
CHITRADURGA NEWS | 07 JUNE 2024
ಚಿತ್ರದುರ್ಗ: ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಗೆದ್ದಿರುವ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಅವರು ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾದರು.
ಇದನ್ನೂ ಓದಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಿಸಿ ಕ್ಯಾಮೆರಾ ಕಣ್ಗಾವಲು | 19 ಕೇಂದ್ರಗಳಿಗೆ ಪೊಲೀಸ್ ಭದ್ರತೆ

ದೆಹಲಿಯಲ್ಲಿ ನಡೆಯಲಿರುವ ಎನ್.ಡಿ.ಎ ಒಕ್ಕೂಟದ ಸಂಸದ ಸಭೆಯಲ್ಲಿ ಭಾಗವಹಿಸಲು ತೆರಳಿದ್ದ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳರವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಷ್ಯಂತ್ ಕುಮಾರ್ ಗೌತಮ್ ಅವರನ್ನು ದೆಹಲಿಯ ಅವರ ನಿವಾಸದಲ್ಲಿ ಭೇಟಿಯಾಗಿ ಪುಷ್ಪ ಗುಚ್ಚವನ್ನು ನೀಡುವುದರ ಮೂಲಕ ಶುಭ ಕೋರಿದರು.
ಪ್ರಸುತ್ತ ವಿದ್ಯಾಮಾನದ ಬಗ್ಗೆ ಚರ್ಚೆ ನಡೆಸಿದರು. ಇದೇ ಸಂದರ್ಭದಲ್ಲಿ ಗೋವಿಂದ ಕಾರಜೋಳ ಅವರಿಗೆ ದುಷ್ಯಂತ್ ಕುಮಾರ್ ಗೌತಮ್ ರವರು ಶಾಲು ಹೊದಿಸಿ ಅಂಬೇಡ್ಕರ್ ಪ್ರತಿಮೆಯನ್ನು ನೀಡಿ ಗೌರವಿಸಿದರು.
ಇದನ್ನೂ ಓದಿ: ಶೌಚಾಲಯದ ಬಳಿ ನವಜಾತ ಶಿಶು ಪತ್ತೆ | ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಘಟನೆ
ಇದೇ ಸಂದರ್ಭದಲ್ಲಿ ದೆಹಲಿಯಲ್ಲಿ ಮಾಜಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಧನ್ಯವಾದವನ್ನು ಅರ್ಪಿಸಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
