ಮುಖ್ಯ ಸುದ್ದಿ
ಗೋವಿಂದ ಕಾರಜೋಳ ಟೆಂಪಲ್ ರನ್ | ವಿಶೇಷ ಪೂಜೆ ಸಲ್ಲಿಕೆ

Published on
CHITRADURGA NEWS | 04 JUNE 2024
ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ. ಈ ಹಿನ್ನೆಲೆಯಲ್ಲಿ ಎನ್‌ಡಿಯ ಮೈತ್ರಿಕೂಟದ ಅಭ್ಯರ್ಥಿ ಗೋವಿಂದ ಕಾರಜೋಳ ಮಂಗಳವಾರ ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿದ್ದಾರೆ.
ಕ್ಲಿಕ್ ಮಾಡಿ ಓದಿ: ಚಿತ್ರದುರ್ಗ ಲೋಕಸಭಾ ಫಲಿತಾಂಶ | ಮತ ಎಣಿಕೆ ಕಾರ್ಯಕ್ಕೆ ಕೌಂಟ್‌ಡೌನ್
ಬಿಜೆಪಿ ಕಾರ್ಯಕರ್ತರು, ಮುಖಂಡರು, ಬೆಂಬಲಿಗರೊಂದಿಗೆ ನಗರ ಜೆಸಿಆರ್ ಬಡಾವಣೆಯ ಗಣಪತಿ ದೇವಸ್ಥಾನಕ್ಕೆ ಆಗಮಿಸಿ ವಿಘ್ನ ನಿವಾರಕನಿಗೆ ಪೂಜೆ ಸಲ್ಲಿಸಿದರು. ಬಳಿಕ ನೀಲಕಂಠೇಶ್ವರ ದೇವಸ್ಥಾನಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ.


ಚಿತ್ರದುರ್ಗದ ಗಣಪತಿ ದೇವಸ್ಥಾನದಲ್ಲಿ ಮಂಗಳವಾರ ವಿಶೇಷ ಪೂಜೆ ಸಲ್ಲಿಸಿದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಗೋವಿಂದ ಕಾರಜೋಳ
ಮಧ್ಯಾಹ್ನ 12.30ರ ಹೊತ್ತಿಗೆ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ. ಏ.26ರಂದು ಮತದಾನ ನಡೆದಿದ್ದು, 39 ದಿನಗಳ ಸುದೀರ್ಘ ಕುತೂಹಲಕ್ಕೆ ತೆರೆಬೀಳಲಿದೆ.
Continue Reading
Related Topics:Govinda Karajola, Lok Sabha, result, Special Puja, Temple Run, ಗೋವಿಂದ ಕಾರಜೋಳ, ಟೆಂಪಲ್ ರನ್, ಫಲಿತಾಂಶ, ಲೋಕಸಭೆ, ವಿಶೇಷ ಪೂಜೆ

Click to comment