ಮುಖ್ಯ ಸುದ್ದಿ
Graduation: ದೇವರಾಜ್ ಅರಸ್ ಶಿಕ್ಷಣ ಸಂಸ್ಥೆ | 415ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

CHITRADURGA NEWS | 25 NOVEMBER 2024
ಚಿತ್ರದುರ್ಗ: ದೇವರಾಜ್ ಅರಸ್ ಶಿಕ್ಷಣ ಸಂಸ್ಥೆ ವತಿಯಿಂದ ಸೋಮವಾರ ಆಯೋಜಿಸಿದ್ದ ಪದವಿ ಪ್ರಮಾಣ ಸಮಾರಂಭದಲ್ಲಿ 415ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ(Graduation) ಮಾಡಲಾಯಿತು.
ಕ್ಲಿಕ್ ಮಾಡಿ ಓದಿ: ವಿದ್ಯುತ್ ಟ್ರಾನ್ಸ್‍ಫಾರ್ಮರ್ ರಿಪೇರಿಗೆ ದುಡ್ಡು ಕೊಡಬೇಡಿ | ಬೆಸ್ಕಾಂ ಸೂಚನೆ

ಪದವಿ ಪ್ರಮಾಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ದಾವಣಗೆರೆ ವಿಶ್ವವಿದ್ಯಾನಿಲಯದ ಉಪ ಕುಲಪತಿ ಡಾ.ಬಿ.ಡಿ.ಕುಂಬಾರ್, ಉನ್ನತ ಶಿಕ್ಷಣ ಜಾಗತಿಕ ಮಟ್ಟದಲ್ಲಿ ಬದಲಾವಣೆಯಾಗುತ್ತಿರುವುದರಿಂದ ತಂತ್ರಜ್ಞಾನದ ಬಗ್ಗೆ ಜ್ಞಾನ ಬೆಳೆಸಿಕೊಂಡರೆ ಗುಣಾತ್ಮಕ ಜೀವನ ನಡೆಸಬಹುದು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ರಾಜ್ಯದ ಮುಖ್ಯಮಂತ್ರಿಯಾಗಿದ್ದ ಹಿಂದುಳಿದ ವರ್ಗಗಳ ಹರಿಕಾರ ದಿ.ದೇವರಾಜ್ ಅರಸ್‍ರವರ ಹೆಸರನ್ನಿಟ್ಟುಕೊಂಡು ಆರಂಭಿಸಿದ ಸಂಸ್ಥೆ ಹೆಮ್ಮರವಾಗಿ ಬೆಳೆದು ನಿಂತಿರುವುದು ನಿಜಕ್ಕೂ ಹೆಮ್ಮೆಯ ವಿಷಯ.
ಪದವಿಯ ನಂತರ ಉದ್ಯೋಗಕ್ಕೆ ಉತ್ಸುಕರಾಗಿರುವ ನೀವುಗಳು ತಂತ್ರಜ್ಞಾನ ಬೆಳೆಸಿಕೊಂಡು ಗುಣಾತ್ಮಕ ಬದಲಾವಣೆಯನ್ನು ಶೈಕ್ಷಣಿಕ ರಂಗದಲ್ಲಿ ಅಳವಡಿಸಿಕೊಂಡು ಬೆಳೆಯಬೇಕಿದೆ. ಮಾಹಿತಿ ತಂತ್ರಜ್ಞಾನವನ್ನು ಕರಗತ ಮಾಡಿಕೊಂಡಿರುವ ವಿದ್ಯಾರ್ಥಿಗಳು ಗುಣಾತ್ಮಕ ಶಿಕ್ಷಣಕ್ಕೆ ಒತ್ತು ಕೊಡುತ್ತಿಲ್ಲದಿರುವುದು ಬೇಸರ ಸಂಗತಿ ಎಂದು ವಿಷಾಧಿಸಿದರು.
ಕ್ಲಿಕ್ ಮಾಡಿ ಓದಿ: ಹಿರಿಯೂರು | ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಕರೆಂಟ್ ಇರಲ್ಲ
ಶಿಕ್ಷಣ ಕೇವಲ ಅಂಕಕ್ಕಷ್ಟೆ ಸೀಮಿತವಾಗಬಾರದು. ಪದವಿಯ ಜೊತೆ ಕೌಶಲ್ಯವಿದ್ದಾಗ ಮಾತ್ರ ದೊಡ್ಡ ಉದ್ಯಮಿಯಾಗಿ ಸ್ವಾವಲಂಭಿ ಬದುಕು ಕಂಡುಕೊಳ್ಳಬಹುದು.
25 ರಿಂದ 30 ಲಕ್ಷ ಮಕ್ಕಳು ಭಾರತದಿಂದ ವಿದೇಶಕ್ಕೆ ಶಿಕ್ಷಣಕ್ಕಾಗಿ ಹೋಗುತ್ತಿದ್ದಾರೆ. ಪಾಶ್ಚಿಮಾತ್ಯ ರಾಷ್ಟ್ರಗಳಿಗೆ ನಮ್ಮ ಮಕ್ಕಳು ಹೋಗಿ ಬರುವ ಅವಕಾಶವನ್ನು ದಾವಣಗೆರೆ ವಿಶ್ವವಿದ್ಯಾನಿಲಯದಿಂದ ಕಲ್ಪಿಸಲಾಗುವುದು ಎಂದು ಹೇಳಿದರು.
