CHITRADURGA NEWS | 30 APRIL 2026
ಚಿತ್ರದುರ್ಗ: ಗ್ರಾಮೀಣ ಮಟ್ಟದ ಅಹವಾಲುಗಳನ್ನು ಆಲಿಸಲು ಚಿತ್ರದುರ್ಗ ಜಿಲ್ಲಾ ಪಂಚಾಯತ್ ಆರಂಭಿಸಿರುವ ‘ಗ್ರಾಮ-ಫೋನ್‘ ಉಚಿತ ಸಹಾಯವಾಣಿಯು ಸಾರ್ವಜನಿಕರಲ್ಲಿ ಭರವಸೆ ಮೂಡಿಸಿದೆ. 20 ನವೆಂಬರ್ 2025 ರಂದು ಪ್ರಾರಂಭವಾದ ಈ ಸೇವೆಯು ಇದುವರೆಗೂ ಜಿಲ್ಲೆಯ ಗ್ರಾಮೀಣ ಭಾಗದ ಸುಮಾರು 300 ದೂರುಗಳನ್ನು ಸ್ವೀಕರಿಸಿ, ಅವುಗಳಿಗೆ ಸೂಕ್ತ ಪರಿಹಾರ ಒದಗಿಸುವಲ್ಲಿ ಯಶಸ್ವಿಯಾಗಿದೆ ಎಂದು ಜಿ.ಪಂ.ಸಿಇಓ ಡಾ.ಆಕಾಶ್ ತಿಳಿಸಿದ್ದಾರೆ.
ಇದನ್ನೂ ಓದಿ: ಹಿರಿಯೂರು | ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ
ಸಹಾಯವಾಣಿಯ ಕಾರ್ಯವೈಖರಿ:
ಜಿಲ್ಲಾ ಪಂಚಾಯತ್ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಈ ಸಹಾಯವಾಣಿ 1800-425-1978ಕ್ಕೆ ಸಾರ್ವಜನಿಕರು ಕರೆ ಮಾಡಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು.
ಸ್ವೀಕೃತವಾದ ಪ್ರತಿಯೊಂದು ದೂರಿಗೂ ಸಂಬಂಧಿಸಿದಂತೆ ದೂರುದಾರರ ಮೊಬೈಲ್ ಸಂಖ್ಯೆಗೆ ಸಂದೇಶ ರವಾನಿಸಲಾಗುತ್ತದೆ. ನಂತರ ಆಯಾ ಇಲಾಖೆಯ ಅಧಿಕಾರಿಗಳಿಗೆ ದೂರುಗಳನ್ನು ವರ್ಗಾಯಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ.
ಸಹಾಯವಾಣಿ ಪ್ರಾರಂಭವಾದಾಗಿನಿಂದ ಮನರೇಗಾ 42, ಗ್ರಾಮೀಣ ಕುಡಿಯುವ ನೀರಿಗೆ 84, ನೈರ್ಮಲ್ಯ 39, ವಸತಿ 14, ಗ್ರಾಮ ಪಂಚಾಯಿತಿ ಆಡಳಿತ ಮತ್ತು ಸಿಬ್ಬಂದಿ ಕುರಿತು 36, ಇ-ಸ್ವತ್ತಿಗೆ 85 ಸೇರಿ ಒಟ್ಟು 300 ಕರೆಗಳು ಬಂದಿವೆ. ಇವುಗಳಿಗೆ ಸ್ಪಂದಿಸಿ ಕೂಡಲೆ ಪರಿಹಾರ ನೀಡಲಾಗಿದೆ.
ಇದನ್ನೂ ಓದಿ: ಜಿಲ್ಲಾ ಯಾದವ ಗೊಲ್ಲರ ಸಂಘಕ್ಕೆ ಚುನಾವಣೆ | ವೇಳಾಪಟ್ಟಿ ಪ್ರಕಟ
ಮುಂಬರುವ ದಿನಗಳಲ್ಲಿ ವಿಶೇಷವಾಗಿ ‘ಕುಡಿಯುವ ನೀರಿನ’ ಪೂರೈಕೆಗೆ ಸಂಬಂಧಿಸಿದಂತೆ ಉದ್ಭವಿಸಬಹುದಾದ ಸಮಸ್ಯೆಗಳನ್ನು ಪರಿಹರಿಸಲು ಈ ಸಹಾಯವಾಣಿ ಹೆಚ್ಚಿನ ಒತ್ತು ನೀಡಲಿದೆ.
ಗ್ರಾಮೀಣ ಭಾಗದ ಜನರು ಯಾವುದೇ ಕುಂದುಕೊರತೆಗಳಿದ್ದಲ್ಲಿ ಈ ಉಚಿತ ಸಹಾಯವಾಣಿಯ ಸದುಪಯೋಗ ಪಡಿಸಿಕೊಳ್ಳುವಂತೆ ಜಿ.ಪಂ.ಸಿಇಓ ಡಾ.ಆಕಾಶ್ ಕೋರಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

