃದ್ಧಿಗೆ ಅನುಕೂಲವಾಗಲಿದ್ದು, ಬಜೆಟ್‍ನಲ್ಲಿ ಘೋಷಣೆ ಮಾಡಿರುವ 5300 ಕೋಟಿ ರೂ. ಅನುದಾನವನ್ನು ಈವರೆಗೆ ಬಿಡುಗಡೆ ಮಾಡದ ಕಾರಣಕ್ಕೆ, ಜನರಲ್ಲಿ ಅಸಮಧಾನ ಉಂಟಾಗಿದೆ. ಈ ನಿಟ್ಟಿನಲ್ಲಿ ಶೀಘ್ರ ಅನುದಾನ ಬಿಡುಗಡೆ ಮಾಡಿಸಿಕೊಡಬೇಕು ಎಂದು ಮನವಿ ಮಾಡಿದ್ದಾರೆ.
