CHITRADIRGA NEWS | 21 MARCH 2024
ಚಿತ್ರದುರ್ಗ: ಮುಂದಿನ ತಿಂಗಳು ನಡೆಯಲಿರುವ ಪಾರ್ಲಿಮೆಂಟ್ ಚುನಾವಣೆಯಲ್ಲಿ ಗೋವಿಂದ ಕಾರಜೋಳ ಇವರು ಚಿತ್ರದುರ್ಗ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಲಕ್ಷಣಗಳು ಕಂಡು ಬರುತ್ತಿದ್ದು, ಅವರಿಗೆ ಯಾವುದೇ ಕಾರಣಕ್ಕೂ ಬಿಜೆಪಿ ಟಿಕೇಟ್ ನೀಡದೆ ಸ್ಥಳೀಯ ಅಭ್ಯರ್ಥಿಗೆ ನೀಡಬೇಕು ಎಂದು ಕರುನಾಡ ವಿಜಯಸೇನೆ ಕಾರ್ಯಕರ್ತರು ಬುಧವಾರ ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ: ಇಳಿಜಾರಿನಲ್ಲಿ ಟ್ರಾಕ್ಟರ್ ನಿಲ್ಲಿಸಿ ಕೆಳಗಿಳಿದ ಚಾಲಕನ ಮೇಲೆ ನುಗ್ಗಿದ ಟ್ರೈಲರ್
ಬಯಲುಸೀಮೆ ಚಿತ್ರದುರ್ಗ ಜಿಲ್ಲೆಯಲ್ಲಿನ ಸಮಸ್ಯೆಗಳ ಬಗ್ಗೆ ಗೋವಿಂದ ಕಾರಜೋಳ ಅವರಿಗೆ ಯಾವುದೇ ಅರಿವಿಲ್ಲ, ಹಾಗಾಗಿ ಇಂತಹವರು ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದು ಬಂದರೆ ಕ್ಷೇತ್ರದ ಅಭಿವೃದ್ಧಿ ಹೇಗೆ ಸಾದ್ಯ?
ಹಾಲಿ ಸಂಸದ ಕೇಂದ್ರ ಮಂತ್ರಿ ಎ.ನಾರಾಯಣಸ್ವಾಮಿ, ಮಾಜಿ ಸಂಸದ ಜನಾರ್ಧನಸ್ವಾಮಿ, ಯುವ ಮುಖಂಡ ಎಂ.ಸಿ.ರಘಚಂದನ್ ಇವರುಗಳ ಪೈಕಿ ಯಾರಿಗಾದರೂ ಟಿಕೇಟ್ ನೀಡಲಿ.
ಇದನ್ನೂ ಓದಿ: ಚನ್ನಗಿರಿ ಮಾರುಕಟ್ಟೆಯಲ್ಲಿ ರಾಶಿ ಬೆಲೆ 49200
ಪಕ್ಷದ ವರಿಷ್ಟರು ಗೋವಿಂದ ಕಾರಜೋಳರವರಿಗೆ ಟಿಕೇಟ್ ನೀಡಿದರೆ, ಬಿಜೆಪಿ ಇಲ್ಲಿ ಕ್ಷೇತ್ರವನ್ನು ಕಳೆದುಕೊಳ್ಳವುದರಲ್ಲಿ ಅನುಮಾನವಿಲ್ಲ. ಇದನ್ನೂ ಬಿಜೆಪಿ ನಾಯಕರುಗಳು ಗಂಭೀರವಾಗಿ ಪರಿಗಣಿಸಬೇಕೆಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಒತ್ತಾಯಿಸಿದರು.
ಇದನ್ನೂ ಓದಿ: ಕಾಂಗ್ರೆಸ್ ಮುಖಂಡ ಜಿ.ಎಸ್.ಮಂಜುನಾಥ್‍ಗೆ ಜೆಎಂಎಫ್‍ಸಿ ನ್ಯಾಯಾಲಯದಿಂದ ಜಾಮೀನು
ಕರುನಾಡ ವಿಜಯಸೇನೆ ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಅಣ್ಣಪ್ಪ, ನಿಸಾರ್ ಅಹಮದ್, ಸಿ.ಜಗದೀಶ್, ಅವಿನಾಶ್, ನಾಗರಾಜ್ ಮುತ್ತು, ಪ್ರದೀಪ್, ಎನ್.ಸಂತೋಷ್, ಸುರೇಶ್, ಅಖಿಲೇಶ್, ಕಮಲಮ್ಮ ಪ್ರತಿಭಟನೆಯಲ್ಲಿ ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

