ಮುಖ್ಯ ಸುದ್ದಿ
ಗ್ರಾಮ ಪಂಚಾಯತಿ ಉಪಚುನಾವಣೆ | ವೇಳಾಪಟ್ಟಿ ಪ್ರಕಟ
CHITRADURGA NEWS | 09 may 25
ಚಿತ್ರದುರ್ಗ: ರಾಜ್ಯ ಚುನಾವಣಾ ಆಯೋಗವು ಚಿತ್ರದುರ್ಗ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಖಾಲಿ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿದೆ.
ಚುನಾವಣಾ ವೇಳಾಪಟ್ಟಿ ವಿವರ ಇಂತಿದೆ. ಮೇ 08 ರಿಂದ 28 ರವರೆಗೆ ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರಲಿದೆ. ಮೇ.08ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುವುದು.
ಮೇ.14 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. ಮೇ.15ರಂದು ನಾಮಪತ್ರಗಳ ಪರಿಶೀಲನೆ, ಮೇ.17 ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಮತದಾನ ಅವಶ್ಯವಿದ್ದರೆ ಮೇ.25ರಂದು ಬೆಳಿಗ್ಗೆ 7 ರಿಂದ ಸಂಜೆ 5 ರವರೆಗೆ ಮತದಾನ ನಡೆಸಲಾಗುವುದು.
ಮರು ಮತದಾನದ ಅವಶ್ಯಕತೆ ಇದ್ದರೆ ಮೇ.27ರಂದು ಬೆಳಿಗ್ಗೆ 7 ರಿಂದ ಸಂಜೆ 5 ರವರೆಗೆ ಮತದಾನ ನಡೆಸಲಾಗುವುದು. ಮೇ.28ರಂದು ಬೆಳಿಗ್ಗೆ 8 ಗಂಟೆಯಿಂದ ತಾಲ್ಲೂಕು ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುವುದು.
Also Read: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
ಮೇ.28ರಂದು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.