CHITRADURGA NEWS | 24 NOVEMBER 2024
ಚಿತ್ರದುರ್ಗ: ನಗರದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ತಾತ್ಕಾಕವಾಗಿ ಪ್ರಾರಂಭವಾಗಿರುವ ಕೇಂದ್ರೀಯಾ ವಿದ್ಯಾಲಯಕ್ಕೆ 33.50 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ.
2026-27 ನೇ ಸಾಲಿಗೆ ಈಗಾಗಲೇ ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ತಾತ್ಕಾಲಿವಾಗಿ ಪ್ರಾರಂಭಿಸಲಾಗಿದೆ.
ಇದನ್ನೂ ಓದಿ:ರಸ್ತೆ ಅಪಘಾತ ಪ್ರಕರಣ | ಬೋರ್ ವೆಲ್ ಲಾರಿ ಹಾಗೂ ಈಚರ್ ಗಾಡಿ ಚಾಲಕರಿಗೆ ಶಿಕ್ಷೆ
ಚಿತ್ರದುರ್ಗ ನಗರಕ್ಕೆ ಹೊಂದಿಕೊಂಡಿರುವ ಜಾಲಿಕಟ್ಟೆ ಬಳಿ 5 ಎಕರೆ ಜಾಗವನ್ನು ಕೇಂದ್ರೀಯಾ ವಿದ್ಯಾಲಯ ಹೊಸ ಕಟ್ಟಡ ನಿರ್ಮಾಣಕ್ಕಾಗಿ ಹಂಚಿಕೆ ಮಾಡಲಾಗಿತ್ತು. ಈ ಜಾಗದಲ್ಲಿ ಕೇಂದ್ರೀಯ ವಿದ್ಯಾಲಯ ನೂತನ ಕಟ್ಟಡವನ್ನು ನಿರ್ಮಾಣ ಮಾಡಲು ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರದ ಶಿಕ್ಷಣ ಸಚಿವರಾದ ಪ್ರಲ್ಹಾದ ಜೋಷಿಯವರಿಗೆ ಮನವಿ ಮಾಡಲಾಗಿತ್ತು. ಮನವಿಗೆ ಸ್ಪಂದಿಸಿರುವ ಶಿಕ್ಷಣ ಸಚಿವರು ಚಿತ್ರದುರ್ಗದ ಕೇಂದ್ರೀಯಾ ವಿದ್ಯಾಲಯ ನೂತನ ಕಟ್ಟಡ ನಿರ್ಮಾಣಕ್ಕೆ ರೂ.33.50 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ: ಬಿ.ಎಸ್ಸಿ, ಜಿಎನ್ಎಂ ನರ್ಸಿಂಗ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
ಜಾಲಿಕಟ್ಟೆ ಸರ್ವೆ ನಂ.24 ರಲ್ಲಿ ಹಂಚಿಕೆಯಾಗಿರುವ 5 ಎಕರೆ ಜಾಗದಲ್ಲಿ 1 ನೇ ತರಗತಿಯಿಂದ 10 ನೇ ತರಗತಿಯವರೆಗೆ 2 ಸೆಕ್ಷನ್ಗಳ ಶಾಲಾ ಕಟ್ಟಡ ( ಅಂದಾಜು 25 ಕೊಠಡಿಗಳು), 09 ಸಿಬ್ಬಂದಿ ವಸತಿಗೃಹಗಳು, ಮತ್ತು ಶಾಲಾ ಆವರಣದ ಅಭಿವೃದ್ದಿ ಕಾಮಗಾರಿಗಾಗಿ ರೂ.33.50 ಕೋಟಿ ಅನುದಾನ ಬಿಡುಗಡೆಯಾಗಿದೆ, ಉತ್ತರ ಪ್ರದೇಶದ ಯು.ಪಿ. ಜಲನಿಗಮ್ ಸರ್ಕಾರಿ ಸಂಸ್ಥೆಯು ಈ ಕಾಮಗಾರಿಗೆ ಅಂದಾಜು ಪಟ್ಟಿ ತಯಾರಿಸಿದ್ದು, ಈಗಾಗಲೇ ಟೆಂಡರ್ ಪ್ರಕ್ರಿಯೆಯನ್ನೂ ಸಹ ಪೂರ್ಣಗೊಳಿಸಲಾಗಿದೆ.
ಇದನ್ನೂ ಓದಿ:ಸ್ವಯಂ ಉದ್ಯೋಗ, ವಾಹನ ಖರೀದಿಗೆ ಸಹಾಯಧನ | ಅರ್ಜಿ ಅಹ್ವಾನ
ಶೀಘ್ರದಲ್ಲಿ ಜಾಲಿಕಟ್ಟೆ ಬಳಿ ನೂತನ ಕೇಂದ್ರಿಯ ವಿದ್ಯಾಶಾಲಾ ಸಮುಚ್ಚಯಕ್ಕೆ ಶಂಕುಸ್ಥಾಪನೆ ನೆರವೆರಿಸಲಾಗುವುದು ಎಂದು ಸಂಸದ ಗೋವಿಂದ ಕಾರಜೋಳ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

