
CHITRADURGA NEWS | 17 JUNE 2024
ಚಿತ್ರದುರ್ಗ: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಗುಪ್ತಚರ ಇಲಾಖೆ ವಿಫಲವಾಗಿದೆ ಎಂದು ಸಂಸದ ಗೋವಿಂದ ಎಂ.ಕಾರಜೋಳ ದೂರಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ‘ಬೆಂಗಳೂರಿನಲ್ಲಿ ಹೊಸಬರ ಚಲನವಲನ ಗಮನಿಸಲು ಪೊಲೀಸರಿಗೆ ಸಾಧ್ಯವಾಗಿಲ್ಲ. ಶೆಡ್‌ನಲ್ಲಿಟ್ಟು ಕೊಲೆ ಮಾಡಿದರೂ ಸಹ ಗೊತ್ತಾಗಿಲ್ಲ. ಸರ್ಕಾರ ಇಲ್ಲ ಅನ್ನಿಸುತ್ತಿದೆ’ ಎಂದು ವಾಗ್ದಾಳಿ ನಡೆಸಿದರು.
‘ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳಲು ಸ್ಥಳೀಯ ಶಾಸಕರು ವಾರದ ನಂತರ ಕಾಟಾಚಾರಕ್ಕೆ ಬಂದು ಹೋಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಈವರೆಗೆ ಇತ್ತ ಕಾಲಿಟ್ಟಿಲ್ಲ. ಇದೀಗ ಗೃಹ ಸಚಿವರ ಬಾಲ ಹಿಡಿದುಕೊಂಡು ಬರುತ್ತಾರಾ’ ಎಂದ ಪ್ರಶ್ನಿಸಿದರು.

ಕ್ಲಿಕ್ ಮಾಡಿ ಓದಿ:ಗ್ಯಾರೆಂಟಿಗೆ ಹಣ ಹೊಂದಿಸಲು ಸರ್ಕಸ್ | ಸಂಸದ ಗೋವಿಂದ ಎಂ.ಕಾರಜೋಳ ವಾಗ್ದಾಳಿ
‘ಶಕ್ತಿ ಯೋಜನೆ ಮಾಡಿ ವಿದ್ಯಾರ್ಥಿಗಳನ್ನು ಬಸ್‌ನಲ್ಲಿ ಸಂಚರಿಸದಂತೆ ಮಾಡಿದ್ದಾರೆ. ಕೆಎಸ್‌ಆರ್‌ಟಿಸಿಯ ಎಲ್ಲ ಮಾರ್ಗಗಳಿಗೂ ಶಾಲೆ, ಕಾಲೇಜುಗಳಿಗಾಗಿ ವಿಶೇಷ ಬಸ್ ಬಿಡಬೇಕು’ ಎಂದು ಒತ್ತಾಯಿಸಿದರು.
‘ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಬಂದು ಹೋದ ಕಾರಣ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಿಡಿಯೂರಪ್ಪ ಅವರನ್ನು ಬಂಧಿಸುವ ಕಾರ್ಯಕ್ಕೆ ಸರ್ಕಾರ ಮುಂದಾಗಿತು. ಸತ್ತು ಹೋದ ಪ್ರಕರಣದಲ್ಲಿ 80 ವರ್ಷ ದಾಟಿದ ಹಿರಿಯರನ್ನು ಅವಮಾನ ಮಾಡುವಂತೆ ನ್ಯಾಯಾಲಯಕ್ಕೆ ಕರೆತರುವುದು ಸೇಡಿನ ರಾಜಕಾರಣ’ ಎಂದರು.
‘ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗಳನ್ನು ಶೀಘ್ರವೇ ನಡೆಸಬೇಕು. ಈ ಮೂಲಕ ಅಭಿವೃದ್ಧಿಗೆ ವೇಗ ನೀಡುವ ಕಾರ್ಯ ಆಗಬೇಕು’ ಎಂದು ಒತ್ತಾಯಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಮುರುಳಿ, ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಜಯ್ಯಣ್ಣ, ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್, ಮಾಜಿ ಶಾಸಕರಾದ ಎಸ್.ಕೆ.ಬಸವರಾಜನ್, ಗೋಪಾಲಸ್ವಾಮಿ ನಾಯಕ, ಎಸ್.ಆರ್.ಗಿರೀಶ್, ಚಿದಾನಂದ್, ವೆಂಕಟೇಶ್ ಯಾದವ್, ಕಲ್ಲೇಶಯ್ಯ ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
