ಲೋಕಸಮರ 2024
ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ನಾಮಪತ್ರ ಸಲ್ಲಿಕೆ

CHITRADURGA NEWS | 01 APRIL 2024
ಚಿತ್ರದುರ್ಗ: ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಗೋವಿಂದ ಎಂ. ಕಾರಜೋಳ ನಾಮಪತ್ರ ಸಲ್ಲಿಸಿದರು.
ಮಾಜಿ ಶಾಸಕರಾದ ಜಿ.ಎಚ್. ತಿಪ್ಪಾರೆಡ್ಡಿ, ನೇರ್ಲಗುಂಟೆ ಎಸ್.ತಿಪ್ಪೇಸ್ವಾಮಿ, ಎಂಎಲ್ಸಿ ಕೆ.ಎಸ್.ನವೀನ್, ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ, ಜೆಡಿಎಸ್ ಜಿಲ್ಲಾಧ್ಯಕ್ಷ ಪಿಲಾಜನಹಳ್ಳಿ ಜಯಣ್ಣ ಜೆಡಿಎಸ್ ಮುಖಂಡ ಬಿ.ಕಾಂತರಾಜ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್ ಜಿ.ಟಿ.ಸುರೇಶ್ ಈ ವೇಳೆ ಜೊತೆಗಿದ್ದರು.
ಇದನ್ನೂ ಓದಿ: ಶಾಸಕ ಎಂ. ಚಂದ್ರಪ್ಪನ ದೃತರಾಷ್ಟ್ರ ಪ್ರೇಮ ಒಳ್ಳೆಯದಲ್ಲ ಕೆ.ಎಸ್.ನವೀನ್
ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಲೋಕಸಭಾ ಚುನಾವಣಾ ಕಚೇರಿಯಲ್ಲಿ, ಚುನಾವಣಾ ಅಧಿಕಾರಿಯೂ ಆಗಿರುವ ಟಿ.ವೆಂಕಟೇಶ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಇಂದು ಸಲ್ಲಿಸಿರುವ ನಾಮಪತ್ರ ಮೊದಲನೆಯ ಸೆಟ್ ಆಗಿದೆ. ಏಪ್ರಿಲ್ 4 ರಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಹಾಗೂ ಕಾರ್ಯಕರ್ತರ ಜತೆಗೂಡಿ ಮತ್ತೊಂದು ಸೆಟ್ ನಾಮಪತ್ರ ಸಲ್ಲಿಸಲಿದ್ದಾರೆ.
ಇದನ್ನೂ ಓದಿ: ಯಡಿಯೂರಪ್ಪ ಮೇಲಿನ ವಿಶ್ವಾಸ ಅಚಲ | ತಂದೆಯ ಸ್ಥಾನದಲ್ಲಿ ನಿಂತು ನ್ಯಾಯ ಕೊಡುವ ವಿಶ್ವಾಸವಿದೆ | ಎಂ.ಸಿ.ರಘುಚಂದನ್
ಪರಿಶಿಷ್ಟ ಜಾತಿಗೆ ಮೀಸಲಾಗಿರುವ ರಾಜ್ಯದ ಐದು ಲೋಕಸಭಾ ಕ್ಷೇತ್ರಗಳ ಪೈಕಿ ಚಿತ್ರದುರ್ಗ ಮತ್ತು ವಿಜಯಪುರ ಕ್ಷೇತ್ರಗಳನ್ನು ಎಡಗೈ ಸಮುದಾಯಕ್ಕೆ ನೀಡಲಾಗಿದೆ.
ಚಿತ್ರದುರ್ಗ ಸಂಸದ ಎ.ನಾರಾಯಣಸ್ವಾಮಿ ರಾಜ್ಯ ರಾಜಕಾರಣದತ್ತ ಒಲವು ತೋರಿರುವ ಹಿನ್ನೆಲೆಯಲ್ಲಿ ಬಿಜೆಪಿ ಗೋವಿಂದ ಕಾರಜೋಳ ಅವರನ್ನು ಚಿತ್ರದುರ್ಗ ಅಭ್ಯರ್ಥಿಯಾಗಿ ಅಯ್ಕೆ ಮಾಡಿದೆ.
ಇದನ್ನೂ ಓದಿ: ರಘುಚಂದನ್ ಮನವೊಲಿಕೆಗೆ ಬಿಜೆಪಿ ಯತ್ನ | ತಡರಾತ್ರಿವರೆಗೆ ಮಾತುಕತೆ | ಶಾಸಕ ಚಂದ್ರಪ್ಪ ಮನೆಗೆ ಎನ್.ರವಿಕುಮಾರ್ ಭೇಟಿ
ಚಿತ್ರದುರ್ಗ ಟಿಕೇಟ್ ಆಕಾಂಕ್ಚಿಯಾಗಿದ್ದ ಶಾಸಕ ಎಂ.ಚಂದ್ರಪ್ಪ ಪುತ್ರ ಎಂ.ಸಿ.ರಘುಚಂದನ್ ವರಿಷ್ಠರು ಯೋಚಿಸಿ ನಿರ್ಧಾರ ತೆಗೆದುಕೊಂಡು ಸ್ಥಳೀಯರಿಗೆ ಟಿಕೇಟ್ ನೀಡುತ್ತಾರೆ ಎನ್ನುವ ನಿರೀಕ್ಷೆಯಲ್ಲಿದ್ದರು. ಈ ನಿಟ್ಟಿನಲ್ಲಿ ಗೋವಿಂದ ಕಾರಜೋಳ ಇಂದು ನಾಮಪತ್ರ ಸಲ್ಲಿಕೆ ಮಾಡಿರುವುದು ಮಹತ್ವ ಪಡೆದಿದೆ. ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ರಘುಚಂದನ್ ಏಪ್ರಿಲ್ 3 ರಂದು ನಾಮಪತ್ರ ಸಲ್ಲಿಸುವುದಾಗಿ ಘೋಷಿಸಿದ್ದಾರೆ.