ದೇವರಾಜ್ ಅರಸ್ ಶಿಕ್ಷಣ ಸಂಸ್ಥೆ ಸಂಸ್ಥಾಪಕರು ಹಾಗೂ ಶಾಸಕ ಡಾ.ಎಂ.ಚಂದ್ರಪ್ಪ ಮಾತನಾಡಿ, ಉದ್ಯೋಗಕ್ಕಾಗಿಯೇ ಪದವಿ ಪಡೆಯುವಂತಾಗಬಾರದು. ಪ್ರತಿಯೊಬ್ಬರಲ್ಲಿಯೂ ಸಾಧನೆಯ ಛಲವಿದ್ದಾಗ ಮಾತ್ರ ಜೀವನದಲ್ಲಿ ಸ್ವ-ಉದ್ಯೋಗಿಗಳಾಗಬಹುದು.
ಪದವಿ ಸರ್ಟಿಫಿಕೇಟ್ ಕೇವಲ ಅಂಕಗಳಿಗಷ್ಟೆ ಸೀಮಿತವಾಗಬಾರದು. ಜ್ಞಾನ ಹೆಚ್ಚಿಸಿಕೊಳ್ಳಲು ಸಹಕಾರಿಯಾಗಬೇಕೆಂದು ಹೇಳಿದರು.
ಕ್ಲಿಕ್ ಮಾಡಿ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ ರೇಟ್ ಎಷ್ಟಿದೆ?
ನಮ್ಮ ಸಂಸ್ಥೆಯಲ್ಲಿ ನರ್ಸಿಂಗ್ ವ್ಯಾಸಂಗ ಮಾಡಿ ಹೊರ ಹೋದವರು ಈಗ ದೇಶ-ವಿದೇಶಗಳಲ್ಲಿ ಕೆಲಸ ಮಾಡುತ್ತಿರುವುದು ನಮಗೆ ಹೆಮ್ಮೆಯಾಗಿದೆ. ಸಾಮಾಜಿಕ ಪ್ರಜ್ಞೆ ಬೆಳೆಸಿಕೊಂಡು ಗುರು-ಹಿರಿಯರು, ಪೋಷಕರು ಹಾಗೂ ಸಮಾಜಕ್ಕೆ ಗೌರವ ಬರುವ ರೀತಿಯಲ್ಲಿ ನಡೆದುಕೊಳ್ಳಿ ಎಂದು ಪದವಿ ಪ್ರಮಾಣ ಸ್ವೀಕರಿಸಿದ ವಿದ್ಯಾರ್ಥಿಗಳಿಗೆ ತಿಳಿಸಿದರು.
ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್ ಮಾತನಾಡಿ, 40 ವರ್ಷಗಳ ಹಿಂದೆ ಆರಂಭಗೊಂಡ ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯಲ್ಲಿ ಐದು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ನಾಲ್ಕು ಪದವಿ ಕಾಲೇಜುಗಳಿಂದ 415 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪದವಿ ಪ್ರಮಾಣ ಸ್ವೀಕರಿಸುತ್ತಿರುವುದು ಎಲ್ಲಿಲ್ಲದ ಖುಷಿ ಕೊಟ್ಟಿದೆ ಎಂದರು.
ನಮ್ಮ ಸಂಸ್ಥೆಯಲ್ಲಿ ಓದಿದವರಲ್ಲಿ 3700 ವಿದ್ಯಾರ್ಥಿಗಳು ಶಿಕ್ಷಕರುಗಳಾಗಿದ್ದಾರೆ. 2017-18 ರಲ್ಲಿ ಆದ್ಯ ಕಾಲೇಜ್ ಆಫ್ ಫಾರ್ಮಸಿ ತೆರೆಯಲಾಗಿದೆ. ಪ್ರಕೃತಿ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಮೆಡಿಕಲ್ ಕಾಲೇಜು ಆರಂಭಿಸುವ ಚಿಂತನೆಯಿದೆ ಎಂದು ತಿಳಿಸಿದರು.
ಕ್ಲಿಕ್ ಮಾಡಿ ಓದಿ: ಇನ್ನೋವಾ – ಫಾರ್ಚೂನರ್ ನಡುವೆ ಡಿಕ್ಕಿ | 8 ಜನರಿಗೆ ಗಾಯ
ಈ ವೇಳೆ ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಚಂದ್ರಕಲಾ, ಅಧ್ಯಕ್ಷೆ ಯಶಸ್ವಿನಿ ಕಿರಣ್, ವೆಂಕಟೇಶ್ವರ ಬಿ.ಇ.ಡಿ.ಕಾಲೇಜಿನ ಪ್ರಾಚಾರ್ಯ ಡಾ.ಬಿ.ಸಿ.ಅನಂತರಾಮು, ವೆಂಕಟೇಶ್ವರ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಎ.ಜೆ.ಶಿವಕುಮಾರ್, ಎಸ್.ಎಲ್.ವಿ.ಸ್ಕೂಲ್ ಅಂಡ್ ಕಾಲೇಜ್ ಆಫ್ ನರ್ಸಿಂಗ್ ಪ್ರಿನ್ಸಿಪಾಲ್ ಎಂ.ಎಂ.ಮಹಾಂತೇಶ್, ಆದ್ಯಾ ಕಾಲೇಜ್ ಆಫ್ ಫಾರ್ಮಸಿ ಪ್ರಾಚಾರ್ಯಡಾ.ಎಂ.ಎನ್.ಪಾಲಾಕ್ಷ ಇದ್ದರು.
