CHITRADURGA NEWS | 07 May 2026
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಕರವಸೂಲಿಗಾರರ ಹುದ್ದೆಗಳಿಗೆ ನೇರ ನೇಮಕಾತಿ ಮಾಡುವ ಸಂಬಂಧ ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ವೆಬ್‌ಸೈಟ್ chitradurga.nic.in ನಲ್ಲಿ ಪ್ರಕಟಿಸಲಾಗಿದ್ದು, ಆಕ್ಷೇಪಣೆ ಸಲ್ಲಿಸಲು ಮೇ 22 ಕೊನೆಯ ದಿನ.
ಇದನ್ನೂ ಓದಿ: ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
ಈ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ದಿನಾಂಕ 22.05.2026 ರ ಸಂಜೆ 5 ಗಂಟೆಯೊಳಗೆ ಚಿತ್ರದುರ್ಗದ ಜಿಲ್ಲಾ ಪಂಚಾಯತ್ ಕಚೇರಿಗೆ ಸಲ್ಲಿಸಬಹುದಾಗಿದೆ.
ನಿಗದಿತ ಸಮಯದ ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾ ಪಂಚಾಯತ್ ಪ್ರಕಟಣೆ ತಿಳಿಸಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
