
CHITRADURGA NEWS | 22 FEBRUARY 2026
ಚಿತ್ರದುರ್ಗ: ಗುಣಮಟ್ಟದ ಶಿಕ್ಷಣ ಮತ್ತು ಶಾಲಾ ಬಲವರ್ಧನೆಗೆ ಸಮುದಾಯದ ಸಹಕಾರ ಅಗತ್ಯವಾದುದು ಎಂದು ಡಯಟ್ ಉಪನ್ಯಾಸಕ ಎಸ್.ಬಸವರಾಜು ಹೇಳಿದರು.
ಇದನ್ನೂ ಓದಿ: ಜನಗಣತಿ | ವ್ಯವಸ್ಥಿತವಾಗಿ ನಡೆಸಲು ಕಾರ್ಯಯೋಜನೆ ರೂಪಿಸಿ | ಡಿಸಿ ವೆಂಕಟೇಶ್ ಸೂಚನೆ
ತಾಲೂಕಿನ ಗುಡ್ಡದ ರಂಗವ್ವನಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ಶುಕ್ರವಾರ ಭೇಟಿ ನೀಡಿ ಹಿರಿಯ ವಿದ್ಯಾರ್ಥಿಗಳ ಕೊಡುಗೆಯಿಂದ ನಿರ್ಮಿಸಿರುವ ಸಭಾಂಗಣ ವೀಕ್ಷಿಸಿ ಮಾತನಾಡಿದ ಅವರು,
ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿ ಹಾಗೂ ಶಾಲೆಗಳನ್ನು ಬಲವರ್ಧನೆಗೊಳಿಸಲು ಸರ್ಕಾರದ ಯೋಜನೆಗಳ ಅನುಷ್ಟಾನ ಮಾಡುವಲ್ಲಿ ಸಮುದಾಯದ ಸಹಭಾಗಿತ್ವವು ಮುಖ್ಯವಾಗಿದೆ ಎಂದರು.
ಶಾಲೆಯ ಭೌತಿಕ ವಾತಾವರಣವು ಮಕ್ಕಳ ಕಲಿಕೆಯ ಮೇಲೆ ಪ್ರಭಾವ ಬೀರುತ್ತದೆ. ಉತ್ತಮ ವಾತಾವರಣದಿಂದ ಕಲಿಕೆಯು ಪರಿಣಾಮಕಾರಿಯಾಗುತ್ತದೆ. ಇದರನ್ವಯ ಶಾಲೆಯಲ್ಲಿ ಕಲಿತ ಹಿರಿಯ ವಿದ್ಯಾರ್ಥಿಗಳಿಗೆ ಶಾಲೆಯ ಜತೆ ಭಾವನಾತ್ಮಕ ಸಂಬಂಧ ಬೆಸೆಯಲು ಸರ್ಕಾರಿ ಶಾಲೆಗಳಲ್ಲಿ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದಡಿ ಹಳೆ ವಿದ್ಯಾರ್ಥಿಗಳ ಸಂಘ ರಚಿಸಲು 2024 ರಲ್ಲಿ ತಿಳಿಸಲಾಗಿತ್ತು.
ಇದನ್ನೂ ಓದಿ: ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೆ ಅನುದಾನ ಕೊಡಿಸಲು ಪ್ರಾಮಾಣಿಕ ಯತ್ನ | ಗೋವಿಂದ ಎಂ.ಕಾರಜೋಳ
ಈ ಕಾರ್ಯಕ್ರಮದಡಿ ಗುಡ್ಡದ ರಂಗವ್ವನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳು ರೂ.16 ಲಕ್ಷ ಹಣವನ್ನು ಕೊಡುಗೆಯಾಗಿ ನೀಡುವ ಮೂಲಕ ಸಭಾಂಗಣ, ಸಿಮೆಂಟ್ ರಸ್ತೆ ನಿರ್ಮಿಸಿದ್ದು ಶಾಲಾ ಭೌತಿಕ ವಾತಾವರಣವನ್ನು ಸುಂದರಗೊಳಿಸಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮುಖ್ಯ ಶಿಕ್ಷಕ ಎಚ್.ಗೋವಿಂದಪ್ಪ ಮಾತನಾಡಿ, ಪ್ರಸ್ತುತ ನಮ್ಮ ಶಾಲೆಯಲ್ಲಿ ಕಲಿತ ಹಿರಿಯ ವಿದ್ಯಾರ್ಥಿಗಳು ವ್ಯವಸಾಯ, ಶಿಕ್ಷಣ ಕ್ಷೇತ್ರ, ಅರಣ್ಯ ಇಲಾಖೆ, ವ್ಯಾಪಾರ, ಬ್ಯಾಂಕ್, ಸೇನೆ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದಡಿ ಎಲ್ಲರೂ ಸೇರಿ ಸಂಘವನ್ನು ರಚಿಸಿಕೊಂಡು 16 ಲಕ್ಷಕ್ಕೂ ಹೆಚ್ಚು ಹಣವನ್ನು ವಿನಿಯೋಗಿಸಿ ಸಭಾಂಗಣ, ಸಿ.ಸಿ ರಸ್ತೆ ಮತ್ತು ಮೈದಾನ, ಗಿಡಗಳಿಗೆ ನೀರಿನ ಸೌಲಭ್ಯಕ್ಕೆ ಪೈಪ್‌ಲೈನ್, ಕಬ್ಬಿಣದ ಗೇಟ್, ಶಾಲೆಯ ನಾಮಫಲಕವನ್ನು ನಿರ್ಮಿಸಿಕೊಟ್ಟಿದ್ದಾರೆ.
ಇದನ್ನೂ ಓದಿ: ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ SSLC ಫಲಿತಾಂಶ ಕಡಿಮೆ | ಸಚಿವ ಡಿ.ಸುಧಾಕರ್ ಅಸಮಾಧಾನ
ನಮ್ಮ ಶಾಲೆಯ ಎಲ್ಲ ಮಕ್ಕಳು ಒಂದೇ ಕಡೆ ಕುಳಿತು ಕಾರ್ಯಕ್ರಮದಲ್ಲಿ ಭಾಗವಹಿಸಲು ಸಭಾಂಗಣ ನಮಗೆ ಅತ್ಯಂತ ಅನುಕೂಲವಾಗಿದೆ. ಜತೆಗೆ ನಮ್ಮ ಶಾಲೆಯ ಭೌತಿಕ ಅಂದವನ್ನೂ ಹೆಚ್ಚಿಸಿದೆ ಎಂದು ಹಿರಿಯ ವಿದ್ಯಾರ್ಥಿಗಳ ಕಾರ್ಯಕ್ಕೆ ಅಭಿನಂದನೆ ಸಲ್ಲಿಸಿದರು.
ಶಿಕ್ಷಕರಾದ ರಷೀದಾ ಬಾನು, ಡಾ. ಎಸ್.ಸವಿತ, ಕೆ.ಎಂ.ಆರ್ ಶೋಭ, ಬಿ.ಓ ಕವಿತ, ಎಚ್.ಕೆ.ಮಹೇಶ್, ಎಚ್.ಎನ್.ಮಂಜುನಾಥ್, ಎಂ.ಎಸ್.ಕಿರಣ್‌ಕುಮಾರ್ ಮತ್ತಿತರರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
