CHITRADURGA NEWS | 19 AUGUST 2024
ಚಿತ್ರದುರ್ಗ: ಸಿಬ್ಬಂದಿ ನೇಮಕಾತಿ ಆಯೋಗವು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹಿಂದಿ ಅನುವಾದಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.
ಕಂಪ್ಯೂಟರ್ ಆಧಾರಿತವಾಗಿ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹಿಂದಿ ಅಥವಾ ಇಂಗ್ಲೀಷ್‌ನಲ್ಲಿ ಸಾತ್ನಕೋತ್ತರ ಪದವಿ ಪಡೆದಿರಬೇಕು. ಪದವಿಯಲ್ಲಿ ಹಿಂದಿ ಅಥವಾ ಇಂಗ್ಲೀಷ್ ವಿಷಯವನ್ನು ಕಡ್ಡಾಯವಾಗಿ ಓದಿರಬೇಕು.
ಹಿಂದಿಯಿಂದ ಇಂಗ್ಲೀಷ್ ಭಾಷಾಂತರದಲ್ಲಿ ಡಿಪ್ಲೋಮ ಪದವಿ ಪಡೆದಿರಬೇಕು ಅಥವಾ ಭಾಷಾಂತರದಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಎರಡು ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇರಬೇಕು. 18-30 ವರ್ಷದೊಳಗಿನ ವಯೋಮಿತಿ ನಿಗಿದಿ ಮಾಡಲಾಗಿದೆ.
ಕ್ಲಿಕ್ ಮಾಡಿ ಓದಿ: ತೆರೆದಿದೆ ಉದ್ಯೋಗದ ಬಾಗಿಲು | ನೇರ ನೇಮಕಾತಿ ಸಂದರ್ಶನ
ಎಸ್ಟಿ, ಎಸ್ಟಿ, ಓಬಿಸಿ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಲಿಕೆ ಇರುತ್ತದೆ. ಅರ್ಜಿ ಸಲ್ಲಿಸಲು ಆಗಸ್ಟ್ 25 ಕೊನೆ ದಿನ. ನೇಮಕಾತಿ ಪರೀಕ್ಷೆಯು ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ನಡೆಯಲಿದೆ.
ಕ್ಲಿಕ್ ಮಾಡಿ ಓದಿ: ಮುಡಾ ಅಕ್ರಮ | ಸಿದ್ದರಾಮಯ್ಯ ಬೆಂಬಲಕ್ಕೆ ಹಿಂದುಳಿದ ದಲಿತ ಮಠಾಧೀಶರು
ಹೆಚ್ಚಿನ ಮಾಹಿತಿಗೆ www.ssckkr.kar.nic.in https://ssc.nic.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ನೇಮಕಾತಿ ಆಯೋಗದ ದೂರವಾಣಿ ಸಂಖ್ಯೆ 080-25502520 ಕರೆ ಮಾಡಬಹುದು. ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕಚೇರಿ ದೂರವಾಣಿ ಸಂಖ್ಯೆ 9945587060, 7022459064 ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ಪ್ರಕಟಣೆ ತಿಳಿಸಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number