CHITRADURGA NEWS | 07 October 2026
ಚಿತ್ರದುರ್ಗ: ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಸಿ.ಎಂ. ಸುಂದರ ರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಅಕ್ಟೋಬರ್ 07 | ರಾಗಿ ರೇಟ್ ಎಷ್ಟಿದೆ?
ಪ್ರಧಾನ ಕಾರ್ಯದರ್ಶಿಯಾಗಿ ಕೆ. ಪ್ರಕಾಶ್ ಹಾಗೂ ಖಜಾಂಚಿಯಾಗಿ ಎಸ್. ಪ್ರದೀಪ್ ಕೂಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಂಘದ ಚುನಾವಣಾ ಕಣದಲ್ಲಿದ್ದ ಎಲ್ಲಾ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಎಸ್. ಲಕ್ಷ್ಮೀನಾಥ್ ಅವರು ಸೋಮವಾರ ಅವಿರೋಧ ಆಯ್ಕೆಯನ್ನು ಘೋಷಿಸಿದರು.
ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪದವೀಧರ ಶಿಕ್ಷಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವುಗಳಿಗೆ ತುರ್ತಾಗಿ ಸ್ಪಂದಿಸುವ ಕೆಲಸ ಮಾಡಲಾಗುವುದು.
ಇದನ್ನೂ ಓದಿ: ಮಹಿಳಾ ಪತ್ರಿಕೋದ್ಯಮ ಪದವೀಧರರಿಗೆ ಇಂಟರ್ನ್ಶಿಪ್ ಅವಕಾಶ
ಶಿಕ್ಷಕರು ಮಾನಸಿಕ ಒತ್ತಡಕ್ಕೆ ಒಳಗಾಗದಂತೆ ಉತ್ತಮ ವಾತಾವರಣ ನಿರ್ಮಿಸಿ, ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಲು ಅಗತ್ಯ ಸಹಕಾರ ನೀಡಲಾಗುವುದು ಎಂದು ನೂತನ ಅಧ್ಯಕ್ಷ ಸಿ.ಎಂ. ಸುಂದರ ರಾಜ್ ತಿಳಿಸಿದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

